|

ಪುಣೆ – ರಾಜ್ಯ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಮಂಡಳಿಯು ನಡೆಸಿದ ಎಲ್.ಎಲ್.ಬಿ. ಮೂರನೇ ವರ್ಷದ ಪರೀಕ್ಷೆಯಲ್ಲಿ ಹಿಂದವಿ ಸ್ವರಾಜ್ಯದ ಸಂಸ್ಥಾಪಕ ಛತ್ರಪತಿ ಶಿವಾಜಿ ಮಹಾರಾಜರನ್ನು ಏಕವಚನದಲ್ಲಿ ಉಲ್ಲೇಖಿಸುವ ಮೂಲಕ ಅವಮಾನಿಸಿರುವ ಆಘಾತಕಾರಿ ಘಟನೆ ನಡೆದಿದೆ. ಸಂಬಂಧಿತರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ದೌಂಡ್ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ರಾಹುಲ್ ಕುಲ್ ಅವರು ಪತ್ರದ ಮೂಲಕ ಆಗ್ರಹಿಸಿದ್ದಾರೆ.
ಏಪ್ರಿಲ್ 2, 2026 ರಂದು ನಡೆದ ಆನ್‌ಲೈನ್ ಪರೀಕ್ಷೆಯ ಸಾಮಾನ್ಯ ಜ್ಞಾನ ವಿಭಾಗದಲ್ಲಿ, ‘ಶಿವಾಜಿಯ ಮಂತ್ರಿಮಂಡಲದ ಹೆಸರೇನು?’ ಎಂಬ ಪ್ರಶ್ನೆಯನ್ನು ಕೇಳಲಾಗಿತ್ತು.
ಈ ಕುರಿತು ಶಾಸಕ ರಾಹುಲ್ ಅವರು ಮಾತನಾಡಿ, ಪರೀಕ್ಷೆಯಲ್ಲಿ ಛತ್ರಪತಿ ಶಿವಾಜಿ ಮಹಾರಾಜರಂತಹ ಶ್ರೇಷ್ಠ ಮಹಾಪುರುಷರ ಉಲ್ಲೇಖವು ಏಕವಚನದಲ್ಲಿರುವುದು ಅತ್ಯಂತ ವಿಷಾದನೀಯ ಸಂಗತಿಯಾಗಿದೆ. ಈ ಘಟನೆಯಿಂದ ಶಿವಾಜಿ ಮಹಾರಾಜರ ಅಭಿಮಾನಿಗಳು ಮತ್ತು ವಿದ್ಯಾರ್ಥಿಗಳ ಭಾವನೆಗಳಿಗೆ ನೋವುಂಟಾಗಿದೆ. ಈ ಸಂಬಂಧ ಹಲವು ಅಭ್ಯರ್ಥಿಗಳು ನನ್ನ ಬಳಿ ದೂರು ನೀಡಿದ್ದಾರೆ, ಎಂದು ರಾಹುಲ್ ಹೇಳಿದರು.
ಶಾಸಕ ರಾಹುಲ್ ಕುಲ್ ಅವರು ಪತ್ರದ ಮೂಲಕ ಮಾಡಿರುವ ಬೇಡಿಕೆಗಳು,
೧. ಸದರಿ ಪ್ರಶ್ನೆಪತ್ರಿಕೆಯನ್ನು ಸಿದ್ಧಪಡಿಸಿದ ಸಮಿತಿ ಮತ್ತು ಸಂಬಂಧಪಟ್ಟ ಜವಾಬ್ದಾರಿಯುತ ಅಧಿಕಾರಿಗಳ ವಿರುದ್ಧ ತಕ್ಷಣವೇ ಕಠಿಣ ಆಡಳಿತಾತ್ಮಕ ಕ್ರಮ ಕೈಗೊಳ್ಳಬೇಕು.
೨. ಸಿಇಟಿ ವಿಭಾಗವು ಈ ಗಂಭೀರ ತಪ್ಪಿಗಾಗಿ ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕು.
೩. ಭವಿಷ್ಯದಲ್ಲಿ ಯಾವುದೇ ಸರಕಾರೀ ಅಥವಾ ಶೈಕ್ಷಣಿಕ ಪರೀಕ್ಷೆಗಳಲ್ಲಿ ಮಹಾಪುರುಷರಿಗೆ ಅವಮಾನವಾಗದಂತೆ ಸ್ಪಷ್ಟ ಮಾರ್ಗಸೂಚಿಗಳನ್ನು ಸಿದ್ಧಪಡಿಸಬೇಕು.
೪. ಎಲ್ಲಾ ಶೈಕ್ಷಣಿಕ ಸಾಹಿತ್ಯ ಮತ್ತು ಪ್ರಶ್ನೆಪತ್ರಿಕೆಗಳಲ್ಲಿ ‘ಛತ್ರಪತಿ ಶಿವಾಜಿ ಮಹಾರಾಜ’ ಎಂದೇ ಪೂರ್ಣ ಮತ್ತು ಗೌರವಯುತವಾಗಿ ಉಲ್ಲೇಖಿಸುವುದನ್ನು ಕಡ್ಡಾಯಗೊಳಿಸಬೇಕು.
ಸಂಪಾದಕೀಯ ನಿಲುವುಈ ಪ್ರಕರಣದ ದೋಷಿಗಳನ್ನು ಸರಕಾರ ಪತ್ತೆ ಹಚ್ಚಿ ಕಠಿಣ ಕ್ರಮ ಕೈಗೊಳ್ಳಬೇಕು! |
‘ಎನ್ಸಿಇಆರ್ಟಿ’ಯ 9ನೇ ತರಗತಿಯ ಪುಸ್ತಕದಲ್ಲಿ ತುರ್ತು ಪರಿಸ್ಥಿತಿಯ ಮಾಹಿತಿ ಸೇರ್ಪಡೆ : NCERT Introduces Emergency
ಆರೋಪಿ ಭೀಮರಾವ್ ಕಾಂಬ್ಳೆಗೆ ದೋಷಿ ಎಂದು ತೀರ್ಪು; ಜೂನ್ 29 ರಂದು ಅಂತಿಮ ಶಿಕ್ಷೆ ಪ್ರಕಟ : Nasrapur Case
ಎನ್ಸಿಇಆರ್ಟಿ ಪಠ್ಯದಲ್ಲಿ ಮರಾಠಾ ಸಾಮ್ರಾಜ್ಯದ ಇತಿಹಾಸ: ಮಹಾರಾಷ್ಟ್ರ ಶಿಕ್ಷಣ ಸಚಿವರ ಆಗ್ರಹ
ಶ್ರೀರಾಮಮಂದಿರದಲ್ಲಿ ದೇಣಿಗೆ ಕಳ್ಳತನ ಪ್ರಕರಣ: ಅಂತಿಮವಾಗಿ ದೂರು ದಾಖಲು
ಘಾಜಿಯಾಬಾದ್ (ಉತ್ತರ ಪ್ರದೇಶ) ಇಲ್ಲಿ ವೈದ್ಯ ನದೀಮ್ ನಿಂದ ರೋಗಿಯ ತಪ್ಪು ರಕ್ತನಾಳ ಕತ್ತರಿಸಿದ! : Doctor cuts wrong Vein
ದೇವತೆ, ಭಾರತಮಾತೆ ಮತ್ತು ರಾಜಕೀಯ ಹುತಾತ್ಮರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಲು ಸಾಧ್ಯವಿಲ್ಲ !