ಕಲ್ಲುತೂರಾಟ ಮತ್ತು ಬೆಂಕಿ ಹಚ್ಚುವಿಕೆ

ನೋಯ್ಡಾ (ಉತ್ತರ ಪ್ರದೇಶ) – ದೆಹಲಿಯ ಗಡಿಯ ಸಮೀಪವಿರುವ ನೋಯ್ಡಾದಲ್ಲಿ ವೇತನ ಹೆಚ್ಚಳದ ಬೇಡಿಕೆಗಾಗಿ ಪ್ರತಿಭಟನೆ ನಡೆಸುತ್ತಿದ್ದ ಇಲ್ಲಿನ ಕಾರ್ಖಾನೆಗಳ ನೌಕರರ ಪ್ರತಿಭಟನೆಯು ಏಪ್ರಿಲ್ 13 ರಂದು ಹಿಂಸಾಚಾರಕ್ಕೆ ತಿರುಗಿತು. ನೌಕರರು ಕಲ್ಲು ತೂರಾಟ ನಡೆಸಿದ್ದಲ್ಲದೆ, ಹಲವಾರು ವಾಹನಗಳು ಮತ್ತು ಬಸ್‌ಗಳಿಗೆ ಬೆಂಕಿ ಹಚ್ಚಿದರು. ಪೊಲೀಸರು ಅವರನ್ನು ತಡೆಯಲು ಪ್ರಯತ್ನಿಸಿದಾಗ, ಪ್ರತಿಭಟನಾಕಾರರು ಪೊಲೀಸರ ವಾಹನವನ್ನು ಪಲ್ಟಿ ಮಾಡಿದರು. ಅವರು ಪೊಲೀಸರ ಮೇಲೆಯೂ ಕಲ್ಲು ತೂರಾಟ ನಡೆಸಿದರು. ಇದರಿಂದಾಗಿ ಪೊಲೀಸರು ಅವರ ಮೇಲೆ ಅಶ್ರುವಾಯುಗಳನ್ನು ಪ್ರಯೋಗಿಸಿದರು. ಈ ಘಟನೆಯು ನೋಯ್ಡಾ ಫೇಸ್-2 ರಲ್ಲಿ ನಡೆದಿದೆ. ಈ ಪ್ರದೇಶವು ಕೈಗಾರಿಕಾ ವಲಯವಾಗಿದೆ. ಇಲ್ಲಿ ಮದರ್ಸನ್, ಋಚಾ ಗ್ಲೋಬಲ್, ರೈನ್ಬೋ, ಪ್ಯಾರಾಮೌಂಟ್, ಎಸ್.ಎನ್.ಡಿ ಮುಂತಾದ ಸಂಸ್ಥೆಗಳ 500 ಕ್ಕೂ ಹೆಚ್ಚು ಕಾರ್ಮಿಕರು ಕಳೆದ 3 ದಿನಗಳಿಂದ ವೇತನ ಹೆಚ್ಚಳಕ್ಕಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!