
ಮುಂಬಯಿ – ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳಲ್ಲಿ ಸ್ಥಳೀಯ ಭಾಷೆಗಳಿಗೆ ಆದ್ಯತೆ ನೀಡಲಾಗುತ್ತದೆ. ಹಾಗಾದರೆ ಮಹಾರಾಷ್ಟ್ರವನ್ನು ಮಾತ್ರ ಏಕೆ ಭಿನ್ನವಾಗಿ ಪರಿಗಣಿಸಬೇಕು? ಮರಾಠಿ ಭಾಷೆಯ ಪ್ರಚಾರ ಮತ್ತು ಪ್ರಸಾರ ಮಾಡುವುದು ಕಾಲದ ಅಗತ್ಯವಾಗಿದೆ. ಮಹಾರಾಷ್ಟ್ರದಲ್ಲಿ ವ್ಯವಹಾರ ಮಾಡಬೇಕೆಂದರೆ ಮರಾಠಿ ಭಾಷೆ ಬರಲೇಬೇಕು ಎಂದು ಸಾರಿಗೆ ಸಚಿವ ಪ್ರತಾಪ್ ಸರ್ನಾಯಕ್ ಅವರು ಮಾಧ್ಯಮಗಳೊಂದಿಗೆ ಮಾತನಾಡುತ್ತಾ ಹೇಳಿದ್ದಾರೆ.
ಪ್ರತಾಪ್ ಸರ್ನಾಯಕ್ ಅವರು ಮಾತನಾಡುತ್ತಾ, “ಮಹಾರಾಷ್ಟ್ರದಲ್ಲಿ ಮರಾಠಿ ಭಾಷೆಗೆ ಆದ್ಯತೆ ನೀಡುವ 1989ರ ಕಾಯ್ದೆಯಿದೆ. ಈ ಕಾಯ್ದೆಯ ಪ್ರಕಾರ 2019ರಲ್ಲಿ ಸುತ್ತೋಲೆಯನ್ನು ಹೊರಡಿಸಲಾಗಿದೆ. ಇದಕ್ಕನುಗುಣವಾಗಿ ಮರಾಠಿ ಭಾಷೆಗೆ ಆದ್ಯತೆ ನೀಡಲು ನಾವು ನಿರ್ಧಾರ ತೆಗೆದುಕೊಂಡಿದ್ದೇವೆ. ಪ್ರಯಾಣಿಕರು ಮರಾಠಿ ಭಾಷಿಕರಾಗಿದ್ದರೆ, ರಿಕ್ಷಾ, ಟ್ಯಾಕ್ಸಿ, ಓಲಾ-ಉಬರ್ ಮುಂತಾದವುಗಳ ಚಾಲಕರು ಮರಾಠಿಯಲ್ಲಿಯೇ ಮಾತನಾಡುವುದು ಕಡ್ಡಾಯವಾಗಿದೆ. ಇದರಿಂದ ವಾದ-ವಿವಾದಗಳು ಉಂಟಾಗುವುದಿಲ್ಲ. ಈ ನಿರ್ಧಾರದ ವಿರುದ್ಧ ಕೆಲವರು ಮುಷ್ಕರ ಘೋಷಿಸಿದ್ದಾರೆ ಎಂದು ತಿಳಿಯಿತು. ಇಂತಹ ಹಠಮಾರಿತನ ಸರಿಯಲ್ಲ. ನಿಮ್ಮದೇನಾದರೂ ಹೇಳಿಕೆಗಳಿದ್ದರೆ ನನ್ನನ್ನು ಸಂಪರ್ಕಿಸಬೇಕು. ನಿಮಗೆ ಸಮಯ ಬೇಕಿದ್ದರೆ ಅದನ್ನು ಹೆಚ್ಚಿಸಿಕೊಡಲು ನಾನು ಸಿದ್ಧನಿದ್ದೇನೆ. ಟ್ಯಾಕ್ಸಿ, ರಿಕ್ಷಾ ಚಾಲಕರು ಮರಾಠಿ ಮಾತನಾಡದ ಕಾರಣ ಅನೇಕ ದೂರುಗಳು ಬಂದಿವೆ ಮತ್ತು ಪ್ರಕರಣಗಳನ್ನು ದಾಖಲಿಸಲಾಗಿದೆ. ಆದ್ದರಿಂದ ವಾದ-ವಿವಾದಗಳನ್ನು ತಪ್ಪಿಸಲು ಮರಾಠಿಯಲ್ಲಿಯೇ ಮಾತನಾಡಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ,” ಎಂದರು.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!