ಉತ್ತರ ಪ್ರದೇಶ: ‘ಲವ್ ಜಿಹಾದ್’ ಪ್ರಕರಣ ಬೆಳಕಿಗೆ

ಲಕ್ಷ್ಮಣಪುರಿ (ಉತ್ತರ ಪ್ರದೇಶ) – ರಾಜಧಾನಿ ಲಕ್ಷ್ಮಣಪುರಿಯ ಗಾಜಿಪುರ ಪ್ರದೇಶದಲ್ಲಿ ‘ಲವ್ ಜಿಹಾದ್’ನ ಹೊಸ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇಲ್ಲಿನ ಅಲಿ ಶೇಖ್ ಎಂಬ ಹೆಸರಿನ ಮುಸ್ಲಿಂ ಯುವಕನು ತನ್ನ ಹೆಸರನ್ನು ಅಮನ್ ಸಿಂಗ್ ಎಂದು ಹೇಳಿಕೊಂಡು ಸಂತ್ರಸ್ತ ಹಿಂದೂ ಯುವತಿಯನ್ನು ಪ್ರೇಮದ ಬಲೆಯಲ್ಲಿ ಸಿಲುಕಿಸಿದನು. ಬಳಿಕ ಮದುವೆಯ ಆಮಿಷ ತೋರಿಸಿ ಆಕೆಯೊಂದಿಗೆ ದೈಹಿಕ ಸಂಬಂಧ ಪ್ರಸ್ತಾಪಿಸಿದನು. ಸಂತ್ರಸ್ತೆಯು ಮದುವೆಯ ವಿಷಯ ತೆಗೆದ ಮೇಲೆ ಆರೋಪಿಯು ಕಾಲಹರಣ ಮಾಡಲಾರಂಭಿಸಿದನು. ನಂತರ ಅವನ ನಿಜವಾದ ಗುರುತು ಅಲಿ ಶೇಖ್ ಎಂದು ತಿಳಿದುಬಂದಿದೆ. ಆ ನಂತರ ಆರೋಪಿಯು ಸಂತ್ರಸ್ತ ಯುವತಿಗೆ ಅಶ್ಲೀಲ ವಿಡಿಯೋಗಳನ್ನು ಪ್ರಸಾರ ಮಾಡುವುದಾಗಿ ಬೆದರಿಕೆ ಹಾಕಲಾರಂಭಿಸಿದನು. ಕೊನೆಗೆ ಸಂತ್ರಸ್ತ ಯುವತಿಯು ಆರೋಪಿಯ ವಿರುದ್ಧ ಗಾಜಿಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದಳು. ಏಪ್ರಿಲ್ ೧ರಂದು ತನ್ನನ್ನು ಮಾತನಾಡಿಸುವ ನೆಪದಲ್ಲಿ ಇಂದಿರಾನಗರದ ಹೋಟೆಲ್‌ವೊಂದಕ್ಕೆ ಕರೆಸಿಕೊಂಡ ಆರೋಪಿ ಅಲ್ಲಿ ಅತ್ಯಾಚಾರ ಮಾಡಿ ಹಲ್ಲೆ ನಡೆಸಿದ್ದಾನೆಂದು ಸಂತ್ರಸ್ತೆಯು ದೂರಿನಲ್ಲಿ ತಿಳಿಸಿದ್ದಾಳೆ.
ಗಾಜಿಪುರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರು ಈ ಬಗ್ಗೆ ಮಾತನಾಡಿ, ಸಂತ್ರಸ್ತೆಯ ದೂರಿನ ಆಧಾರದ ಮೇಲೆ ಆರೋಪಿಯ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಅವನ ಪತ್ತೆಗಾಗಿ ಶೋಧ ಕಾರ್ಯ ನಡೆಯುತ್ತಿದ್ದೇವೆ ಎಂದು ತಿಳಿಸಿದ್ದಾರೆ.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!