ಟೀಕೆಗಳು ವ್ಯಕ್ತವಾದ ನಂತರ ತಿಪ್ಪೆಸಾರಿಸಲು ಪ್ರಯತ್ನ

ಚೆನ್ನೈ (ತಮಿಳುನಾಡು) – ಕಾಂಗ್ರೆಸ್‌ನ ರಾಷ್ಟ್ರೀಯ ಅಧ್ಯಕ್ಷರೂ ಆಗಿರುವ ಸಂಸದ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಿ ಮೋದಿ ಅವರನ್ನು ‘ಭಯೋತ್ಪಾದಕ’ ಎಂದು ಸಂಬೋಧಿಸಿದ್ದಾರೆ; ಇದರ ಬಗ್ಗೆ ತೀವ್ರ ಟೀಕೆಗಳು ವ್ಯಕ್ತವಾದ ನಂತರ, ಅವರು ಸ್ಪಷ್ಟೀಕರಣ ನೀಡುವ ಮೂಲಕ ವಿಷಯವನ್ನು ಸಮಾಧಾನಪಡಿಸಲು ಪ್ರಯತ್ನಿಸಿದರು. ತಮಿಳುನಾಡು ವಿಧಾನಸಭಾ ಚುನಾವಣೆಯ ಪ್ರಚಾರದ ಕೊನೆಯ ದಿನದಂದು, ಎಐಎಡಿಎಂಕೆ (ಅಖಿಲ ಭಾರತ ದ್ರಾವಿಡ ಮುನ್ನೇತ್ರ ಕಳಗಂ) ಭಾಜಪ ಮೈತ್ರಿಕೂಟಕ್ಕೆ ಸೇರ್ಪಡೆಗೊಳ್ಳುವ ಹಿನ್ನೆಲೆಯಲ್ಲಿ ಅವರು ಇಂತಹ ಭಾಷೆಯನ್ನು ಬಳಸಿದ್ದಾರೆ ಎಂದು ಹೇಳಲಾಗುತ್ತಿದೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಸದ ಖರ್ಗೆ ಅವರು, ಎಐಎಡಿಎಂಕೆ ಮೋದಿಯವರೊಂದಿಗೆ ಹೇಗೆ ಕೈಜೋಡಿಸಲು ಸಾಧ್ಯ? ಅವರು ಭಯೋತ್ಪಾದಕರಾಗಿದ್ದಾರೆ. ಅವರು ಸಮಾನತೆಯಲ್ಲಿ ವಿಶ್ವಾಸವನ್ನಿಡುವುದಿಲ್ಲ. ಅವರ ಪಕ್ಷವೂ ಸಮಾನತೆ ಮತ್ತು ನ್ಯಾಯದ ಮೇಲೆ ನಂಬಿಕೆ ಹೊಂದಿಲ್ಲ. ಇಂತಹವರು ಅವರೊಂದಿಗೆ ಹೋಗುತ್ತಿದ್ದಾರೆ ಎಂದರೆ ಅವರು ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸುತ್ತಿದ್ದಾರೆ, ಎಂದರು.
‘ನಾನು ಭಯೋತ್ಪಾದಕ ಎಂದು ಹೇಳಿಲ್ಲ !’ – ಸಂಸದ ಖರ್ಗೆ
ಖರ್ಗೆ ಅವರ ಹೇಳಿಕೆಗೆ ಟೀಕೆಗಳು ವ್ಯಕ್ತವಾಗಲು ಪ್ರಾರಂಭವಾದಾಗ ಅವರು ಸ್ಪಷ್ಟೀಕರಣ ನೀಡುತ್ತಾ, ನಾನು ‘ಭಯೋತ್ಪಾದಕ’ ಎಂದು ಹೇಳಿಲ್ಲ, ಬದಲಾಗಿ ಅವರು (ಪ್ರಧಾನಮಂತ್ರಿ ಮೋದಿ) ಜನರನ್ನು ಹೆದರಿಸುತ್ತಾರೆ ಎಂದು ಹೇಳಿದ್ದೆ. ನನ್ನ ಉದ್ದೇಶ ಬೆದರಿಕೆಯ ಬಗ್ಗೆ ಮಾತನಾಡುವುದಾಗಿತ್ತು. ಮೋದಿ ಯಾವಾಗಲೂ ಬೆದರಿಸುತ್ತಾರೆ ಎಂಬುದನ್ನು ನಾನು ಸ್ಪಷ್ಟಪಡಿಸಲು ಬಯಸುತ್ತೇನೆ. ನಾನು ಕ್ರಮಬದ್ಧವಾಗಿ ಹೇಳಿದ್ದೇನೆಂದರೆ, ಆದಾಯ ತೆರಿಗೆ ಇಲಾಖೆ, ಜಾರಿ ನಿರ್ದೇಶನಾಲಯದಂತಹ ಎಲ್ಲಾ ಸಂಸ್ಥೆಗಳು ಅವರ ನಿಯಂತ್ರಣದಲ್ಲಿವೆ. ನಾನು ಎಂದಿಗೂ ಅವರನ್ನು ಭಯೋತ್ಪಾದಕ ಎಂದು ಕರೆದಿಲ್ಲ. ಅವರು ಜನರನ್ನು ಭಯಭೀತರನ್ನಾಗಿ ಮಾಡುತ್ತಿದ್ದಾರೆ, ಎಂದು ಸಮರ್ಥಿಸಿಕೊಂಡರು.
ಪ್ರಧಾನಮಂತ್ರಿ ಮೋದಿಯವರ ಬಗ್ಗೆ ಖರ್ಗೆ ಅವರ ಹಿಂದಿನ ಆಕ್ಷೇಪಾರ್ಹ ಹೇಳಿಕೆಗಳು
೧. ೨೦೨೩ರ ಕರ್ನಾಟಕ ವಿಧಾನಸಭಾ ಚುನಾವಣೆಯ ಸಮಯದಲ್ಲಿ ಖರ್ಗೆ ಅವರು ಪ್ರಧಾನಮಂತ್ರಿ ಮೋದಿಯವರನ್ನು ‘ವಿಷದ ಹಾವು’ ಇದಕ್ಕೆ ಹೋಲಿಸಿದ್ದರು.
೨. ೨೦೨೨ರ ಗುಜರಾತ ವಿಧಾನಸಭಾ ಚುನಾವಣೆಯಲ್ಲಿ ಅವರು ಪ್ರಧಾನಿ ಮೋದಿಯವರನ್ನು ‘ರಾವಣ’ನಿಗೆ ಹೋಲಿಸಿ, ನಿಮಗೆ ರಾವಣನಂತೆ ೧೦೦ ಮುಖಗಳಿವೆಯೇ? ಎಂದು ಪ್ರಶ್ನಿಸಿದ್ದರು.
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ