
ಕೋಲಕಾತಾ: ಪಶ್ಚಿಮ ಬಂಗಾಳದಲ್ಲಿ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಅವರ ಮೇಲೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಕಾರ್ಯಕರ್ತರು ಹಲ್ಲೆ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ. ಬಂಗಾಳದ ಬಹರಾಂಪುರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಧೀರ್ ರಂಜನ್ ಚೌಧರಿ ಅವರು ತಮ್ಮ ಬೆಂಬಲಿಗರೊಂದಿಗೆ ಪ್ರಚಾರ ನಡೆಸುತ್ತಿದ್ದಾಗ ಟಿಎಂಸಿ ಕಾರ್ಯಕರ್ತರು ಅವರನ್ನು ತಡೆದರು. ಈ ಘಟನೆಯ ವಿಡಿಯೋದಲ್ಲಿ ಟಿಎಂಸಿ ಕಾರ್ಯಕರ್ತರು ಕಾಂಗ್ರೆಸ್ ಕಾರ್ಯಕರ್ತರನ್ನು ತಳ್ಳುತ್ತಿರುವುದು ಕಂಡುಬಂದಿದೆ. ಅಧೀರ್ ರಂಜನ್ ಅವರನ್ನೂ ಸಹ ತಳ್ಳಲಾಗಿದೆ ಎಂಬುದು ವಿಡಿಯೋದಲ್ಲಿ ತಿಳಿದುಬಂದಿದೆ. ಈ ಘಟನೆಯು ಟಿಎಂಸಿ ನಗರಸಭಾ ಸದಸ್ಯ ಭೀಷ್ಮದೇವ್ ಕರ್ಮಾಕರ್ ಅವರ ಸಮ್ಮುಖದಲ್ಲೇ ನಡೆದಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.
ಕೇರಳ: ಸಂಸದ ಶಶಿ ತರೂರ್ ಅವರ ಬೆಂಗಾವಲು ಪಡೆಯ ಮೇಲೆ ದಾಳಿ !
ಕೇರಳದ ಮಲಪ್ಪುರಂನ ವಂದೂರ್‌ನಲ್ಲಿ ಚುನಾವಣಾ ಪ್ರಚಾರ ನಡೆಸುತ್ತಿದ್ದಾಗ ಕಾಂಗ್ರೆಸ್ ಸಂಸದ ಶಶಿ ತರೂರ್ ಅವರ ಬೆಂಗಾವಲು ಪಡೆಯನ್ನು ಕೆಲವು ದುಷ್ಕರ್ಮಿಗಳು ತಡೆದರು. ಈ ವೇಳೆ ಶಶಿ ತರೂರ್ ಅವರ ಅಂಗರಕ್ಷಕರು ಮತ್ತು ಚಾಲಕನ ಮೇಲೆ ದಾಳಿ ನಡೆಸಲಾಗಿದೆ. ಈ ದಾಳಿಯಲ್ಲಿ ಶಶಿ ತರೂರ್ ಅವರು ಸುರಕ್ಷಿತವಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಒಬ್ಬ ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ.
ಸಂಪಾದಕೀಯ ನಿಲುವುತೃಣಮೂಲ ಕಾಂಗ್ರೆಸ್ಸಿನ ಇಂತಹ (ಟಿಎಂಸಿ) ಕಾರ್ಯಕರ್ತರ ಅಪರಾಧ ಮನೋಭಾವದಿಂದಾಗಿ ಬಂಗಾಳದಲ್ಲಿ ಅರಾಜಕತೆ ಸೃಷ್ಟಿಯಾಗಿದೆ ! |
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!