
ರೋಹತಾಸ್ (ಬಿಹಾರ) – ಸಾಸಾರಾಮ್‌ನ ರಾಮೂಡಿಹದ ಸರಕಾರಿ ಶಾಲೆಯೊಂದರಲ್ಲಿ ಅತ್ಯಂತ ಸೂಕ್ಷ್ಮ ಪ್ರಕರಣವೊಂದು ಮುನ್ನೆಲೆಗೆ ಬಂದಿದೆ. ಇದರಿಂದಾಗಿ ಸುತ್ತಮುತ್ತಲಿನ ಪರಿಸರದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಈ ಬಗ್ಗೆ ಗ್ರಾಮಸ್ಥರಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ.
ಲಭ್ಯವಾದ ಮಾಹಿತಿಯ ಪ್ರಕಾರ, ಏಪ್ರಿಲ್ 22, 2026 ರಂದು ಬೆಳಿಗ್ಗೆ ಶಾಲೆ ತೆರೆದಾಗ 4 ಪ್ಲಾಸ್ಟಿಕ್ ಚೀಲಗಳಲ್ಲಿ ಗೋಮಾಂಸ ಪತ್ತೆಯಾಗಿದೆ. ಈ ಸುದ್ದಿ ಇಡೀ ಪ್ರದೇಶದಲ್ಲಿ ಕಾಡ್ಗಿಚ್ಚಿನಂತೆ ಹರಡಿತು ಮತ್ತು ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸ್ಥರು ಶಾಲಾ ಆವರಣದಲ್ಲಿ ಜಮಾಯಿಸಿದರು. ಗ್ರಾಮಸ್ಥರು ಶಾಲೆಯ ಮುಖ್ಯೋಪಾಧ್ಯಾಯ ಮಹಮ್ಮದ್ ಅನ್ವರ್ ಸೇರಿದಂತೆ ಒಟ್ಟು 5 ಮುಸಲ್ಮಾನ ಶಿಕ್ಷಕರ ಮೇಲೆ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ತಪ್ಪಿತಸ್ಥರನ್ನು ಬಂಧಿಸಿ ಕಠಿಣ ಕ್ರಮ ಕೈಗೊಳ್ಳುವಂತೆ ಆಕ್ರೋಶಿತ ಗ್ರಾಮಸ್ಥರು ಆಗ್ರಹಿಸಿದ್ದಾರೆ. ಶಾಲೆಯ ಮುಸಲ್ಮಾನ ಶಿಕ್ಷಕರು ಹಿಂದೂ ಮಕ್ಕಳಿಗೆ ಗೋಮಾಂಸ ತಿನ್ನಿಸುವ ಪ್ರಯತ್ನದಲ್ಲಿದ್ದರು ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಶಾಲೆಯ ಸುತ್ತಮುತ್ತಲಿನ ಪ್ರದೇಶವು ಹಿಂದೂ ಬಹುಸಂಖ್ಯಾತವಾಗಿದ್ದು, ಶಾಲೆಯಲ್ಲಿ ಕಲಿಯುವ ಬಹುತೇಕ ಮಕ್ಕಳು ಹಿಂದೂ ಸಮುದಾಯಕ್ಕೆ ಸೇರಿದವರಾಗಿದ್ದಾರೆ; ಆದರೆ ಕೆಲವು ವರ್ಷಗಳ ಹಿಂದೆ ಒಂದು ಸಂಚಿನ ಅಡಿಯಲ್ಲಿ ಶಾಲೆಯ ಹೆಸರನ್ನು ‘ಉರ್ದು ಮಧ್ಯ ವಿದ್ಯಾಲಯ’ ಎಂದು ಇಡಲಾಗಿತ್ತು ಎಂದು ಗ್ರಾಮಸ್ಥರು ತಿಳಿಸಿದರು.
ಈ ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ವಿಕ್ರಮಗಂಜ್‌ನ ಉಪವಿಭಾಗೀಯ ದಂಡಾಧಿಕಾರಿ ಪ್ರಭಾತ ಕುಮಾರ್ ಅವರು ತಮ್ಮ ತಂಡದೊಂದಿಗೆ ಶಾಲೆಗೆ ಆಗಮಿಸಿದರು. ಉಪವಿಭಾಗೀಯ ದಂಡಾಧಿಕಾರಿಗಳು ಆಕ್ರೋಶಿತ ಗ್ರಾಮಸ್ಥರನ್ನು ಸಮಾಧಾನಪಡಿಸಿ ಈ ಪ್ರಕರಣದ ನಿಷ್ಪಕ್ಷಪಾತ ತನಿಖೆ ನಡೆಸುವ ಭರವಸೆ ನೀಡಿದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ರೋಹತಾಸ್‌ನ ಪೊಲೀಸ್ ವರಿಷ್ಠಾಧಿಕಾರಿ ರೋಷನ ಕುಮಾರ್ ಮಾಹಿತಿ ನೀಡಿದ್ದಾರೆ.
‘ಶ್ರೀಕೃಷ್ಣ ಮುಸಲ್ಮಾನರಾಗಿದ್ದರು ಮತ್ತು ದಿನಕ್ಕೆ ೫ ಬಾರಿ ನಮಾಜ್ ಮಾಡುತ್ತಿದ್ದರಂತೆ!’– Maulana Jarjis Ansari
ವಂಚನೆ ಅಥವಾ ಬ್ಲ್ಯಾಕ್ ಮೇಲ್ ಮೂಲಕ ದೈಹಿಕ ಸಂಬಂಧವಾದರೆ, ಅದನ್ನು ‘ಬಲಾತ್ಕಾರ’ ಎಂದು ಪರಿಗಣಿಸಲಾಗುವುದು! – ಮದ್ರಾಸ್ ಉಚ್ಚ ನ್ಯಾಯಾಲಯ
‘ಐ.ಆರ್.ಸಿ.ಟಿ.ಸಿ.’ಯ ಹೊಸ ಜಾಲತಾಣ ಕಾರ್ಯಾರಂಭ : ಟಿಕೆಟ್ ಕಾಯ್ದಿರಿಸುವಿಕೆ ಮತ್ತಷ್ಟು ಸುಲಭ
ಪುರಿಯಿಂದ ಜಗತ್ಪ್ರಸಿದ್ಧ ಜಗನ್ನಾಥ ರಥಯಾತ್ರೆಗೆ ಚಾಲನೆ!
ಭಾಗ್ಯನಗರ (ತೆಲಂಗಾಣ): ಹಿಂದೂ ವಿದ್ಯಾರ್ಥಿಗೆ ಮನೆ ಪಾಠದಲ್ಲಿ ‘ಕಲ್ಮಾ’ ಕಂಠಪಾಠ ಮಾಡಲು ಹೇಳಿದ ಶಿಕ್ಷಕಿ; ನೌಕರಿಯಿಂದ ವಜಾ!
ರಾಜಸ್ಥಾನ : ವಾಸ್ತವಕ್ಕಿಂತ ಹೆಚ್ಚು ಗೋವುಗಳಿವೆ ಎಂದು ಹೇಳಿ ಕೋಟ್ಯಂತರ ರೂಪಾಯಿಗಳ ಸರಕಾರಿ ಅನುದಾನ ಲೂಟಿ !