ಪೊಲೀಸ್ ಇಲಾಖೆಯ ಭ್ರಷ್ಟಾಚಾರವನ್ನು ಬಯಲು ಮಾಡಿದ ಘಟನೆ!

ವಿಜಯಪುರ – ತನ್ನ ಹಿರಿಯ ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಬೇಸತ್ತ ಪೊಲೀಸ್ ಪೇದೆಯೊಬ್ಬರು ನೇರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಗೃಹ ಸಚಿವ ಜಿ. ಪರಮೇಶ್ವರ್ ಅವರಿಗೆ ಪತ್ರ ಬರೆದು ದಯಾಮರಣಕ್ಕೆ ಅನುಮತಿ ಕೋರಿದ್ದಾರೆ. ಈ ಪತ್ರವು ಪೊಲೀಸ್ ಇಲಾಖೆಯಲ್ಲಿ ಸಂಚಲನ ಮೂಡಿಸಿದ್ದು, ಪ್ರಕರಣದ ಉನ್ನತ ಮಟ್ಟದ ತನಿಖೆ ನಡೆಯುವ ಸಾಧ್ಯತೆಯಿದೆ.
ಈ ಪತ್ರದಲ್ಲಿ ಪೇದೆಯು , “ವಿಜಯಪುರದ ಆದರ್ಶನಗರ ಪೊಲೀಸ್ ಠಾಣೆಯಿಂದ ತಿಕೋಟಾ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಿಸಿಕೊಳ್ಳಲು, ಆದರ್ಶನಗರ ಠಾಣೆಯ ಪೊಲೀಸ್ ಉಪನಿರೀಕ್ಷಕ (PSI) ಸೀತಾರಾಮ್ ಲಮಾಣಿ ಅವರು ಲಂಚ ನೀಡುವಂತೆ ನನ್ನ ಮೇಲೆ ಸತತವಾಗಿ ಒತ್ತಡ ಹೇರುತ್ತಿದ್ದಾರೆ ಮತ್ತು ಮಾನಸಿಕ ಕಿರುಕುಳ ನೀಡುತ್ತಿದ್ದಾರೆ. ಪ್ರತಿಯೊಂದು ವಿಷಯದಲ್ಲೂ ಹಣದ ಬೇಡಿಕೆ ಇಡುತ್ತಾರೆ ಮತ್ತು ಹಣ ನೀಡದಿದ್ದರೆ ನನ್ನ ಮೇಲೆ ಸುಳ್ಳು ಆರೋಪ ಹೊರಿಸಿ ಪೀಡಿಸುತ್ತಾರೆ. ಅವರ ಈ ವರ್ತನೆಯಿಂದಾಗಿ ನನಗೆ ಶಾಂತಿಯಿಂದ ಕೆಲಸ ಮಾಡಲು ಸಾಧ್ಯವಾಗುತ್ತಿಲ್ಲ. ಇದರ ಪರಿಣಾಮ ನನ್ನ ಕುಟುಂಬದ ಮೇಲೆಯೂ ಬೀರಿದೆ” ಎಂದು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!