ಪ್ಲಾಸ್ಟಿಕ್, ಜವಳಿ, ಔಷಧ ತಯಾರಿಕೆ, ರಾಸಾಯನಿಕ ಮತ್ತು ವಾಹನ ಉತ್ಪಾದನಾ ಉದ್ಯಮಗಳಿಗೆ ಸಮಾಧಾನ

ನವದೆಹಲಿ – ಕೇಂದ್ರ ಹಣಕಾಸು ಸಚಿವಾಲಯವು ಹಲವಾರು ಪ್ರಮುಖ ಪೆಟ್ರೋಕೆಮಿಕಲ್ ಉತ್ಪನ್ನಗಳ ಮೇಲಿನ ಸಂಪೂರ್ಣ ಸೀಮಾ ಸುಂಕವನ್ನು ಮನ್ನಾ ಮಾಡಲು ನಿರ್ಧರಿಸಿದೆ. ಈ ರಿಯಾಯಿತಿಯು 30 ಜೂನ್ 2026 ರವರೆಗೆ ಜಾರಿಯಲ್ಲಿರಲಿದೆ.
40 ಪೆಟ್ರೋಕೆಮಿಕಲ್ ಉತ್ಪನ್ನಗಳ ಮೇಲಿನ ಸೀಮಾ ಸುಂಕವನ್ನು ಮನ್ನಾ ಮಾಡುವ ಈ ನಿರ್ಧಾರದಿಂದ ಪ್ಲಾಸ್ಟಿಕ್, ಪ್ಯಾಕೇಜಿಂಗ್, ಜವಳಿ, ಔಷಧ ತಯಾರಿಕೆ, ರಾಸಾಯನಿಕ ಮತ್ತು ವಾಹನ ಉತ್ಪಾದನೆಯಂತಹ ಕೈಗಾರಿಕೆಗಳಿಗೆ ಹೆಚ್ಚಿನ ಲಾಭವಾಗಲಿದೆ ಎಂದು ಕೇಂದ್ರ ಸರಕಾರ ತಿಳಿಸಿದೆ. ಅಲ್ಲದೆ, ಇದರಿಂದ ಗ್ರಾಹಕರ ಮೇಲಿನ ಹೊರೆಯೂ ಕಡಿಮೆಯಾಗಲಿದೆ.
ಕೇಂದ್ರ ಸರಕಾರದ ಪ್ರಕಾರ, ಕಚ್ಚಾ ವಸ್ತುಗಳ ಪೂರೈಕೆಯನ್ನು ಸುಗಮಗೊಳಿಸಲು ಮತ್ತು ಎಲ್ಲಾ ವಲಯಗಳಲ್ಲಿ ಹಣದುಬ್ಬರವನ್ನು ನಿಯಂತ್ರಣದಲ್ಲಿಡಲು ಈ 40 ಪೆಟ್ರೋಕೆಮಿಕಲ್ ಉತ್ಪನ್ನಗಳ ಮೇಲಿನ ಸೀಮಾ ಸುಂಕ ಮನ್ನಾ ಮಾಡಿರುವುದು ಒಂದು ತಾತ್ಕಾಲಿಕ ಕ್ರಮವಾಗಿದೆ. ಅಮೆರಿಕ-ಇರಾನ್ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆ, ಹಾರ್ಮುಜ್ ಜಲಸಂಧಿಯಂತಹ ಪ್ರಮುಖ ಸಮುದ್ರ ಮಾರ್ಗಗಳಿಗೆ ಇರುವ ಅಪಾಯ ಮತ್ತು ಇಂಧನ ಮೂಲಸೌಕರ್ಯಗಳ ಮೇಲಿನ ಸಾಂದರ್ಭಿಕ ದಾಳಿಗಳಿಂದಾಗಿ ಪಶ್ಚಿಮ ಏಷ್ಯಾದಲ್ಲಿ ಉಂಟಾಗಿರುವ ಬಿಕ್ಕಟ್ಟು ಜಾಗತಿಕ ವ್ಯಾಪಾರದ ಮೇಲೆ ಪರಿಣಾಮ ಬೀರಲಾರಂಭಿಸಿದೆ. ಈ ಹಿನ್ನೆಲೆಯಲ್ಲಿ ಸರಕಾರ ಈ ಮಹತ್ವದ ನಿರ್ಧಾರ ತೆಗೆದುಕೊಂಡಿದೆ.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!