
ನವ ದೆಹಲಿ – ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕರೆ ಮಾಡಿ ಕೊಲ್ಲಿ ರಾಷ್ಟ್ರಗಳ ಪರಿಸ್ಥಿತಿಯ ಬಗ್ಗೆ ಚರ್ಚಿಸಿದರು. ಇದರಲ್ಲಿ ಹಾರ್ಮುಜ್ ಜಲಸಂಧಿಯ ಮೂಲಕ ನೌಕೆಗಳ ಸಂಚಾರ ಮಾರ್ಗವನ್ನು ಸುರಕ್ಷಿತವಾಗಿಡುವ ಪ್ರಮುಖ ವಿಷಯವೂ ಸೇರಿತ್ತು. ಯುದ್ಧ ಪ್ರಾರಂಭವಾದ ನಂತರ ಟ್ರಂಪ್ ಅವರು ಮೋದಿಯವರೊಂದಿಗೆ ಮಾತನಾಡುತ್ತಿರುವುದು ಇದು ಎರಡನೇ ಬಾರಿ.
ನಾವೆಲ್ಲರೂ ನಿಮ್ಮನ್ನು ಪ್ರೀತಿಸುತ್ತೇವೆ! – ಟ್ರಂಪ್
ಭಾರತದಲ್ಲಿನ ಅಮೆರಿಕದ ರಾಯಭಾರಿ ಸೆರ್ಜಿಯೊ ಗೋರ್ ಅವರು ಈ ಸಂಭಾಷಣೆಯ ಬಗ್ಗೆ ಮಾಹಿತಿ ನೀಡಿದ್ದಾರೆ. ಭಾರತ ಮತ್ತು ಅಮೆರಿಕ ಇಂಧನ ಕ್ಷೇತ್ರ ಸೇರಿದಂತೆ ಇತರ ಕ್ಷೇತ್ರಗಳಲ್ಲಿ ಶೀಘ್ರದಲ್ಲೇ ದೊಡ್ಡ ಒಪ್ಪಂದಗಳಿಗೆ ಸಹಿ ಹಾಕಲಿವೆ ಎಂದು ನಿರೀಕ್ಷಿಸಲಾಗಿದೆ ಎಂದು ಗೋರ್ ತಿಳಿಸಿದರು. ದೂರವಾಣಿಯಲ್ಲಿ ನಡೆದ ಸುಮಾರು ೪೦ ನಿಮಿಷಗಳ ಸಂಭಾಷಣೆಯಲ್ಲಿ ಟ್ರಂಪ್ ಅವರು ಮೋದಿಯವರಿಗೆ ಕೊಲ್ಲಿ ರಾಷ್ಟ್ರಗಳ ಪರಿಸ್ಥಿತಿಯ ಬಗ್ಗೆ ಮಾಹಿತಿ ನೀಡಿದರು. ಸಂಭಾಷಣೆಯ ಕೊನೆಯಲ್ಲಿ ಟ್ರಂಪ್ ಮೋದಿಯವರಿಗೆ, ‘ನಾವು ನಿಮ್ಮನ್ನು ಪ್ರೀತಿಸುತ್ತೇವೆ ಎಂದು ನಾನು ನಿಮಗೆ ಹೇಳಲು ಬಯಸುತ್ತೇನೆ’ ಎಂದರು. (‘ಟ್ರಂಪ್ ಅವರ ಪ್ರೀತಿ ಮತ್ತು ಶತ್ರುತ್ವ ಎರಡೂ ಭಾರತಕ್ಕೆ ಬೇಡ’ ಎಂದೇ ಭಾರತೀಯರು ಹೇಳುತ್ತಾರೆ; ಏಕೆಂದರೆ ಟ್ರಂಪ್ ಅವರ ಶತ್ರುವಾಗುವುದಕ್ಕಿಂತ ಮಿತ್ರನಾಗುವುದು ಹೆಚ್ಚು ಅಪಾಯಕಾರಿ ಎಂದು ಹೇಳಲಾಗುತ್ತದೆ! – ಸಂಪಾದಕರು)
ಹಾರ್ಮುಜ್ ಜಲಸಂಧಿಯನ್ನು ತೆರೆಯುವ ಬಗ್ಗೆ ಚರ್ಚೆ! – ಪ್ರಧಾನಿ ಮೋದಿ
ಪ್ರಧಾನಿ ಮೋದಿ ಅವರು ಎಕ್ಸ್‌ನಲ್ಲಿ, ‘ನನ್ನ ಸ್ನೇಹಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಂದ ನನಗೆ ದೂರವಾಣಿ ಕರೆ ಬಂದಿತ್ತು. ವಿವಿಧ ಕ್ಷೇತ್ರಗಳಲ್ಲಿನ ದ್ವಿಪಕ್ಷೀಯ ಸಹಕಾರದಲ್ಲಿ ನಾವು ಸಾಧಿಸಿರುವ ಮಹತ್ವದ ಪ್ರಗತಿಯನ್ನು ನಾವು ಪರಾಮರ್ಶಿಸಿದೆವು. ಎಲ್ಲಾ ಕ್ಷೇತ್ರಗಳಲ್ಲಿ ನಮ್ಮ ಸಮಗ್ರ ಜಾಗತಿಕ ಕಾರ್ಯತಂತ್ರದ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸಲು ನಾವು ಬದ್ಧರಾಗಿದ್ದೇವೆ. ಈ ಚರ್ಚೆಯಲ್ಲಿ ನಾವು ಕೊಲ್ಲಿಯ ಪರಿಸ್ಥಿತಿಯ ಬಗ್ಗೆಯೂ ಚರ್ಚಿಸಿದೆವು, ಹಾಗೆಯೇ ಹಾರ್ಮುಜ್ ಜಲಸಂಧಿಯನ್ನು ತೆರೆಯುವುದು ಮತ್ತು ಅದನ್ನು ಸುರಕ್ಷಿತವಾಗಿಡುವ ಬಗ್ಗೆ ಒತ್ತು ನೀಡಿದೆವು’ ಎಂದು ತಿಳಿಸಿದ್ದಾರೆ.
ಅರುಣಾಚಲ ಪ್ರದೇಶದಲ್ಲಿ ಚೀನಾ ಸೇನೆಯ ನುಸುಳುವಿಕೆ ನಡೆದಿಲ್ಲ! – ಭಾರತೀಯ ಸೇನೆಯ ಸ್ಪಷ್ಟನೆ
ಶ್ರೀರಾಮ ಮಂದಿರದ ದಾನ ಕಳ್ಳತನದ ದೊಡ್ಡ ಹೆಸರುಗಳನ್ನು ಬಹಿರಂಗಪಡಿಸಿದರೆ, ಅವರು ನನ್ನನ್ನು ಕೊಲ್ಲುವರು! – ಪಂಡಿತ್ ಧೀರೇಂದ್ರಕೃಷ್ಣ ಶಾಸ್ತ್ರಿ
‘ಯಾರು ನೀರನ್ನು ತಡೆಯುತ್ತಾರೋ, ಅವರ ಕೈಗಳನ್ನು ಮುರಿಯುತ್ತೇವೆ !’
ಪಾಕಿಸ್ತಾನವನ್ನು ಮತ್ತೆ ‘ಎಫ್ಎಟಿಎಫ್’ನ ‘ಗ್ರೇ ಲಿಸ್ಟ್’ಗೆ ಸೇರಿಸಲು ಭಾರತದ ಸಿದ್ಧತೆ
ಪಾಕಿಸ್ತಾನದಲ್ಲಿ 125 ವರ್ಷ ಹಳೆಯ ಗುರುದ್ವಾರವನ್ನು ನೆಲಸಮಗೊಳಿಸಲು ಯತ್ನ : Pakistan Gurdwara
ಕರಾಚಿ ದಾಳಿಯ ಹಿಂದೆ ಭಾರತದ ಕೈವಾಡವಿದೆ ಎಂಬ ಆರೋಪವನ್ನು ತಳ್ಳಿಹಾಕಿದ ಭಾರತ! : India rejects Pakistan’s allegation