ಪ್ರಕರಣ ಮುಚ್ಚಿಹಾಕಲು ವಿದ್ಯಾರ್ಥಿನಿಯ ಗರ್ಭಪಾತ!
ಶಿಕ್ಷಕ ಮತ್ತು ಗರ್ಭಪಾತ ಮಾಡಿದ ಮಹಿಳಾ ವೈದ್ಯೆಯ ವಿರುದ್ಧ ಪ್ರಕರಣ ದಾಖಲು

ಚಿತ್ರದುರ್ಗ – ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನಲ್ಲಿ 16 ವರ್ಷದ ಅಪ್ರಾಪ್ತ ವಿದ್ಯಾರ್ಥಿನಿಯನ್ನು ಪುಸಲಾಯಿಸಿ ಅದೇ ಶಾಲೆಯ ಶಿಕ್ಷಕನೊಬ್ಬ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದು, ಇದರಿಂದ ವಿದ್ಯಾರ್ಥಿನಿ ಗರ್ಭಿಣಿಯಾಗಿದ್ದಾಳೆ. ತದನಂತರ ಶಿಕ್ಷಕನು ಮಹಿಳಾ ವೈದ್ಯೆಯೊಬ್ಬರ ಸಹಾಯದಿಂದ ವಿದ್ಯಾರ್ಥಿನಿಯ ಗರ್ಭಪಾತ ಮಾಡಿಸಿದ್ದಾನೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
ಪ್ರಾಥಮಿಕ ಶಾಲೆಯ ಗಣಿತ ಶಿಕ್ಷಕ ಎಚ್.ಓ. ರಾಜಣ್ಣ ಎಂಬಾತ ಶಾಲೆಯ ಕೊಠಡಿಯಲ್ಲಿ ವಿದ್ಯಾರ್ಥಿನಿಯ ಮೇಲೆ ನಿರಂತರವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದರಿಂದ ಆಕೆ ಗರ್ಭಿಣಿಯಾಗಿದ್ದಳು. ಈ ವಿಷಯ ತಿಳಿಯುತ್ತಿದ್ದಂತೆ ಪ್ರಕರಣವನ್ನು ಮುಚ್ಚಿಹಾಕಲು ಶಿಕ್ಷಕ ಪ್ರಯತ್ನಿಸಿದ್ದಾನೆ. ಮೊದಲೇ ಯೋಜಿಸಿದಂತೆ ಚಳ್ಳಕೆರೆಯ ಲಕ್ಷ್ಮಿ ಶ್ರೀನಿವಾಸ್ ನರ್ಸಿಂಗ್ ಹೋಮ್‌ನ ಡಾ. ಶಂಕರಲಕ್ಷ್ಮಿ ಅವರೊಂದಿಗೆ ಮಾತನಾಡಿ ವಿದ್ಯಾರ್ಥಿನಿಯ ಅಕ್ರಮ ಗರ್ಭಪಾತ ಮಾಡಿಸಲಾಗಿದೆ.
ಈ ವಿಷಯದ ಬಗ್ಗೆ ಮಾಹಿತಿ ಲಭಿಸಿದ ನಂತರ, ಬಾಲ ಸಂರಕ್ಷಣಾ ಅಧಿಕಾರಿ ರೇಖಾ ಅವರು ನೀಡಿದ ದೂರಿನ ಮೇರೆಗೆ ಚಳ್ಳಕೆರೆಯ ತಳಕು ಪೊಲೀಸ್ ಠಾಣೆಯಲ್ಲಿ ‘ಪೋಕ್ಸೋ’ (POCSO) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.
ಶಿಕ್ಷಕನೇ ವಿದ್ಯಾರ್ಥಿಗಳ ಶೋಷಣೆ ಮಾಡುತ್ತಿರುವುದರಿಂದ ಶಾಲೆಗಳಲ್ಲೂ ಮಕ್ಕಳು ಸುರಕ್ಷಿತವಾಗಿಲ್ಲ ಎಂಬ ಅಂಶ ಮುನ್ನೆಲೆಗೆ ಬಂದಿದೆ. ಈ ಘಟನೆಯ ವಿರುದ್ಧ ಇಡೀ ಜಿಲ್ಲೆಯಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!