
ಇಸ್ಲಾಮಾಬಾದ್ (ಪಾಕಿಸ್ತಾನ) – ಇರಾನ್ ಮತ್ತು ಅಮೆರಿಕ ನಡುವಿನ ಯುದ್ಧದಲ್ಲಿ ಮಧ್ಯಸ್ಥಿಕೆ ವಹಿಸಿ ಸಾವಿರಾರು ಕೋಟಿ ರೂಪಾಯಿಗಳ ‘ದಲ್ಲಾಳಿ’ (ಕಮಿಷನ್) ಪಡೆಯುತ್ತಿರುವ ಪಾಕಿಸ್ತಾನದಲ್ಲಿ ಪ್ರಸ್ತುತ ಎಲ್‌ಪಿಜಿ, ವಿದ್ಯುತ್ ಸೇರಿದಂತೆ ಮೂಲಭೂತ ಸೌಕರ್ಯಗಳ ಕೊರತೆಯು ತೀವ್ರವಾಗಿರುವುದು ಕಂಡುಬರುತ್ತಿದೆ. ಪಾಕಿಸ್ತಾನದಲ್ಲಿ ಎಲ್‌ಪಿಜಿ ಗ್ಯಾಸ್‌ಗಳ ಘಟಕಗಳು ಬಹುತೇಕ ಮುಚ್ಚುವ ಹಂತಕ್ಕೆ ತಲುಪಿವೆ. ಎಲ್‌ಪಿಜಿ ಗ್ಯಾಸ್‌ಅನ್ನು ಹೊತ್ತ ಯಾವ ನೌಕೆಯೂ ಪಾಕಿಸ್ತಾನವನ್ನು ತಲುಪುತ್ತಿಲ್ಲ ಎಂಬಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಪಾಕಿಸ್ತಾನದಲ್ಲಿ ಪ್ರತಿದಿನ 7 ಗಂಟೆಗಳಿಗಿಂತಲೂ ಹೆಚ್ಚು ಕಾಲ ವಿದ್ಯುತ್ ಪೂರೈಕೆ ಸ್ಥಗಿತಗೊಳ್ಳುತ್ತಿದೆ. ಆಸ್ಪತ್ರೆಗಳಲ್ಲಿ ವಿದ್ಯುತ್ ಇಲ್ಲದ ಕಾರಣ ಶಸ್ತ್ರಚಿಕಿತ್ಸೆಗಳನ್ನು ಮುಂದೂಡಲಾಗುತ್ತಿದೆ. ಅಂತರರಾಷ್ಟ್ರೀಯ ಪರಿಸ್ಥಿತಿಯಿಂದಾಗಿ ಅನಿಲ ಪೂರೈಕೆಯಲ್ಲಿ ಸಮಸ್ಯೆ ಉಂಟಾಗಿದೆ, ಇದರಿಂದಾಗಿ ವಿದ್ಯುತ್ ಉತ್ಪಾದನೆ ಕಡಿಮೆಯಾಗಿದೆ ಎಂದು ಪಾಕಿಸ್ತಾನದ ಇಂಧನ ಸಚಿವ ಓವೈಸ್ ಲೇಘಾರಿ ತಿಳಿಸಿದ್ದಾರೆ. ಇದೇ ಕಾರಣಗಳಿಂದಾಗಿ ವಿದ್ಯುತ್ ಪೂರೈಕೆಯು ಸಂಪೂರ್ಣವಾಗಿ ಸ್ಥಗಿತಗೊಂಡಿದೆ.
ವಿದ್ಯುತ್ ಅಭಾವವಿರುವುದರಿಂದ ಪಾಕಿಸ್ತಾನದ ದೊಡ್ಡ ನಗರಗಳಲ್ಲಿಯೂ ಪ್ರತಿದಿನ 7 ಗಂಟೆಗಳ ಕಾಲ ವಿದ್ಯುತ್ ಇಲ್ಲ. ರಾತ್ರಿಯ ವೇಳೆಯೂ ವಿದ್ಯುತ್ ಕಡಿತವಾಗುತ್ತಿದೆ. ರಾತ್ರಿ 8 ಗಂಟೆಯ ಮೊದಲೇ ಮಾರುಕಟ್ಟೆಗಳನ್ನು ಮುಚ್ಚುವಂತೆ ಸರಕಾರದಿಂದ ಸೂಚನೆ ನೀಡಲಾಗಿದೆ.
ಅರುಣಾಚಲ ಪ್ರದೇಶದಲ್ಲಿ ಚೀನಾ ಸೇನೆಯ ನುಸುಳುವಿಕೆ ನಡೆದಿಲ್ಲ! – ಭಾರತೀಯ ಸೇನೆಯ ಸ್ಪಷ್ಟನೆ
ಶ್ರೀರಾಮ ಮಂದಿರದ ದಾನ ಕಳ್ಳತನದ ದೊಡ್ಡ ಹೆಸರುಗಳನ್ನು ಬಹಿರಂಗಪಡಿಸಿದರೆ, ಅವರು ನನ್ನನ್ನು ಕೊಲ್ಲುವರು! – ಪಂಡಿತ್ ಧೀರೇಂದ್ರಕೃಷ್ಣ ಶಾಸ್ತ್ರಿ
‘ಯಾರು ನೀರನ್ನು ತಡೆಯುತ್ತಾರೋ, ಅವರ ಕೈಗಳನ್ನು ಮುರಿಯುತ್ತೇವೆ !’
ಪಾಕಿಸ್ತಾನವನ್ನು ಮತ್ತೆ ‘ಎಫ್ಎಟಿಎಫ್’ನ ‘ಗ್ರೇ ಲಿಸ್ಟ್’ಗೆ ಸೇರಿಸಲು ಭಾರತದ ಸಿದ್ಧತೆ
ಪಾಕಿಸ್ತಾನದಲ್ಲಿ 125 ವರ್ಷ ಹಳೆಯ ಗುರುದ್ವಾರವನ್ನು ನೆಲಸಮಗೊಳಿಸಲು ಯತ್ನ : Pakistan Gurdwara
ಕರಾಚಿ ದಾಳಿಯ ಹಿಂದೆ ಭಾರತದ ಕೈವಾಡವಿದೆ ಎಂಬ ಆರೋಪವನ್ನು ತಳ್ಳಿಹಾಕಿದ ಭಾರತ! : India rejects Pakistan’s allegation