ಹಳೆ ದ್ವೇಷದ ಹಿನ್ನೆಲೆಯಲ್ಲಿ ಭಾರತೀಯ ಮೂಲದವರಿಂದಲೇ ಕೊಲೆ ನಡೆದಿರುವ ಶಂಕೆ

ರೋಮ್ (ಇಟಲಿ) – ಇಟಲಿಯ ಕೋವೊ ಎಂಬಲ್ಲಿ ಗುರುದ್ವಾರದ ಹೊರಗೆ ಅಪರಿಚಿತರು ಗುಂಡಿನ ದಾಳಿ ನಡೆಸಿ, ಗುರುದ್ವಾರದ ರಾಜಿಂದರ್ ಸಿಂಗ್ (೪೮ ವರ್ಷ) ಮತ್ತು ಗುರಮೀತ್ ಸಿಂಗ್ (೪೮ ವರ್ಷ) ಎಂಬ ಇಬ್ಬರು ಸೇವಕರನ್ನು ಹತ್ಯೆ ಮಾಡಿದ್ದಾರೆ. ಈ ಗುಂಡಿನ ಚಕಮಕಿಯಲ್ಲಿ ಇನ್ನೊಬ್ಬರು ಗಾಯಗೊಂಡಿದ್ದು, ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಪೊಲೀಸರು ಈ ಘಟನೆಯ ತನಿಖೆ ನಡೆಸುತ್ತಿದ್ದಾರೆ. ಪೊಲೀಸರ ಪ್ರಾಥಮಿಕ ತನಿಖೆಯಿಂದ ಗುಂಡು ಹಾರಿಸಿದವರು ಭಾರತೀಯ ಮೂಲದವರೆಂದು ತಿಳಿದುಬಂದಿದೆ. ಈ ಪ್ರಕರಣವು ಆಂತರಿಕ ದ್ವೇಷಕ್ಕೆ ಸಂಬಂಧಿಸಿದೆ ಎನ್ನಲಾಗಿದೆ. ಮೃತ ಸೇವಕರು ದೀರ್ಘಕಾಲದಿಂದ ಗುರುದ್ವಾರದಲ್ಲಿ ಸೇವಕರಾಗಿ ಕೆಲಸ ಮಾಡುತ್ತಿದ್ದರು.
ಗುರುದ್ವಾರದಲ್ಲಿ ಬೈಸಾಕಿ (ಖಾಲ್ಸಾ ಪಂಥದ ಸ್ಥಾಪನಾ ದಿನ) ಅಂಗವಾಗಿ ಏಪ್ರಿಲ್ ೧೮ ರಂದು ನಗರ ಕೀರ್ತನೆಯ ಸಿದ್ಧತೆ ನಡೆಯುತ್ತಿತ್ತು. ಇಬ್ಬರು ಸೇವಕರು ರಾತ್ರಿ ೧೨ ಗಂಟೆಯ ಸುಮಾರಿಗೆ ಗುರುದ್ವಾರದಿಂದ ಹೊರಬರುತ್ತಿದ್ದಾಗ, ಕಾರಿನಲ್ಲಿ ಬಂದವರು ಅವರ ಮೇಲೆ ಗುಂಡು ಹಾರಿಸಿ ಪರಾರಿಯಾಗಿದ್ದಾರೆ. ಘಟನೆಯ ನಂತರ ಕೋವೊದಲ್ಲಿ ನಡೆಯಬೇಕಿದ್ದ ನಗರ ಕೀರ್ತನೆಯನ್ನು ಕೂಡ ರದ್ದುಗೊಳಿಸಲಾಗಿದೆ.
ಅರುಣಾಚಲ ಪ್ರದೇಶದಲ್ಲಿ ಚೀನಾ ಸೇನೆಯ ನುಸುಳುವಿಕೆ ನಡೆದಿಲ್ಲ! – ಭಾರತೀಯ ಸೇನೆಯ ಸ್ಪಷ್ಟನೆ
ಶ್ರೀರಾಮ ಮಂದಿರದ ದಾನ ಕಳ್ಳತನದ ದೊಡ್ಡ ಹೆಸರುಗಳನ್ನು ಬಹಿರಂಗಪಡಿಸಿದರೆ, ಅವರು ನನ್ನನ್ನು ಕೊಲ್ಲುವರು! – ಪಂಡಿತ್ ಧೀರೇಂದ್ರಕೃಷ್ಣ ಶಾಸ್ತ್ರಿ
‘ಯಾರು ನೀರನ್ನು ತಡೆಯುತ್ತಾರೋ, ಅವರ ಕೈಗಳನ್ನು ಮುರಿಯುತ್ತೇವೆ !’
ಪಾಕಿಸ್ತಾನವನ್ನು ಮತ್ತೆ ‘ಎಫ್ಎಟಿಎಫ್’ನ ‘ಗ್ರೇ ಲಿಸ್ಟ್’ಗೆ ಸೇರಿಸಲು ಭಾರತದ ಸಿದ್ಧತೆ
ಪಾಕಿಸ್ತಾನದಲ್ಲಿ 125 ವರ್ಷ ಹಳೆಯ ಗುರುದ್ವಾರವನ್ನು ನೆಲಸಮಗೊಳಿಸಲು ಯತ್ನ : Pakistan Gurdwara
ಕರಾಚಿ ದಾಳಿಯ ಹಿಂದೆ ಭಾರತದ ಕೈವಾಡವಿದೆ ಎಂಬ ಆರೋಪವನ್ನು ತಳ್ಳಿಹಾಕಿದ ಭಾರತ! : India rejects Pakistan’s allegation