ಶಾಲೆಗಳಲ್ಲಿ ಸಂಪೂರ್ಣ ‘ವಂದೇ ಮಾತರಂ’ ಹಾಡುವುದು ಕಡ್ಡಾಯ: ಕೇಂದ್ರ ಸರಕಾರದ ನಿರ್ಧಾರ ಎತ್ತಿ ಹಿಡಿದ ಕರ್ನಾಟಕ ಹೈಕೋರ್ಟ್!

ಬೆಂಗಳೂರು – ಶಾಲೆಗಳಲ್ಲಿ ಪ್ರತಿದಿನ 6 ಚರಣಗಳನ್ನೊಳಗೊಂಡ ಸಂಪೂರ್ಣ ‘ವಂದೇ ಮಾತರಂ’ ಗೀತೆಯನ್ನು ಹಾಡಬೇಕೆಂಬ ಕೇಂದ್ರ ಸರಕಾರದ ನಿರ್ಧಾರವನ್ನು ಕರ್ನಾಟಕ ಹೈಕೋರ್ಟ್ ಎತ್ತಿ ಹಿಡಿದಿದೆ. ಕೇಂದ್ರ ಸರಕಾರದ ಈ ನಿರ್ಧಾರವು ಸಂವಿಧಾನ ವಿರೋಧಿ ಎಂದು ಘೋಷಿಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಹೈಕೋರ್ಟ್ ಇತ್ತೀಚೆಗೆ ವಜಾಗೊಳಿಸಿದೆ.
ಬೆಂಗಳೂರಿನ ನ್ಯಾಯವಾದಿ ಸೋಮಶೇಖರ್ ಎಂಬುವವರು ಸಲ್ಲಿಸಿದ್ದ ಈ ಅರ್ಜಿಯ ವಿಚಾರಣೆಯು ಮುಖ್ಯ ನ್ಯಾಯಮೂರ್ತಿ ವಿಭೂ ಬಾಖ್ರೂ ಅವರ ನೇತೃತ್ವದ ಪೀಠದ ಮುಂದೆ ನಡೆಯಿತು. ಕೇಂದ್ರ ಸರಕಾರದ ಪರವಾಗಿ ಅಡಿಷನಲ್ ಸಾಲಿಸಿಟರ್ ಜನರಲ್ ಅರವಿಂದ್ ಕಾಮತ್ ಅವರು ವಾದ ಮಂಡಿಸಿದರು. ಇದೇ ರೀತಿಯ ವಿನಂತಿಯನ್ನೊಳಗೊಂಡ ಅರ್ಜಿಯನ್ನು ಇತ್ತೀಚೆಗಷ್ಟೇ ಸುಪ್ರೀಂ ಕೋರ್ಟ್ ಕೂಡ ವಜಾಗೊಳಿಸಿದೆ ಎಂಬ ಅಂಶವನ್ನು ಅವರು ಪೀಠದ ಗಮನಕ್ಕೆ ತಂದರು. ಎರಡೂ ಕಡೆಯ ವಾದ-ಪ್ರತಿವಾದಗಳನ್ನು ಆಲಿಸಿದ ಹೈಕೋರ್ಟ್ ಅಂತಿಮವಾಗಿ ಅರ್ಜಿಯನ್ನು ವಜಾಗೊಳಿಸಿದೆ.
ನಮ್ಮ ಮತ್ತು ಭಾರತದ ಡಿ.ಎನ್.ಎ. ಒಂದೇ! – Afghanistan Minister
ಹಿಂದೂಗಳ ತೀವ್ರ ವಿರೋಧದ ನಂತರ ಕಲಾವಿದೆಯಿಂದ ಕ್ಷಮೆಯಾಚನೆ!
ಹಡಪ್ಸರ್ನಲ್ಲಿ ಹಿಂದುತ್ವನಿಷ್ಠ ಕಾರ್ಯಕರ್ತನ ಮೇಲೆ ಸಾಹಿಲ್ ಶೇಖ್ ಮತ್ತು ಆತನ ಗ್ಯಾಂಗ್ನಿಂದ ಹಿಂಸಾತ್ಮಕ ಹಲ್ಲೆ!
ಮಹಿಳೆಯ ಎದೆಗೆ ಸ್ಪರ್ಶಿಸುವುದು ಅತ್ಯಾಚಾರದ ಪ್ರಯತ್ನವಲ್ಲ! – ಉಚ್ಚ ನ್ಯಾಯಾಲಯ : Attempt to Rape
ಅಮರಕಂಟಕ (ಮಧ್ಯಪ್ರದೇಶ)ಇಲ್ಲಿನ ನರ್ಮದಾ ಉಗಮ ದೇವಸ್ಥಾನದ ಚಿನ್ನ ಮತ್ತು ಬೆಳ್ಳಿ ನಾಪತ್ತೆ! : Amarkantak Temple Donation Scam
ಬೆಂಗಳೂರಿನಲ್ಲಿ ದೇಶದ ಮೊದಲ ‘ಎಐ’ ವಿಶ್ವವಿದ್ಯಾಲಯ ಆರಂಭ ! : Karnataka AI University