ವೇತಾಳ ದೇವಸ್ಥಾನದ ವಿಡಂಬನೆ ಪ್ರಕರಣ

ಖೋಪೋಲಿ (ರಾಯಗಡ ಜಿಲ್ಲೆ) – ಇಲ್ಲಿನ ಲವ್ಹೇಜ್ ಗ್ರಾಮದ ವೇತಾಳ ದೇವಸ್ಥಾನದ ವಿಡಂಬನೆ ಪ್ರಕರಣದಲ್ಲಿ ಪೌರಾಡಳಿತ ಮತ್ತು ಪೊಲೀಸರಿಂದ ಸಮರ್ಪಕ ಪ್ರತಿಕ್ರಿಯೆ ಸಿಗದ ಕಾರಣ ಗ್ರಾಮಸ್ಥರು ತೀವ್ರ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದ್ದಾರೆ. ಗ್ರಾಮದ ಹನುಮಾನ್ ಮಂದಿರದಲ್ಲಿ ನಡೆದ ಸಭೆಯಲ್ಲಿ ಗ್ರಾಮಸ್ಥರು ಒಕ್ಕೊರಲಿನಿಂದ ಪ್ರತಿಭಟನೆ ನಡೆಸಲು ನಿರ್ಧರಿಸಿದರು. ಆರೋಪಿಗಳನ್ನು ಕೂಡಲೇ ಬಂಧಿಸಬೇಕೆಂದು ಅವರು ಒತ್ತಾಯಿಸಿದ್ದಾರೆ. ಇಲ್ಲಿ ಕಳೆದ 50 ವರ್ಷಗಳಿಗೂ ಹೆಚ್ಚು ಕಾಲದಿಂದ ವೇತಾಳ ದೇವಸ್ಥಾನವಿದೆ. ಗ್ರಾಮಸ್ಥರು ಇಲ್ಲಿ ನಿಯಮಿತವಾಗಿ ಪೂಜೆ ಸಲ್ಲಿಸುತ್ತಿದ್ದರು; ಆದರೆ ಇಲ್ಲಿನ ಒಬ್ಬ ಗುತ್ತಿಗೆದಾರನು ರಾತ್ರಿಯ ಸಮಯದಲ್ಲಿ ಈ ದೇವಸ್ಥಾನವನ್ನು ಭಾಗಶಃ ಸ್ಥಳಾಂತರಿಸಿದ್ದಾನೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮಸ್ಥರು ಪ್ರತಿಭಟನಾ ಮೆರವಣಿಗೆಯನ್ನೂ ನಡೆಸಿದ್ದರು. ಆ ಸಮಯದಲ್ಲಿ ನಗರಸಭೆ ಅಧ್ಯಕ್ಷರಾದ ಕುಲದೀಪ್ ಶೇಟೆಯವರು ಶೀಘ್ರದಲ್ಲೇ ನ್ಯಾಯ ಒದಗಿಸುವುದಾಗಿ ಭರವಸೆ ನೀಡಿದ್ದರು; ಆದರೆ ಈ ಬಗ್ಗೆ ಯಾವುದೇ ದೃಢವಾದ ಕ್ರಮ ಕೈಗೊಂಡಿಲ್ಲ. (ಈ ಬಗ್ಗೆ ನಗರಾಧ್ಯಕ್ಷರು ಏನು ಹೇಳುತ್ತಾರೆ? – ಸಂಪಾದಕರು). ಪೊಲೀಸರು ಸಹ ಈ ವಿಷಯದಲ್ಲಿ ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!