
ಬೆಂಗಳೂರು – ನಗರದ ಆರ್.ಆರ್. ನಗರ ಪ್ರದೇಶದಲ್ಲಿ 42 ವರ್ಷದ ವೆಂಕಟೇಶ್ ಎಂಬ ವ್ಯಕ್ತಿ ತನ್ನ ವೃದ್ಧ ತಾಯಿಯನ್ನು ಹತ್ಯೆ ಮಾಡಿರುವುದು ಬೆಳಕಿಗೆ ಬಂದಿದೆ. ಆತನ ತಾಯಿ ಕಳೆದ 4-5 ವರ್ಷಗಳಿಂದ ಪಾರ್ಶ್ವವಾಯುವಿನಿಂದ ಹಾಸಿಗೆ ಹಿಡಿದಿದ್ದರು. ತಾಯಿಯ ದೀರ್ಘಕಾಲದ ಅನಾರೋಗ್ಯದಿಂದ ಬೇಸತ್ತ ವೆಂಕಟೇಶ್, ಆಕೆಯನ್ನು ನಾಲ್ಕನೇ ಮಹಡಿಯಿಂದ ಕೆಳಕ್ಕೆ ತಳ್ಳಿ ಕೊಲೆ ಮಾಡಿದ್ದಾನೆ. ಮೃತ ಮಹಿಳೆಯನ್ನು 72 ವರ್ಷದ ಸಾವಿತ್ರಮ್ಮ ಎಂದು ಗುರುತಿಸಲಾಗಿದೆ. ಪೊಲೀಸರು ಈ ಪ್ರಕರಣದಲ್ಲಿ ಮೊಕದ್ದಮೆ ದಾಖಲಿಸಿಕೊಂಡು ವೆಂಕಟೇಶ್‌ನನ್ನು ಬಂಧಿಸಿದ್ದಾರೆ.
ಈ ಪ್ರಕರಣದಲ್ಲಿ ಆರ್ಥಿಕ ವಿಚಾರಗಳ ಬಗ್ಗೆಯೂ ತನಿಖೆ ನಡೆಸಲಾಗುತ್ತಿದ್ದು, ಆರೋಪಿಯ ಮಾನಸಿಕ ಸ್ಥಿತಿಯನ್ನು ತಿಳಿಯಲು ಆತನ ವೈದ್ಯಕೀಯ ಪರೀಕ್ಷೆ ನಡೆಸಲಾಗುವುದು. ಪೊಲೀಸರ ಮಾಹಿತಿಯ ಪ್ರಕಾರ, ವೆಂಕಟೇಶ್ ವಿವಾಹಿತನಾಗಿದ್ದು ಪತ್ನಿ ಮತ್ತು ತಾಯಿಯೊಂದಿಗೆ ವಾಸಿಸುತ್ತಿದ್ದನು. ಆತ ಸಾವಿತ್ರಮ್ಮ ಅವರನ್ನು ಛಾವಣಿಯ ಮೇಲೆ ಕರೆದೊಯ್ದು ನಂತರ ಕೆಳಕ್ಕೆ ತಳ್ಳಿದ್ದನು. ಅಲ್ಲಿಂದ ಹೋಗುತ್ತಿದ್ದ ಜನರು ಈ ಘಟನೆಯನ್ನು ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!