
ಬರ್ಲಿನ್ (ಜರ್ಮನಿ) – ಮೊರ್ಸ್ ನಗರದ ಡ್ಯೂಸ್‌ಬರ್ಗ್ ಪ್ರದೇಶದಲ್ಲಿರುವ ಗುರುದ್ವಾರದಲ್ಲಿ ಎರಡು ಗುಂಪುಗಳ ನಡುವೆ ಇದ್ದಕ್ಕಿದ್ದಂತೆ ಘರ್ಷಣೆ ನಡೆದಿದೆ. ಈ ಘಟನೆಯಲ್ಲಿ ಕನಿಷ್ಠ 11 ಜನರು ಗಾಯಗೊಂಡಿದ್ದಾರೆ. ಪ್ರತ್ಯಕ್ಷದರ್ಶಿಗಳ ಮಾಹಿತಿಯ ಪ್ರಕಾರ, ಈ ಸಂದರ್ಭದಲ್ಲಿ ಚಾಕು, ಕೃಪಾಣ (ಕಿರು ಕತ್ತಿ), ಪೆಪ್ಪರ್ ಸ್ಪ್ರೇ ಮತ್ತು ಬಂದೂಕುಗಳನ್ನು ಬಳಸಲಾಗಿದೆ. ಈ ಘರ್ಷಣೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಗುರುದ್ವಾರ ಸಮಿತಿಯ ಚುನಾವಣೆ ಮತ್ತು ನಿಧಿಯ ವಿಷಯವಾಗಿ ಈ ವಿವಾದ ಉಂಟಾಗಿದೆ ಎಂದು ಪೊಲೀಸರ ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.
ಗುರುದ್ವಾರದಲ್ಲಿ ಧಾರ್ಮಿಕ ಕಾರ್ಯಕ್ರಮ ಆರಂಭವಾಗುವ ಮುನ್ನವೇ ಎರಡು ಗುಂಪುಗಳ ನಡುವೆ ವಾಗ್ವಾದ ತಾರಕಕ್ಕೇರಿ, ಅದು ಕೈಕೈ ಮಿಲಾಯಿಸುವ ಹಂತಕ್ಕೆ ತಲುಪಿ ನಂತರ ಹಿಂಸಾಚಾರಕ್ಕೆ ತಿರುಗಿತು. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ದೊಡ್ಡ ಮಟ್ಟದ ಪೊಲೀಸ್ ಪಡೆ ಸ್ಥಳಕ್ಕೆ ಧಾವಿಸಿತು. ವಿಶೇಷ ತಾಂತ್ರಿಕ ತಂಡವನ್ನೂ ನಿಯೋಜಿಸಲಾಗಿದೆ. ಗಾಯಗೊಂಡವರಿಗೆ ಸ್ಥಳದಲ್ಲೇ ಚಿಕಿತ್ಸೆ ನೀಡಲಾಯಿತು. ಒಬ್ಬ ಶಂಕಿತನನ್ನು ವಶಕ್ಕೆ ಪಡೆಯಲಾಗಿದ್ದು, ನಿಖರವಾಗಿ ಯಾರು ಯಾರ ಮೇಲೆ ದಾಳಿ ನಡೆಸಿದ್ದಾರೆ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಅರುಣಾಚಲ ಪ್ರದೇಶದಲ್ಲಿ ಚೀನಾ ಸೇನೆಯ ನುಸುಳುವಿಕೆ ನಡೆದಿಲ್ಲ! – ಭಾರತೀಯ ಸೇನೆಯ ಸ್ಪಷ್ಟನೆ
ಶ್ರೀರಾಮ ಮಂದಿರದ ದಾನ ಕಳ್ಳತನದ ದೊಡ್ಡ ಹೆಸರುಗಳನ್ನು ಬಹಿರಂಗಪಡಿಸಿದರೆ, ಅವರು ನನ್ನನ್ನು ಕೊಲ್ಲುವರು! – ಪಂಡಿತ್ ಧೀರೇಂದ್ರಕೃಷ್ಣ ಶಾಸ್ತ್ರಿ
‘ಯಾರು ನೀರನ್ನು ತಡೆಯುತ್ತಾರೋ, ಅವರ ಕೈಗಳನ್ನು ಮುರಿಯುತ್ತೇವೆ !’
ಪಾಕಿಸ್ತಾನವನ್ನು ಮತ್ತೆ ‘ಎಫ್ಎಟಿಎಫ್’ನ ‘ಗ್ರೇ ಲಿಸ್ಟ್’ಗೆ ಸೇರಿಸಲು ಭಾರತದ ಸಿದ್ಧತೆ
ಪಾಕಿಸ್ತಾನದಲ್ಲಿ 125 ವರ್ಷ ಹಳೆಯ ಗುರುದ್ವಾರವನ್ನು ನೆಲಸಮಗೊಳಿಸಲು ಯತ್ನ : Pakistan Gurdwara
ಕರಾಚಿ ದಾಳಿಯ ಹಿಂದೆ ಭಾರತದ ಕೈವಾಡವಿದೆ ಎಂಬ ಆರೋಪವನ್ನು ತಳ್ಳಿಹಾಕಿದ ಭಾರತ! : India rejects Pakistan’s allegation