ಹುಬ್ಬಳ್ಳಿ ಯಿಂದ ಲವ್ ಜಿಹಾದ್‌ನ ಮತ್ತೊಂದು ಪ್ರಕರಣ ಬೆಳಕಿಗೆ!

ಹುಬ್ಬಳ್ಳಿ – ಇಲ್ಲಿ ಸಮೀರ್ ಮುಲ್ಲಾ ಮಾಡಿದ್ದ ಲವ್ ಜಿಹಾದ್ ಘಟನೆ ಇನ್ನೂ ಹಸಿಯಾಗಿರುವಾಗಲೇ ಈಗ ಇದೇ ರೀತಿಯ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಮುಫೀಸ್ ಮಿಯನ್ನವರ್ ಎಂಬ ಮುಸಲ್ಮಾನನು ಹಿಂದೂ ಯುವತಿಯೊಬ್ಬಳನ್ನು ಪ್ರೀತಿಯ ಬಲೆಯಲ್ಲಿ ಸಿಲುಕಿಸಿ ಆಕೆಯ ಮೇಲೆ ಹಲವು ಬಾರಿ ಅತ್ಯಾಚಾರವೆಸಗಿದ್ದಾನೆ. ಆಕೆಯ ಅಶ್ಲೀಲ ವಿಡಿಯೋಗಳನ್ನು ಮಾಡಿ ಬೆದರಿಕೆ ಹಾಕಿದ್ದಾನೆ. ಆಕೆಯನ್ನು ಮದುವೆಯಾಗುವ ಆಮಿಷವೊಡ್ಡಿ ಆಕೆಯ ಮೇಲಿನ ದೌರ್ಜನ್ಯ ಮುಂದುವರೆಸಿದ್ದನು. ಮುಫೀಸ್ ಆಗಸ್ಟ್ ೨೦೨೫ ರಲ್ಲಿ ಧಾರವಾಡದಲ್ಲಿ ಸಂತ್ರಸ್ತೆಗೆ ತಿಳಿಯದಂತೆ ನೋಂದಣಿ ಪದ್ಧತಿಯ (ರಿಜಿಸ್ಟರ್ ಮ್ಯಾರೇಜ್) ಮೂಲಕ ವಿವಾಹವಾಗಲು ಸಿದ್ಧತೆ ನಡೆಸಿದ್ದನು. ಸಂತ್ರಸ್ತೆಯ ಸಂಬಂಧಿಕರಿಗೆ ಈ ಮಾಹಿತಿ ತಿಳಿದ ತಕ್ಷಣ ಅವರು ಮದುವೆಯಾಗಲು ಬಿಡಲಿಲ್ಲ. ಆ ಬಳಿಕವೂ ಮುಫೀಸ್ ಯುವತಿಗೆ ಬೆದರಿಕೆ ಹಾಕುವುದನ್ನು ಮುಂದುವರಿಸಿದ್ದನು. ಯುವತಿ ಮನೆಯಲ್ಲಿ ಒಂಟಿಯಾಗಿದ್ದಾಗ ಬಲವಂತವಾಗಿ ಮನೆಗೆ ನುಗ್ಗಿ ಆಕೆಯ ಮೇಲೆ ಅತ್ಯಾಚಾರವೆಸಗಿರುವ ಆರೋಪ ಆತನ ಮೇಲಿದೆ. ಈ ಬಗ್ಗೆ ಯಾರಿಗಾದರೂ ಹೇಳಿದರೆ ಕೊಲೆ ಮಾಡುವುದಾಗಿ ಜೀವಬೆದರಿಕೆ ಕೂಡ ಹಾಕಿದ್ದನು. ಹಿಂದುತ್ವವಾದಿ ಸಂಘಟನೆಗಳ ನೆರವಿನೊಂದಿಗೆ ಯುವತಿಯು ಪೊಲೀಸರಿಗೆ ದೂರು ನೀಡಿದ್ದು, ಮುಫೀಸ್ ವಿರುದ್ಧ ಪ್ರಕರಣ ದಾಖಲಾಗಿದೆ.
ಸಂಪಾದಕೀಯ ನಿಲುವುಕಾಂಗ್ರೆಸ್ ಆಡಳಿತವಿರುವ ರಾಜ್ಯದಲ್ಲಿ ‘ಲವ್ ಜಿಹಾದ್’ ವಿರೋಧಿ ಕಾನೂನು ಇದ್ದಾಗ್ಯೂ, ಅಲ್ಲಿ ಪಾಕಿಸ್ತಾನಿ ಆಡಳಿತದಂತಹ ಪರಿಸ್ಥಿತಿ ಇರುವುದರಿಂದ ಇಂತಹ ಹಿಂದೂ ವಿರೋಧಿ ಘಟನೆಗಳು ನಡೆಯುತ್ತಿವೆ. ಈ ಪರಿಸ್ಥಿತಿಯನ್ನು ಬದಲಾಯಿಸಲು ಹಿಂದೂ ರಾಷ್ಟ್ರವೇ ಬೇಕು! |
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!