ಕಳೆದ ವರ್ಷ ಕರ್ಣಾವತಿಯಲ್ಲಿ ಸಂಭವಿಸಿದ ವಿಮಾನ ಅಪಘಾತದ ಸಂತ್ರಸ್ತ ಕುಟುಂಬಗಳಿಂದ ಪ್ರಧಾನಮಂತ್ರಿಯವರಿಗೆ ಪತ್ರ

ಕರ್ಣಾವತಿ (ಗುಜರಾತ) – ನಮಗೆ ಹಣ ಬೇಡ. ನಮಗೆ ಸತ್ಯ ತಿಳಿದುಕೊಳ್ಳಬೇಕಾಗಿದೆ. ಅಪಘಾತ ಏಕೆ ಸಂಭವಿಸಿತು ಮತ್ತು ಅದರಲ್ಲಿ ಏನಾದರೂ ತಾಂತ್ರಿಕ ದೋಷವಿತ್ತೇ ಎಂಬುದು ನಮಗೆ ತಿಳಿಯಬೇಕಿದೆ. ‘ಬ್ಲ್ಯಾಕ್ ಬಾಕ್ಸ್’ ಮತ್ತು ‘ಕಾಕ್‌ಪಿಟ್ ವಾಯ್ಸ್ ರೆಕಾರ್ಡರ್’ನಲ್ಲಿನ ಮಾಹಿತಿಯನ್ನು ಸಾರ್ವಜನಿಕಗೊಳಿಸಲು ಸಾಧ್ಯವಾಗದಿದ್ದರೆ, ಕನಿಷ್ಠ ಅದನ್ನು ಖಾಸಗಿಯಾಗಿ ಕುಟುಂಬಗಳೊಂದಿಗೆ ಹಂಚಿಕೊಳ್ಳಬೇಕೆಂದು ಜೂನ್ ೧೨, ೨೦೨೫ ರಂದು ಕರ್ಣಾವತಿಯಲ್ಲಿ ಸಂಭವಿಸಿದ ವಿಮಾನ ಅಪಘಾತದಲ್ಲಿ ಮೃತರಾದವರ ಕುಟುಂಬದವರು ಪ್ರಧಾನಮಂತ್ರಿ ಮೋದಿಯವರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ.
೩೦ ಸಂತ್ರಸ್ತ ಕುಟುಂಬಗಳು ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿವೆ. ಸಂತ್ರಸ್ತ ಕುಟುಂಬಗಳು ಪತ್ರದ ಪ್ರತಿಯನ್ನು ಏರ್ ಕ್ರಾಫ್ಟ್ ಆಕ್ಸಿಡೆಂಟ್ ಇನ್ವೆಸ್ಟಿಗೇಶನ್ ಬ್ಯೂರೋ, ಡೈರೆಕ್ಟರೇಟ್ ಜನರಲ್ ಆಫ್ ಸಿವಿಲ್ ಏವಿಯೇಷನ್ ಮತ್ತು ಗುಜರಾತ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರಿಗೂ ಕಳುಹಿಸಿವೆ. ಈ ಪ್ರಕರಣದಲ್ಲಿ ಏರ್ ಇಂಡಿಯಾದ ಪ್ರತಿಕ್ರಿಯೆಗಾಗಿ ನಿರೀಕ್ಷಿಸಲಾಗುತ್ತಿದೆ.
ಏರ್ ಕ್ರಾಫ್ಟ್ ಆಕ್ಸಿಡೆಂಟ್ ಇನ್ವೆಸ್ಟಿಗೇಶನ್ ಬ್ಯೂರೋ ಕಳೆದ ವರ್ಷ ಜುಲೈನಲ್ಲಿ ವಿಮಾನ ಅಪಘಾತದ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿತ್ತು. ಅಂತಿಮ ವರದಿಯು ಈ ವರ್ಷದ ಜೂನ್ ನಲ್ಲಿ, ಅಂದರೆ ಅಪಘಾತದ ಮೊದಲ ವರ್ಷದ ಸ್ಮರಣಾರ್ಥ ದಿನದ ವೇಳೆ ಬರುವ ಸಾಧ್ಯತೆಯಿದೆ.
ಕರ್ಣಾವತಿಯಿಂದ ಲಂಡನ್ ಗೆ ತೆರಳುತ್ತಿದ್ದ ಬೋಯಿಂಗ್ ೭೮೭ ವಿಮಾನವು ಉಡಾವಣೆಗೊಂಡ ಕೆಲವೇ ಕ್ಷಣಗಳಲ್ಲಿ ವೈದ್ಯಕೀಯ ಮಹಾವಿದ್ಯಾಲಯವೊಂದರ ವಸತಿ ನಿಲಯದ ಮೇಲೆ ಪತನಗೊಂಡಿತ್ತು. ಈ ಅಪಘಾತದಲ್ಲಿ ೨೪೧ ಪ್ರಯಾಣಿಕರು ಮತ್ತು ಇತರ ೧೯ ಜನರು ಸೇರಿದಂತೆ ಒಟ್ಟು ೨೬೦ ಜನರು ಮೃತಪಟ್ಟಿದ್ದರು. ಮೃತಪಟ್ಟವರಲ್ಲಿ ೬೦ ವಿದೇಶಿ ನಾಗರಿಕರೂ ಇದ್ದರು.
‘ಜೀವೋತ್ತಮ ವಿದ್ಯಾಪೀಠಂ’ ಸನಾತನ ಧರ್ಮದ ರಕ್ಷಣೆಯಲ್ಲಿ ಮಹತ್ವದ ಪಾತ್ರ ವಹಿಸಲಿದೆ! – ಶ್ರೀಮದ್ ವಿದ್ಯಾಧೀಶ ತೀರ್ಥ ಶ್ರೀಪಾದ ವಡೇರ ಸ್ವಾಮೀಜಿ
‘ಎನ್ಸಿಇಆರ್ಟಿ’ಯ 9ನೇ ತರಗತಿಯ ಪುಸ್ತಕದಲ್ಲಿ ತುರ್ತು ಪರಿಸ್ಥಿತಿಯ ಮಾಹಿತಿ ಸೇರ್ಪಡೆ : NCERT Introduces Emergency
೧೦ ಸಾವಿರದಿಂದ ೧ ಲಕ್ಷ ಜನರು ಸಾವನ್ನಪ್ಪಿರುವ ಸಾಧ್ಯತೆ : Venezuela Earthquake
ಆರೋಪಿ ಭೀಮರಾವ್ ಕಾಂಬ್ಳೆಗೆ ದೋಷಿ ಎಂದು ತೀರ್ಪು; ಜೂನ್ 29 ರಂದು ಅಂತಿಮ ಶಿಕ್ಷೆ ಪ್ರಕಟ : Nasrapur Case
ಎನ್ಸಿಇಆರ್ಟಿ ಪಠ್ಯದಲ್ಲಿ ಮರಾಠಾ ಸಾಮ್ರಾಜ್ಯದ ಇತಿಹಾಸ: ಮಹಾರಾಷ್ಟ್ರ ಶಿಕ್ಷಣ ಸಚಿವರ ಆಗ್ರಹ
ಶ್ರೀರಾಮಮಂದಿರದಲ್ಲಿ ದೇಣಿಗೆ ಕಳ್ಳತನ ಪ್ರಕರಣ ದೂರು ದಾಖಲು : ಇಬ್ಬರ ಬಂಧನ