
ಮೋತಿಹಾರಿ (ಬಿಹಾರ) – ರಾಜ್ಯದ ಪೂರ್ವ ಚಂಪಾರಣ ಜಿಲ್ಲೆಯು ಜಿಹಾದಿ ಚಟುವಟಿಕೆಗಳ ಕಾರಣಕ್ಕಾಗಿ ಮತ್ತೊಮ್ಮೆ ಸುದ್ದಿಯಲ್ಲಿದೆ. ಜಿಲ್ಲೆಯ ಚಕಿಯಾ ಪರಿಸರದ ಗವಂದರಾ ಗ್ರಾಮದ ಮದರಸಾದ ಮೇಲೆ ಪೊಲೀಸರು ಭಾರಿ ಕಾರ್ಯಾಚರಣೆ ನಡೆಸಿ ದಾಳಿ ಮಾಡಿದ್ದಾರೆ. ಈ ವೇಳೆ ಒಂದು ಅತ್ಯಾಧುನಿಕ ಪಿಸ್ತೂಲನ್ನು ವಶಪಡಿಸಿಕೊಳ್ಳಲಾಗಿದ್ದು, ಮೂವರನ್ನು ಬಂಧಿಸಲಾಗಿದೆ. ಮೋತಿಹಾರಿಯ ಪೊಲೀಸ್ ಅಧೀಕ್ಷಕರಾದ ಸ್ವರ್ಣ ಪ್ರಭಾತ ಅವರು ಸ್ವತಃ ಈ ಮಾಹಿತಿಯನ್ನು ಮಾಧ್ಯಮಗಳಿಗೆ ನೀಡಿದರು.
ಸದರಿ ಮದರಸಾಗೆ ತಕ್ಷಣವೇ ಬೀಗ ಜಡಿಯಲಾಗಿದೆ. ಯಾವುದೋ ದೊಡ್ಡ ದಾಳಿ ನಡೆಸುವ ಉದ್ದೇಶದಿಂದಲೇ ಈ ಶಸ್ತ್ರಾಸ್ತ್ರಗಳನ್ನು ಸಂಗ್ರಹಿಸಿಡಲಾಗುತ್ತಿತ್ತು ಎಂದು ಪೊಲೀಸರು ಸಂಶಯ ವ್ಯಕ್ತಪಡಿಸಿದ್ದಾರೆ. ಇದೇ ಮದರಸಾದಿಂದ ಎರಡೂವರೆ ವರ್ಷಗಳ ಹಿಂದೆ, ನಿಷೇಧಿತ ‘ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ’ದ ಪ್ರಮುಖ ಸದಸ್ಯ ಸುಲ್ತಾನ್ ಉರ್ಫ್ ಉಸ್ಮಾನ್ ಉರ್ಫ್ ಯಾಕೂಬ್ ಎಂಬಾತನನ್ನು ಪೊಲೀಸರು ಬಂಧಿಸಿದ್ದರು. ಮದರಸಾದಲ್ಲಿ ಶಸ್ತ್ರಾಸ್ತ್ರಗಳಿರುವ ಬಗ್ಗೆ ಗುಪ್ತ ಮಾಹಿತಿ ಲಭಿಸಿದ ಹಿನ್ನೆಲೆಯಲ್ಲಿ ಈ ಕಾರ್ಯಾಚರಣೆ ನಡೆಸಲಾಗಿದೆ ಎಂದು ಪೊಲೀಸ್ ಅಧೀಕ್ಷಕ ಸ್ವರ್ಣ ಪ್ರಭಾತ ತಿಳಿಸಿದ್ದಾರೆ.
ಸಂಪಾದಕೀಯ ನಿಲುವು
|
ಶ್ರೀರಾಮ ಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ದೊಡ್ಡ ವ್ಯಕ್ತಿಗಳನ್ನು ಹೊರಗಿಡಲಾಗಿದೆ !
‘ಮ್ಯೂಸಿಕ್ ಕಾನ್ಸರ್ಟ್’ಗಳಲ್ಲಿ ಇನ್ನು ಮುಂದೆ ಮದ್ಯಪಾನಕ್ಕೆ ಅನುಮತಿಯಿಲ್ಲ ! – ಯೋಗೇಶ ಕದಮ್, ಗೃಹ ರಾಜ್ಯಸಚಿವರು
ವೈದಿಕ ಕಾಲದಲ್ಲಿ ಮಹಿಳೆಯರಿಗೆ ಗೌರವ ಸಿಗುತ್ತಿತ್ತು ಎಂದು ಹೇಳುತ್ತಾ ಮನುಸ್ಮೃತಿಯ ಶ್ಲೋಕದ ಉಲ್ಲೇಖ!
‘ ಮಹಾತ್ಮ ಫುಲೆ ವಾಡಾ’ ಆವರಣದಲ್ಲಿ ವಟಪೂಜೆ ನಿಷೇಧ ವಾಪಸ್!
ದೇಶದ 3 ರಾಜ್ಯಗಳಲ್ಲಿ ಲವ್ ಜಿಹಾದ್ನ 4 ಘಟನೆಗಳು ಬೆಳಕಿಗೆ!
ಮಧ್ಯಪ್ರದೇಶದ ಬಡನಗರದಲ್ಲಿ ಕ್ರೇನ್ ಮೂಲಕ ಕಾರನ್ನು ಎತ್ತಿ ಉದ್ದೇಶಪೂರ್ವಕವಾಗಿ ಸ್ಫೋಟಿಸಲಾಯಿತು ! : Ujjain Muharram