ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಟೀಕೆ

ಕೋಲಕಾತಾ (ಬಂಗಾಳ) – ಇತ್ತೀಚೆಗೆ ಬಾಂಗ್ಲಾದೇಶದಲ್ಲಿ ದಲಿತ ಹಿಂದುವೊಬ್ಬರ ಬರ್ಬರ ಹತ್ಯೆಯಾಗಿದೆ. ಭಾಜಪ ಇದನ್ನು ಖಂಡಿಸಿತು, ನಾವು ಪ್ರತಿಭಟನೆ ನಡೆಸಿದೆವು; ಆದರೆ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮೌನವಾಗಿದ್ದರು. ತಾವು ಮಾತನಾಡಿದರೆ ತಮ್ಮ ಮುಸ್ಲಿಂ ಮತ ಬ್ಯಾಂಕ್ ಅಸಮಾಧಾನಗೊಳ್ಳುತ್ತದೆ ಎಂಬ ಭಯ ಅವರಿಗಿತ್ತು, ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಬಂಗಾಳ ವಿಧಾನಸಭಾ ಚುನಾವಣಾ ಪ್ರಚಾರದ ನಿಮಿತ್ತ ಬಂಕುರಾದಲ್ಲಿ ಆಯೋಜಿಸಲಾಗಿದ್ದ ಸಭೆಯಲ್ಲಿ ಮಮತಾ ಬ್ಯಾನರ್ಜಿ ಅವರನ್ನು ಟೀಕಿಸಿದರು.
ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು, ಮತಗಳಿಗಾಗಿ ರಾಜಕೀಯ ಮಾಡುವ ಈ ಜನರು ಬಂಗಾಳದ ಜನಸಂಖ್ಯಾ ಸ್ವರೂಪವನ್ನು ಬದಲಾಯಿಸಲು ಪ್ರಯತ್ನಿಸುತ್ತಿದ್ದಾರೆ ಎಂದರು. ಪ್ರಸ್ತುತ ಸಮಯ ಮಹತ್ವದ್ದಾಗಿದೆ ಮತ್ತು ಭವಿಷ್ಯದ ಪೀಳಿಗೆಯ ದೃಷ್ಟಿಯಿಂದ ಕಾಂಗ್ರೆಸ್, ಎಡಪಕ್ಷಗಳು ಮತ್ತು ತೃಣಮೂಲ ಕಾಂಗ್ರೆಸ್‌ಗೆ ತಮ್ಮ ಮನಬಂದಂತೆ ವರ್ತಿಸಲು ಅವಕಾಶ ನೀಡಬೇಡಿ. ಈ ಪಕ್ಷಗಳು ಬಂಗಾಳದಲ್ಲಿ ದುರ್ಗಾಪೂಜೆ ಮತ್ತು ನವರಾತ್ರಿಯಂತಹ ಹಬ್ಬಗಳ ಸಂದರ್ಭದಲ್ಲಿ ಅಡೆತಡೆಗಳನ್ನು ಸೃಷ್ಟಿಸುತ್ತವೆ. ಇದನ್ನು ಇನ್ನು ಮುಂದೆ ಸಹಿಸಲಾಗುವುದಿಲ್ಲ.
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
“ನಾನು ಛತ್ರಪತಿ ಶಿವಾಜಿ ಮಹಾರಾಜರ ಅನುಯಾಯಿಯಾಗಿದ್ದು ರಣರಂಗ ಬಿಟ್ಟು ಓಡಿಹೋಗುವವನಲ್ಲ!”
ಭೋಜಶಾಲೆಯ ಪ್ರಕರಣದಲ್ಲಿ ಮಧ್ಯಪ್ರದೇಶ ಉಚ್ಚ ನ್ಯಾಯಾಲಯದ ತೀರ್ಪಿಗೆ ತಡೆ ನೀಡಲು ಸರ್ವೋಚ್ಚ ನ್ಯಾಯಾಲಯದ ನಿರಾಕರಣೆ
ಮೇವು ಹಗರಣ ಪ್ರಕರಣದಲ್ಲಿ ಲಾಲು ಪ್ರಸಾದ್ ಯಾದವ್ ಅವರಿಗೆ ಮಂಜೂರಾದ ಜಾಮೀನು ರದ್ದುಗೊಳಿಸಲು ಸುಪ್ರೀಂ ಕೋರ್ಟ್ ನ ನಿರಾಕರಣೆ
ಭಗವಾನ್ ಜಗನ್ನಾಥರ ರಥಯಾತ್ರೆಗೂ ಮುನ್ನ ಗುಜರಾತ್ನಲ್ಲಿ ೫ ಭಯೋತ್ಪಾದಕರ ಬಂಧನ
ಬ್ರಿಟನ್: ದೇವಸ್ಥಾನದ ಜಾಗ ಮುಸಲ್ಮಾನರಿಗೆ ಹರಾಜು !