ಟರ್ಕಿ ಶಾಲೆಗಳಲ್ಲಿ ಗುಂಡಿನ ದಾಳಿ ನಡೆದ ಇದು ಸತತ ಎರಡನೇ ಘಟನೆ

ಅಂಕಾರಾ (ತುರ್ಕಿಯೆ) – ದೇಶದ ಕಹ್ರಮನ್ಮರಾಶ್ ನಗರದ ಮಾಧ್ಯಮಿಕ ಶಾಲೆಯೊಂದರಲ್ಲಿ ಏಪ್ರಿಲ್ ೧೫ ರಂದು ೧೩ ವರ್ಷದ ವಿದ್ಯಾರ್ಥಿಯೊಬ್ಬ ಗುಂಡಿನ ದಾಳಿ ನಡೆಸಿದ್ದಾನೆ. ಈ ದಾಳಿಯಲ್ಲಿ ಮೂವರು ವಿದ್ಯಾರ್ಥಿಗಳು ಮತ್ತು ಓರ್ವ ಶಿಕ್ಷಕ ಸಾವನ್ನಪ್ಪಿದ್ದಾರೆ, ಹಾಗೂ ಸುಮಾರು ೨೦ ಜನರು ಈ ದಾಳಿಯಲ್ಲಿ ಗಾಯಗೊಂಡಿದ್ದಾರೆ. ದಾಳಿ ಮಾಡಿದ ಬಾಲಕ ನಂತರ ತನಗೂ ಗುಂಡು ಹಾರಿಸಿಕೊಂಡಿದ್ದಾನೆ. ಟರ್ಕಿ ಶಾಲೆಗಳಲ್ಲಿ ಸತತವಾಗಿ ಇಂತಹ ಎರಡು ದಾಳಿಗಳು ನಡೆದಿವೆ. ಇದರಿಂದ ಜನರಲ್ಲಿ ಭೀತಿಯ ವಾತಾವರಣ ನಿರ್ಮಾಣವಾಗಿದೆ.
೧. ದಾಳಿ ಮಾಡಿದವನು ಎಂಟನೇ ತರಗತಿಯ ವಿದ್ಯಾರ್ಥಿಯಾಗಿದ್ದ ಎಂದು ಕಹ್ರಮನ್ಮರಾಶ್ ನಗರದ ರಾಜ್ಯಪಾಲ ಮುಕೆರ್ರಮ್ ಉನ್ಲುಯೆರ್ ತಿಳಿಸಿದ್ದಾರೆ. ಬಾಲಕ ತನ್ನ ಬ್ಯಾಗ್‌ನಲ್ಲಿ ೫ ಶಸ್ತ್ರಗಳು ಮತ್ತು ೭ ಮ್ಯಾಗಜೀನ್‌ಗಳನ್ನು ಇಟ್ಟುಕೊಂಡು ಶಾಲೆಗೆ ಬಂದಿದ್ದನು. ಪ್ರಾಥಮಿಕ ಮಾಹಿತಿಯ ಪ್ರಕಾರ, ಮಾಜಿ ಪೊಲೀಸ್ ಅಧಿಕಾರಿಯಾಗಿದ್ದ ಆತನ ತಂದೆಯ ಶಸ್ತ್ರಗಳು ಇದಾಗಿರಬಹುದು ಎನ್ನಲಾಗಿದೆ.
೨. ಏಪ್ರಿಲ್ ೧೪ ರಂದು ದೇಶದ ಸಾನ್ಲಿಉರ್ಫಾ ಪ್ರಾಂತ್ಯದ ಶಾಲೆಯೊಂದರಲ್ಲಿ ಗುಂಡಿನ ದಾಳಿ ನಡೆದಿತ್ತು. ೧೮ ವರ್ಷದ ಯುವಕನೊಬ್ಬ ತನ್ನ ಹಳೆಯ ಶಾಲೆಗೆ ನುಗ್ಗಿ ಏಕಾಏಕಿ ಗುಂಡಿನ ದಾಳಿ ನಡೆಸಿದ್ದನು. ಈ ದಾಳಿಯಲ್ಲಿ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಸೇರಿದಂತೆ ೧೬ ಜನರು ಗಾಯಗೊಂಡಿದ್ದರು. ಆರೋಪಿಯು ನಂತರ ತನ್ನ ಮೇಲೆ ತಾನೇ ಗುಂಡು ಹಾರಿಸಿಕೊಂಡಿದ್ದನು.
ಹುಡುಗಿಯ ಮೃತದೇಹವು ಕೆರೆಯಲ್ಲಿ ತೇಲುತ್ತಿದ್ದ ಸ್ಥಿತಿಯಲ್ಲಿ ಪತ್ತೆ!
ನಾವು ಹಿಂದೂ ಧರ್ಮದ ಮೇಲಿನ ದ್ವೇಷದ ವಿರುದ್ಧ ದೃಢವಾಗಿ ನಿಲ್ಲಬೇಕು !
ಯುಕ್ರೇನ್-ರಷ್ಯಾ ಯುದ್ಧದಲ್ಲಿ ಭಾರತೀಯ ಸೈನಿಕರನ್ನು ಶಾಂತಿ ಕಾರ್ಯಾಚರಣೆಗಾಗಿ ಕಳುಹಿಸುವ ಉಪರಾಷ್ಟ್ರಪತಿ ಜೆ.ಡಿ. ವ್ಯಾನ್ಸ್ ಅವರ ಪ್ರಸ್ತಾವನೆ : Indian Peace Keeping for Ukraine
ಸಿಂಧೂ ನದಿ ನೀರು ಹಂಚಿಕೆ ಒಪ್ಪಂದದ ವಿಚಾರದಲ್ಲಿ ಪಾಕಿಸ್ತಾನದಿಂದ ಕಾಶ್ಮೀರ ಗಡಿಯಲ್ಲಿ 35 ಡ್ರೋನ್ ವಿರೋಧಿ ಘಟಕಗಳ ನಿಯೋಜನೆ! : Indus Water Treaty Crisis
‘ಮಾನವಾಧಿಕಾರ ಉಲ್ಲಂಘನೆಯಾದರೆ ಭಾರತದ ಮೇಲೆ ಟೀಕಿಸಲು ಹಿಂಜರಿಯುವುದಿಲ್ಲ!'(ವಂತೆ) : US Lawmakers
ಮಾನವ ಹಕ್ಕುಗಳ ಉಲ್ಲಂಘನೆ ವಿರುದ್ಧ ಧ್ವನಿ ಎತ್ತಿದ ಮೆಹರಂಗ್ ಬಲೋಚ್ ಗೆ ಪಾಕಿಸ್ತಾನದಿಂದ ಜೀವಾವಧಿ ಶಿಕ್ಷೆ !