ಭಾಜಪ ಸರಕಾರವಿರುವ ರಾಜ್ಯಗಳಲ್ಲಿ ಮುಸ್ಲಿಮರನ್ನು ಗುರಿ ಮಾಡಲಾಗುತ್ತಿದೆ ಎಂಬ ಹೇಳಿಕೆ

ಪ್ರಯಾಗ್‌ರಾಜ್ (ಉತ್ತರ ಪ್ರದೇಶ) – ಭಾಜಪ ಸರಕಾರವಿರುವ ರಾಜ್ಯಗಳಲ್ಲಿ ಮುಸ್ಲಿಮರನ್ನು ಗುರಿ ಮಾಡಲಾಗುತ್ತಿದ್ದು ಸಂವಿಧಾನದ ಉಲ್ಲಂಘನೆಯಾಗುತ್ತಿದೆ, ಎಂದು ಹೇಳಿಕೆ ನೀಡಿದ ವ್ಯಕ್ತಿಯೊಬ್ಬರ ವಿರುದ್ಧ ದಾಖಲಾದ ಮೊಕದ್ದಮೆಯನ್ನು ರದ್ದುಗೊಳಿಸಲು ಅಲಹಾಬಾದ್ ಹೈಕೋರ್ಟ್ ಸ್ಪಷ್ಟವಾಗಿ ನಿರಾಕರಿಸಿದೆ. ‘ಇಂತಹ ಹೇಳಿಕೆಗಳಿಂದ ಸಮಾಜದಲ್ಲಿ ದ್ವೇಷ ಹರಡಬಹುದು ಮತ್ತು ಸಾರ್ವಜನಿಕ ಶಾಂತಿಗೆ ಭಂಗವಾಗಬಹುದು’ ಎಂದು ನ್ಯಾಯಾಲಯ ಈ ಸಂದರ್ಭದಲ್ಲಿ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿತು.
ನ್ಯಾಯಮೂರ್ತಿ ಪ್ರಶಾಂತ್ ಕುಮಾರ್ ಅವರ ವಿಭಾಗೀಯ ಪೀಠವು ಈ ಪ್ರಕರಣದ ವಿಚಾರಣೆ ನಡೆಸುತ್ತಾ ಹೀಗೆ ಹೇಳಿದೆ,
೧. ಸಂವಿಧಾನವು ನೀಡಿರುವ ಭಾಷಣ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯವು ಅಪರಿಮಿತವಾದುದಲ್ಲ. ದೇಶದ ಕಾನೂನು ಮತ್ತು ಸುವ್ಯವಸ್ಥೆ, ಹಾಗೂ ಸಾಮಾಜಿಕ ಸಾಮರಸ್ಯಕ್ಕೆ ಧಕ್ಕೆ ತರುವಂತಹ ಹೇಳಿಕೆ ನೀಡುವ ಸ್ವಾತಂತ್ರ್ಯ ಯಾರಿಗೂ ಇಲ್ಲ.
೨. ಒಂದು ನಿರ್ದಿಷ್ಟ ಸಮುದಾಯದ ಬಗ್ಗೆ ಭಯ ಅಥವಾ ದ್ವೇಷ ಉಂಟಾಗುವಂತಹ ಹೇಳಿಕೆಗಳನ್ನು ನೀಡುವುದು ಮೇಲ್ನೋಟಕ್ಕೆ ಅಪರಾಧ ಕೃತ್ಯವೆಂದು ಪರಿಗಣಿಸಬಹುದು.
೩. ಈ ಪ್ರಕರಣದಲ್ಲಿ ತನಿಖೆ ನಡೆಯುತ್ತಿದ್ದು, ಮೇಲ್ನೋಟಕ್ಕೆ ಅಪರಾಧ ನಡೆದಿರುವುದು ಕಂಡುಬರುತ್ತಿದೆ. ಆದ್ದರಿಂದ ಕೆಳಹಂತದ ನ್ಯಾಯಾಲಯದಲ್ಲಿ ನಡೆಯುತ್ತಿರುವ ಕಾನೂನು ಪ್ರಕ್ರಿಯೆಯಲ್ಲಿ ಹಸ್ತಕ್ಷೇಪ ಮಾಡಲು ಯಾವುದೇ ಕಾರಣವಿಲ್ಲ ಎಂದು ತಿಳಿಸಿದೆ.
‘ಡಾಬರ್’ ಕಂಪನಿಯ ಮೋಸಂಬಿ ಜ್ಯೂಸ್ ಪ್ಯಾಕ್ ನಲ್ಲಿ ಕಪ್ಪು ಪಾಚಿ !
ರೈಲ್ವೆಯ ವಾತಾನುಕೂಲಿತ ಬೋಗಿಗಳಿಂದ ಚಾದರ, ಹೊದಿಕೆ ಮತ್ತು ಟವೆಲ್ ಕಳ್ಳತನದ ಘಟನೆಗಳಲ್ಲಿ ಏರಿಕೆ!
ಇಂಗ್ಲಿಷ್ ಭಾಷೆಯನ್ನು ಭಾರತದ ಸ್ಥಳೀಯ ಭಾಷೆ ಎಂದು ಪರಿಗಣಿಸಬಹುದೇ? – ಸುಪ್ರೀಂ ಕೋರ್ಟ್ ಪ್ರಶ್ನೆ
ನಮ್ಮ ಮತ್ತು ಭಾರತದ ಡಿ.ಎನ್.ಎ. ಒಂದೇ! – Afghanistan Minister
ಹಿಂದೂಗಳ ತೀವ್ರ ವಿರೋಧದ ನಂತರ ಕಲಾವಿದೆಯಿಂದ ಕ್ಷಮೆಯಾಚನೆ!
ಹಡಪ್ಸರ್ನಲ್ಲಿ ಹಿಂದುತ್ವನಿಷ್ಠ ಕಾರ್ಯಕರ್ತನ ಮೇಲೆ ಸಾಹಿಲ್ ಶೇಖ್ ಮತ್ತು ಆತನ ಗ್ಯಾಂಗ್ನಿಂದ ಹಿಂಸಾತ್ಮಕ ಹಲ್ಲೆ!