|
(‘ಎ.ಐ.ಎಮ್.ಐ.ಎಮ್.’ ಎಂದರೆ ‘ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್’ – ಅಖಿಲ ಭಾರತ ಮುಸ್ಲಿಂ ಏಕತಾ ಸಂಘ)

ಭಾಗ್ಯನಗರ (ತೆಲಂಗಾಣ) – ಏಪ್ರಿಲ್ ೫, ೨೦೨೬ ರಂದು ಇಲ್ಲಿನ ಚಾರಮಿನಾರ್ ವಿಭಾಗದಲ್ಲಿ ‘ಗ್ರೇಟರ್ ಹೈದರಾಬಾದ್ ಮುನ್ಸಿಪಲ್ ಕಾರ್ಪೊರೇಷನ್’ನ ತಂಡವು ‘ಲಾಡ್ ಬಜಾರ್ ನಿಂದ ಪುರಾನಾಪೂಲ್ ರಸ್ತೆ’ ವರೆಗಿನ ಅತಿಕ್ರಮಣಗಳನ್ನು ತೆರವುಗೊಳಿಸುವ ಕಾರ್ಯಾಚರಣೆಯನ್ನು ಹಮ್ಮಿಕೊಂಡಿತ್ತು. ಈ ಕಾರ್ಯಾಚರಣೆಯಲ್ಲಿ ಅತಿಕ್ರಮಣ ಮಾಡಿ ನಿರ್ಮಿಸಲಾಗಿದ್ದ ಒಟ್ಟು ೫೨ ಕಟ್ಟಡಗಳನ್ನು ತೆರವುಗೊಳಿಸಲಾಯಿತು. ಚಾರಮಿನಾರ್ ವಿಭಾಗದಲ್ಲಿ ಅತಿಕ್ರಮಣ ತೆರವುಗೊಳಿಸುವ ಪ್ರಕ್ರಿಯೆಗೆ ‘ಎಐಎಂಐಎಂ’ ಕಾರ್ಯಕರ್ತರು ವಿರೋಧ ವ್ಯಕ್ತಪಡಿಸಿದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ‘ಎಐಎಂಐಎಂ’ ಶಾಸಕ ರಹಮತ್ ಬೇಗ್ ಸೇರಿದಂತೆ ಹಲವರ ವಿರುದ್ಧ ಮೊಕದ್ದಮೆ ದಾಖಲಿಸಲಾಗಿದೆ. ಅಲ್ಲದೆ, ಈ ಪ್ರಕರಣದಲ್ಲಿ ಮಾಜಿ ನಗರಸೇವಕನ ಮಗ ಸಾಹಿಲ್ ಅಕ್ಬರ್ ಎಂಬಾತನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. (ಕಾನೂನಿನ ರಕ್ಷಕರಾಗುವ ಬದಲು ಭಕ್ಷಕರಾಗಿರುವ ‘ಎಐಎಂಐಎಂ’ನ ಜನಪ್ರತಿನಿಧಿಗಳು! – ಸಂಪಾದಕರು)
೧. ಚಾರಮಿನಾರ್ ಪೊಲೀಸ್ ಠಾಣೆಯ ಓರ್ವ ಪೊಲೀಸ್ ಸಿಬ್ಬಂದಿಯು ಆರೋಪಿಗಳ ವಿರುದ್ಧ ದೂರು ದಾಖಲಿಸಿದ್ದರು.
೨. ಅತಿಕ್ರಮಣ ತೆರವುಗೊಳಿಸುವ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದ ಸಿಬ್ಬಂದಿಗೆ ಕೆಲಸ ಮಾಡಲು ಅಡ್ಡಿಪಡಿಸುವುದು ಮತ್ತು ಅವರೊಂದಿಗೆ ಅನುಚಿತವಾಗಿ ವರ್ತಿಸುವುದು ಮುಂತಾದ ಆರೋಪಗಳನ್ನು ಈ ದೂರಿನಲ್ಲಿ ಮಾಡಲಾಗಿತ್ತು.
೩. ಈ ಘಟನೆಯಲ್ಲಿ ಓರ್ವ ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ. ಪ್ರಸ್ತುತ ಈ ಪ್ರದೇಶದಲ್ಲಿ ಹೆಚ್ಚುವರಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ.
೪. ಸರಕಾರಿ ಕೆಲಸಕ್ಕೆ ಅಡ್ಡಿಪಡಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
ಸಂಪಾದಕೀಯ ನಿಲುವುಅಕ್ರಮ ನಿರ್ಮಾಣಗಳನ್ನು ವಿರೋಧಿಸುವ ಬದಲು ಅವುಗಳನ್ನು ತೆರವುಗೊಳಿಸುವುದನ್ನು ವಿರೋಧಿಸುವ ‘ಎಐಎಂಐಎಂ’ನ ಜನತಾದ್ರೋಹಿ ಶಾಸಕರು! |
ಮಹಿಳಾ ಸದಸ್ಯರ ಸಮಿತಿಯ ಮೂಲಕ ಲೈಂಗಿಕ ಶೋಷಣೆ ವಿರೋಧಿ ಕಾಯ್ದೆಗಳ ಮರುಪರಿಶೀಲನೆ ನಡೆಸಬೇಕು!
ಯುರೋಪಿಯನ್ ದೇಶಗಳಂತೆ ಭಾರತದ ಮಕ್ಕಳಲ್ಲೂ ಸ್ಥೂಲಕಾಯದ ಅಪಾಯ ಹೆಚ್ಚುತ್ತಿದೆ!
ದೇವಸ್ಥಾನದ ಹಣವನ್ನು ಧಾರ್ಮಿಕ ಕಾರ್ಯಗಳಿಗಾಗಿಯೇ ಖರ್ಚು ಮಾಡುವ ತಮಿಳುನಾಡು ಸರಕಾರದ ನೀತಿಯನ್ನು ಟೀಕಿಸಿದ ಹಿಂದೂದ್ವೇಷಿ ಉದಯನಿಧಿ ಸ್ಟಾಲಿನ್
ಮುಂಬಯಿ ಲೋಕಲ್ ರೈಲಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಪ್ರಯಾಣಿಕನ ಹತ್ಯೆ; ಆರೋಪಿ ಬಂಧನ
ಮಹಾರಾಷ್ಟ್ರ : ಅಕೋಲಾ ಮಹಾನಗರ ಪಾಲಿಕೆಯ ಸ್ಥಾಯಿ ಸಮಿತಿ ಸಭಾಂಗಣಕ್ಕೆ ನೀಡಲಾದ ‘ಟಿಪ್ಪು ಸುಲ್ತಾನ್’ ಹೆಸರು ಅಕ್ರಮ!
ಮಹಾರಾಷ್ಟ್ರ : ದೇವಸ್ಥಾನ ಭೂಮಿಗೆ ಸಂಬಂಧಿಸಿದಂತೆ ಸರಕಾರಿ ದೇವಸ್ಥಾನ ಸಮಿತಿಯ ಮೊದಲ ಸಭೆ ಮುಕ್ತಾಯ!