ಮಾಲ್ಡಾ (ಬಂಗಾಳ)ದಲ್ಲಿ ವಿಶೇಷ ತೀವ್ರ ಪರಿಶೀಲನಾ (ಎಸ್‌ಐಆರ್) ಪ್ರಕ್ರಿಯೆಯ ಸಿಬ್ಬಂದಿಯನ್ನು ಒತ್ತೆಯಾಳಾಗಿ ಇರಿಸಿಕೊಂಡ ಪ್ರಕರಣ!

ಕೋಲಕಾತಾ – ಬಂಗಾಳದ ಮಾಲ್ಡಾದಲ್ಲಿ ವಿಶೇಷ ತೀವ್ರ ಪರಿಶೀಲನಾ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ತೊಡಗಿದ್ದ ಸರಕಾರಿ ಸಿಬ್ಬಂದಿಯನ್ನು ಒತ್ತೆಯಾಳಾಗಿ ಇರಿಸಿಕೊಂಡು ಹಿಂಸಾಚಾರ ಹರಡಿದ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಇತ್ತೀಚೆಗೆ ಮೊಥಾಬಾಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಯಾಮ್ ಚೌಧರಿ ಸೇರಿದಂತೆ 7 ಜನರನ್ನು ಬಂಧಿಸಿದೆ. ಇವರಲ್ಲಿ ‘ಇಂಡಿಯನ್ ಸೆಕ್ಯುಲರ್ ಫ್ರಂಟ್’ (ಐಎಸ್‌ಎಫ್) ನ ಗ್ರಾಮ ಪಂಚಾಯತ್ ಸದಸ್ಯ ಗುಲಾಮ್ ರಬ್ಬಾನಿ ಕೂಡ ಸೇರಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಸಯಾಮ್ ಚೌಧರಿ ಮತ್ತು ಅವರ ಸಹಚರರನ್ನು ಮೊಥಾಬಾಡಿಯಲ್ಲಿ ಪ್ರಚಾರದ ವೇಳೆ ಬಂಧಿಸಲಾಗಿದೆ. ಇದಕ್ಕೂ ಮುನ್ನ ಈ ಪ್ರಕರಣದಲ್ಲಿ ಬಂಗಾಳ ಪೊಲೀಸರು ‘ಎಐಎಂಐಎಂ’ (‘ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್’) ಮುಖಂಡ ಮೊಫಕ್ಕರುಲ್ ಇಸ್ಲಾಂನನ್ನು ವಶಕ್ಕೆ ಪಡೆದಿದ್ದರು. ಏಪ್ರಿಲ್ 1, 2026 ರಂದು ಮಾಲ್ಡಾದಲ್ಲಿ ‘ಎಸ್‌ಐಆರ್’ ಪ್ರಕ್ರಿಯೆಗಾಗಿ ನಿಯೋಜಿಸಲಾಗಿದ್ದ ಸಿಬ್ಬಂದಿಯನ್ನು ತೃಣಮೂಲ ಕಾಂಗ್ರೆಸ್ ಮತ್ತು ಇತರ ಕೆಲವರು ಒತ್ತೆಯಾಳಾಗಿ ಇರಿಸಿಕೊಂಡಿದ್ದರು. ಈ ಪ್ರಕರಣವನ್ನು ಸುಪ್ರೀಂ ಕೋರ್ಟ್ ಗಂಭೀರವಾಗಿ ಪರಿಗಣಿಸಿದ್ದು, ತನಿಖೆಯನ್ನು ‘ಎನ್‌ಐಎ’ಗೆ ವಹಿಸಲಾಗಿದೆ.
ಬದರಿನಾಥ ದೇವಸ್ಥಾನದ ದೇಣಿಗೆ ಹಣ ಕಳ್ಳತನ ಪ್ರಕರಣ; ದೇವಸ್ಥಾನದ ಮಾಜಿ ಅಧಿಕಾರಿಯ ಬಂಧನ : Badrinath Temple Arrest
‘ಹಿಂದಿ ಮತ್ತು ಉರ್ದು ಭಾರತದ ಭಾಷೆಗಳು, ಆದರೆ ಸಂಸ್ಕೃತ ಹೊರಗಿನಿಂದ ಬಂದಿದೆಯಂತೆ!’ : Congress MP Mohammad Javed
ಮಾಫಿಯಾಗಳನ್ನು ನರಕಕ್ಕೆ ಅಥವಾ ಜೈಲಿಗೆ ಕಳುಹಿಸುತ್ತೇನೆ ! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ : CM Yogi Adityanath
‘ಶ್ರೀಕೃಷ್ಣ ಮುಸಲ್ಮಾನರಾಗಿದ್ದರು ಮತ್ತು ದಿನಕ್ಕೆ ೫ ಬಾರಿ ನಮಾಜ್ ಮಾಡುತ್ತಿದ್ದರಂತೆ!’– Maulana Jarjis Ansari
ವಂಚನೆ ಅಥವಾ ಬ್ಲ್ಯಾಕ್ ಮೇಲ್ ಮೂಲಕ ದೈಹಿಕ ಸಂಬಂಧವಾದರೆ, ಅದನ್ನು ‘ಬಲಾತ್ಕಾರ’ ಎಂದು ಪರಿಗಣಿಸಲಾಗುವುದು! – ಮದ್ರಾಸ್ ಉಚ್ಚ ನ್ಯಾಯಾಲಯ
‘ಐ.ಆರ್.ಸಿ.ಟಿ.ಸಿ.’ಯ ಹೊಸ ಜಾಲತಾಣ ಕಾರ್ಯಾರಂಭ : ಟಿಕೆಟ್ ಕಾಯ್ದಿರಿಸುವಿಕೆ ಮತ್ತಷ್ಟು ಸುಲಭ