
ವಾಷಿಂಗ್ಟನ್ (ಅಮೆರಿಕ) – ಪಹಲ್ಗಾಮ್‌ನಲ್ಲಿನ ದಾಳಿಯಲ್ಲಿ ‘ದಿ ರೆಸಿಸ್ಟೆನ್ಸ್ ಫ್ರಂಟ್’ನ ಉಗ್ರರು ಅಮಾಯಕ ಜನರನ್ನು ಗುರಿಯಾಗಿಸಿಕೊಂಡಿದ್ದರು ಮತ್ತು ಧರ್ಮದ ಆಧಾರದ ಮೇಲೆ ಅವರನ್ನು ಪ್ರತ್ಯೇಕಿಸಿದ್ದರು. ಈ ಗುಂಪು ಲಷ್ಕರ್-ಎ-ತೈಬಾಗೆ ಸಂಬಂಧಿಸಿದೆ ಎಂದು ಪರಿಗಣಿಸಲಾಗಿದೆ. ಈ ಗುಂಪಿಗೆ ಪಾಕಿಸ್ತಾನದಲ್ಲಿ ಆಶ್ರಯ ಸಿಕ್ಕಿದೆ. ಪಾಕಿಸ್ತಾನವು ಈ ಸಂಘಟನೆಯ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಅಮೆರಿಕದ ಸಂಸದ ಬ್ರ್ಯಾಡ್ ಶೆರ್ಮನ್ ಒತ್ತಾಯಿಸಿದ್ದಾರೆ. ಪಹಲ್ಗಾಮ್‌ನಲ್ಲಿನ ದಾಳಿಯ ಒಂದು ವರ್ಷದ ನೆನಪಿಗಾಗಿ ಇಲ್ಲಿನ ಭಾರತೀಯ ರಾಯಭಾರ ಕಚೇರಿಯು ಪ್ರದರ್ಶನವನ್ನು ಆಯೋಜಿಸಿತ್ತು. ಆ ಸಂದರ್ಭದಲ್ಲಿ ಶೆರ್ಮನ್ ಮಾತನಾಡುತ್ತಿದ್ದರು.
‘ಭಯೋತ್ಪಾದನೆಯ ಮಾನವೀಯ ಬೆಲೆ’ ಎಂಬ ವಿಷಯದ ಮೇಲೆ ಆಯೋಜಿಸಲಾಗಿದ್ದ ಈ ಪ್ರದರ್ಶನದ ವೇಳೆ, ಅಮೆರಿಕದ ಕೆಲವು ಸಂಸದರು ಭಯೋತ್ಪಾದಕ ಸಂಘಟನೆಗಳ ವಿರುದ್ಧ ಕಠಿಣ ನಿಲುವು ತೆಗೆದುಕೊಳ್ಳುವ ಅಗತ್ಯವನ್ನು ವ್ಯಕ್ತಪಡಿಸಿದರು.
ಹಾರ್ಮುಜ್: ತೈಲ ನೌಕೆಯ ಮೇಲೆ ಇರಾನ್ ದಾಳಿ: ಓರ್ವ ಭಾರತೀಯ ಸಾವು
ಭಗವಾನ್ ಜಗನ್ನಾಥರ ರಥಯಾತ್ರೆಗೂ ಮುನ್ನ ಗುಜರಾತ್ನಲ್ಲಿ ೫ ಭಯೋತ್ಪಾದಕರ ಬಂಧನ
ಬ್ರಿಟನ್: ದೇವಸ್ಥಾನದ ಜಾಗ ಮುಸಲ್ಮಾನರಿಗೆ ಹರಾಜು !
ಭಯೋತ್ಪಾದನಾ ನಿಗ್ರಹ ದಳದಿಂದ ಪುಣೆ-ಪಿಂಪ್ರಿ ಚಿಂಚವಾಡನಲ್ಲಿ ೨೩ ಕ್ಕೂ ಹೆಚ್ಚು ಸ್ಥಳಗಳ ಮೇಲೆ ದಾಳಿ ! : Maharashtra ATS Raid
ಮುಂಬಯಿ ಮೇಲಿನ ೨೬/೧೧ ರ ಉಗ್ರ ದಾಳಿಯನ್ನು ಕಾಂಗ್ರೆಸ್ ಮತ್ತು ಐ.ಎಸ್.ಐ. ಒಟ್ಟಿಗೆ ಸೇರಿ ನಡೆಸಿದ್ದವು! : 26/11 Attack Claim
ಫ್ರಾನ್ಸ್ನಲ್ಲಿ ಯಹೂದಿಗಳ ಮೇಲಿನ ಸಂಭಾವ್ಯ ಭಯೋತ್ಪಾದಕ ದಾಳಿ ವಿಫಲ