ಈ ತಿಂಗಳಲ್ಲೇ ಮಸೂದೆ ಅಂಗೀಕಾರವಾಗುವ ಸಾಧ್ಯತೆ
ಲೋಕಸಭೆಯ ಸ್ಥಾನಗಳನ್ನು ೮೧೬ ಕ್ಕೆ ಹೆಚ್ಚಿಸಲಾಗುವುದು
೨೭೩ ಸ್ಥಾನಗಳು ಮಹಿಳೆಯರಿಗೆ ಮೀಸಲಾಗಿರಲಿವೆ

ನವದೆಹಲಿ – ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ ‘ನಾರಿ ಶಕ್ತಿ ವಂದನ್’ ಕಾಯ್ದೆಯ ತಿದ್ದುಪಡಿ ಮಸೂದೆಯ ಕರಡಿಗೆ ಒಪ್ಪಿಗೆ ನೀಡಲಾಗಿದೆ. ಈ ಪ್ರಸ್ತಾವನೆಯ ಪ್ರಕಾರ, ಲೋಕಸಭೆಯ ಸ್ಥಾನಗಳನ್ನು ಪ್ರಸ್ತುತ ಇರುವ ೫೪೩ ರಿಂದ ೮೧೬ ಕ್ಕೆ ಹೆಚ್ಚಿಸಲಾಗುವುದು ಮತ್ತು ಅವುಗಳಲ್ಲಿ ೨೭೩ ಸ್ಥಾನಗಳನ್ನು ಮಹಿಳೆಯರಿಗೆ ಮೀಸಲಿಡಲಾಗುವುದು.
ಸರಕಾರವು ಬಜೆಟ್ ಅಧಿವೇಶನದ ಅವಧಿಯನ್ನು ವಿಸ್ತರಿಸಿದ್ದು, ಏಪ್ರಿಲ್ ೧೬ ರಿಂದ ೧೮ ರವರೆಗೆ ಸಂಸತ್ತಿನ ವಿಶೇಷ ಅಧಿವೇಶನವನ್ನು ಕರೆದಿದೆ. ಈ ಅಧಿವೇಶನದಲ್ಲಿ ಮಹಿಳಾ ಮೀಸಲಾತಿ ತಿದ್ದುಪಡಿ ಮಸೂದೆ ಅಂಗೀಕಾರವಾಗುವ ಸಾಧ್ಯತೆಯಿದೆ. ಸಂಸತ್ತಿನ ಒಪ್ಪಿಗೆ ದೊರೆತ ನಂತರ, ಈ ಕಾನೂನು ಮಾರ್ಚ್ ೩೧, ೨೦೨೯ ರಿಂದ ಜಾರಿಗೆ ಬರಲಿದೆ. ಅದೇ ವರ್ಷ ನಡೆಯುವ ಲೋಕಸಭೆ ಚುನಾವಣೆ ಮತ್ತು ಕೆಲವು ರಾಜ್ಯಗಳ ವಿಧಾನಸಭಾ ಚುನಾವಣೆಗಳಲ್ಲಿ ಇದು ಮೊದಲ ಬಾರಿಗೆ ಅನ್ವಯವಾಗಲಿದೆ. ಈ ಪ್ರಸ್ತಾವನೆಯ ಪ್ರಕಾರ, ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೀಸಲಾತಿ ಸ್ಥಾನಗಳಲ್ಲೂ ಮಹಿಳೆಯರ ಪಾಲನ್ನು ನಿಗದಿಪಡಿಸಲಾಗುವುದು.
ಯುಕ್ರೇನ್-ರಷ್ಯಾ ಯುದ್ಧದಲ್ಲಿ ಭಾರತೀಯ ಸೈನಿಕರನ್ನು ಶಾಂತಿ ಕಾರ್ಯಾಚರಣೆಗಾಗಿ ಕಳುಹಿಸುವ ಉಪರಾಷ್ಟ್ರಪತಿ ಜೆ.ಡಿ. ವ್ಯಾನ್ಸ್ ಅವರ ಪ್ರಸ್ತಾವನೆ : Indian Peace Keeping for Ukraine
ಕಳೆದ 24 ಗಂಟೆಗಳಲ್ಲಿ ಲವ್ ಜಿಹಾದ್ನ 4 ಮತ್ತು ಮತಾಂತರದ 2 ಘಟನೆಗಳು ಬೆಳಕಿಗೆ! : Love Jihad
ಹಸುವನ್ನು ರಾಷ್ಟ್ರಮಾತೆ ಎಂದು ಘೋಷಿಸಿ! – ಪೂ. ಕಿಶೋರ್ಶಾಸ್ತ್ರಿ ದವೆ : Declare Cow Mother of Nation
೬೦೦ ಮಿಲಿಯನ್ ಲೀಟರ್ ಕೊಳಚೆ ನೀರನ್ನು ನೇರವಾಗಿ ನದಿಗೆ ಬಿಡುತ್ತಿರುವುದರಿಂದ ಪುಣೆ ನಗರದ ನದಿಗಳು ಮಾಲಿನ್ಯದ ಸುಳಿಗೆ!
ಉತ್ತರ ಪ್ರದೇಶ : ಭಗವಾನ್ ಹನುಮಂತನ ಮೂರ್ತಿ ಧ್ವಂಸ ಪ್ರಕರಣದಲ್ಲಿ ಅಸದ್ ವಿರುದ್ಧ ಆರೋಪ
ಮಹಾರಾಷ್ಟ್ರದಲ್ಲಿ ಸಮಾನ ನಾಗರಿಕ ಸಂಹಿತೆಯ ಕರಡು ಸಿದ್ದಪಡಿಸಲಾಗುವುದು! – ಯೋಗೇಶ್ ಕದಮ್, ಗೃಹ ರಾಜ್ಯ ಸಚಿವರು, ಮಹಾರಾಷ್ಟ್ರ