ಅಮೆರಿಕದ ಗುಪ್ತಚರ ಸಂಸ್ಥೆ ಸಿ.ಐ.ಎ.ಗೆ ಇಮೇಲ್ ಕಳುಹಿಸಿ ಹಣಕ್ಕಾಗಿ ಬೇಡಿಕೆ ಇಟ್ಟಿದ್ದ

ಬಕ್ಸರ (ಬಿಹಾರ) – ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ೨೨ ದಿನಗಳಲ್ಲಿ ಹತ್ಯೆ ಮಾಡುವುದಾಗಿ ಬೆದರಿಕೆ ಹಾಕಿದ್ದ ಅಮನ ತಿವಾರಿ ಮತ್ತು ಅವನ ಇಬ್ಬರು ಸಹಚರರನ್ನು ಪೊಲೀಸರು ಇಲ್ಲಿ ಬಂಧಿಸಿದ್ದಾರೆ. ತಿವಾರಿ ಈ ಹತ್ಯೆಗಾಗಿ ಅಮೆರಿಕದ ಗುಪ್ತಚರ ಸಂಸ್ಥೆಯಾದ ಸಿ.ಐ.ಎ.ಗೆ ಇಮೇಲ್ ಕಳುಹಿಸಿ ದೊಡ್ಡ ಮೊತ್ತದ ಹಣಕ್ಕೆ ಬೇಡಿಕೆ ಇಟ್ಟಿದ್ದನು; ಆದರೆ ಎಷ್ಟು ಮೊತ್ತದ ಹಣವನ್ನು ಕೇಳಿದ್ದನು ಎಂಬ ವಿಷಯವನ್ನು ಪೊಲೀಸರು ಬಹಿರಂಗಪಡಿಸಿಲ್ಲ. ಪೊಲೀಸರು ಆತನಿಂದ ಮೊಬೈಲ್, ಲ್ಯಾಪ್ ಟಾಪ್ ಮತ್ತು ಅನೇಕ ಡಿಜಿಟಲ್ ಸಾಧನಗಳನ್ನು ವಶಪಡಿಸಿಕೊಂಡಿದ್ದಾರೆ. ಅಮನ ವಾಸವಿದ್ದ ಕೊಠಡಿಯನ್ನು ಸೀಲ್ ಮಾಡಲಾಗಿದೆ. ಆತ ಗ್ರಾಮದಲ್ಲಿ ವಾಸವಿದ್ದು ಸೈಬರ್ ಕೆಫೆ ನಡೆಸುತ್ತಿದ್ದನು ಎಂದು ಹೇಳಲಾಗುತ್ತಿದೆ.
೧. ಈ ಪ್ರಕರಣಕ್ಕೆ ಸಂಬಂಧಿಸಿದ ಎಲ್ಲರ ಬ್ಯಾಂಕ್ ಖಾತೆಗಳು ಮತ್ತು ಡಿಜಿಟಲ್ ವ್ಯವಹಾರಗಳ ಪರಿಶೀಲನೆ ನಡೆಯುತ್ತಿದೆ. ಈ ಜಾಲದ ಹಿಂದೆ ಅಂತರರಾಷ್ಟ್ರೀಯ ಭಯೋತ್ಪಾದಕ ಸಂಘಟನೆಗಳಿವೆಯೇ? ಎಂಬುದನ್ನು ಖಚಿತಪಡಿಸಿಕೊಳ್ಳಲು ಪೊಲೀಸರು ಪ್ರಯತ್ನಿಸುತ್ತಿದ್ದು, ಪ್ರಸ್ತುತ ಪ್ರಕರಣದ ಆಳವಾದ ತನಿಖೆ ನಡೆಯುತ್ತಿದೆ.
೨. ಪೊಲೀಸ ಅಧೀಕ್ಷಕರಾದ ಶುಭಂ ಆರ್ಯ ಅವರು, ಈ ಪ್ರಕರಣವು ಅತ್ಯಂತ ಗೌಪ್ಯವಾಗಿದ್ದು, ತನಿಖೆ ಪೂರ್ಣಗೊಂಡ ನಂತರವೇ ಸಂಪೂರ್ಣ ಮಾಹಿತಿ ನೀಡಲಾಗುವುದು ಎಂದು ತಿಳಿಸಿದ್ದಾರೆ.
೩. ಅಮನ ಅಪರಾಧದ ಹಿನ್ನೆಲೆಯುಳ್ಳವನಾಗಿದ್ದಾನೆ. ೨೦೨೨ ರಲ್ಲಿ ಕೋಲಕಾತಾ ವಿಮಾನ ನಿಲ್ದಾಣವನ್ನು ‘ಹ್ಯಾಕ್’ ಮಾಡುವುದಾಗಿ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಈತನನ್ನು ಬಂಧಿಸಲಾಗಿತ್ತು.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!