ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ !
ನೇಮಕಾತಿ ತಡೆಹಿಡಿಯಲು ಜಿಲ್ಲಾಧ್ಯಕ್ಷರ ಆದೇಶ !

ಕಾರವಾರ – ಕಾಂಗ್ರೆಸ್ ನ ಉತ್ತರ ಕನ್ನಡ ಜಿಲ್ಲೆಯ ಬನವಾಸಿ ವಿಭಾಗದ ಅಧ್ಯಕ್ಷರಾಗಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸಿದ್ದವೀರೇಶ ಮೇಘರಾಜು ಮತ್ತು ಉಪಾಧ್ಯಕ್ಷರಾಗಿ ಅರವಿಂದ ತೆಲಗುಂದ ಅವರನ್ನು ನೇಮಕ ಮಾಡಲಾಗಿದೆ. ಈ ಇಬ್ಬರೂ ಯಲ್ಲಾಪುರದ ಭಾಜಪ ಶಾಸಕ ಶಿವರಾಮ ಹೆಬ್ಬಾರ್ ಅವರ ಆಪ್ತರಾಗಿದ್ದು, ರಾಷ್ಟ್ರೀಯ ಸ್ವಯಂಸೇವಕ ಸಂಘದಲ್ಲಿ ಸಕ್ರಿಯರಾಗಿದ್ದಾರೆ. ಕಾಂಗ್ರೆಸ್ ಕಾರ್ಯಕಾರಿಣಿಯ ಮಹತ್ವದ ಹುದ್ದೆಗೆ ಭಾಜಪದೊಂದಿಗೆ ನಿಕಟ ಸಂಬಂಧ ಹೊಂದಿರುವ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಕರ್ತರನ್ನು ನೇಮಿಸಿರುವುದರಿಂದ ಕಾಂಗ್ರೆಸ್ ಕಾರ್ಯಕರ್ತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಕೆಲವು ಕಾರ್ಯಕರ್ತರು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಿಗೆ ದೂರು ನೀಡಿದ್ದಾರೆ.
ಕಾಂಗ್ರೆಸ್‌ನ ಅನೇಕ ನಾಯಕರು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಟ್ಟಾ ವಿರೋಧಿಗಳಾಗಿದ್ದು, ಈ ಹಿಂದೆಯೇ ಸಂಘವನ್ನು ಟೀಕಿಸಿದ್ದಾರೆ. ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಇತ್ತೀಚೆಗಷ್ಟೇ ರಾಷ್ಟ್ರೀಯ ಸ್ವಯಂ ಸೇವಕ ಸಂಘವನ್ನು ವಿಷಪೂರಿತ ಹಾವಿಗೆ ಹೋಲಿಸಿದ್ದರು. ಅವರ ಪುತ್ರ ಮತ್ತು ರಾಜ್ಯದ ಕಾಂಗ್ರೆಸ್ ಸರಕಾರದ ಸಚಿವ ಪ್ರಿಯಾಂಕ್ ಖರ್ಗೆ ಅವರು ಕೂಡ ರಾಜ್ಯದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘವನ್ನು ನಿಷೇಧಿಸಬೇಕೆಂದು ಒತ್ತಾಯಿಸಿದ್ದು ದೊಡ್ಡ ವಿವಾದಕ್ಕೆ ಕಾರಣವಾಗಿತ್ತು. ಇಂತಹ ಪರಿಸ್ಥಿತಿಯಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಕರ್ತರೇ ಕಾಂಗ್ರೆಸ್ ಪದಾಧಿಕಾರಿಗಳಾಗಿ ನೇಮಕಗೊಂಡಿರುವುದು ಪಕ್ಷದಲ್ಲಿ ದೊಡ್ಡ ಗದ್ದಲಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಾಯಿ ಗಾಂವಕರ್ ಅವರು ಈ ನೇಮಕಾತಿಗಳನ್ನು ತಡೆಹಿಡಿಯುವಂತೆ ಆದೇಶಿಸಿದ್ದಾರೆ.
‘ಡಾಬರ್’ ಕಂಪನಿಯ ಮೋಸಂಬಿ ಜ್ಯೂಸ್ ಪ್ಯಾಕ್ ನಲ್ಲಿ ಕಪ್ಪು ಪಾಚಿ !
ರೈಲ್ವೆಯ ವಾತಾನುಕೂಲಿತ ಬೋಗಿಗಳಿಂದ ಚಾದರ, ಹೊದಿಕೆ ಮತ್ತು ಟವೆಲ್ ಕಳ್ಳತನದ ಘಟನೆಗಳಲ್ಲಿ ಏರಿಕೆ!
ಇಂಗ್ಲಿಷ್ ಭಾಷೆಯನ್ನು ಭಾರತದ ಸ್ಥಳೀಯ ಭಾಷೆ ಎಂದು ಪರಿಗಣಿಸಬಹುದೇ? – ಸುಪ್ರೀಂ ಕೋರ್ಟ್ ಪ್ರಶ್ನೆ
ನಮ್ಮ ಮತ್ತು ಭಾರತದ ಡಿ.ಎನ್.ಎ. ಒಂದೇ! – Afghanistan Minister
ಹಿಂದೂಗಳ ತೀವ್ರ ವಿರೋಧದ ನಂತರ ಕಲಾವಿದೆಯಿಂದ ಕ್ಷಮೆಯಾಚನೆ!
ಹಡಪ್ಸರ್ನಲ್ಲಿ ಹಿಂದುತ್ವನಿಷ್ಠ ಕಾರ್ಯಕರ್ತನ ಮೇಲೆ ಸಾಹಿಲ್ ಶೇಖ್ ಮತ್ತು ಆತನ ಗ್ಯಾಂಗ್ನಿಂದ ಹಿಂಸಾತ್ಮಕ ಹಲ್ಲೆ!