ಬಂಗಾಳ ವಿಧಾನಸಭಾ ಚುನಾವಣೆ
ತೃಣಮೂಲ ಕಾಂಗ್ರೆಸ್ ನಾಯಕನಿಂದ ಮತದಾರರಿಗೆ ಬೆದರಿಕೆ

ಕೋಲಕಾತಾ (ಬಂಗಾಳ) – “ನೀವು ಬೇರೆ ಯಾವುದೇ ಪಕ್ಷಕ್ಕೆ ಮತ ಚಲಾಯಿಸಿದರೆ, ನಿಮ್ಮನ್ನು ತುಂಡು ತುಂಡು ಮಾಡುತ್ತೇವೆ” ಎಂದು ಬೆದರಿಕೆ ಹಾಕುತ್ತಿರುವ ತೃಣಮೂಲ ಕಾಂಗ್ರೆಸ್ ನಾಯಕನ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾಗಿದೆ. ಇದು ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುತ್ತಿರುವ ವಿಡಿಯೋ ಎಂದು ಹೇಳಲಾಗುತ್ತಿದೆ. ಈ ನಾಯಕನ ಹೆಸರು ತಿಳಿದುಬಂದಿಲ್ಲ. ಈ ವಿಡಿಯೋ ಕುರಿತು ಭಾಜಪ ತೃಣಮೂಲ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದೆ.
ಮಮತಾ ಬ್ಯಾನರ್ಜಿ ಅವರ ನಾಯಕರು ಪ್ರಜಾಪ್ರಭುತ್ವದ ಕತ್ತು ಹಿಸುಕುತ್ತಿದ್ದಾರೆ ಮತ್ತು ಮತದಾರರನ್ನು ಹೆದರಿಸುವ ಮೂಲಕ ಅಧಿಕಾರ ಹಿಡಿಯಲು ಪ್ರಯತ್ನಿಸುತ್ತಿದ್ದಾರೆ” ಎಂದು ಭಾಜಪ ನಾಯಕರು ಆರೋಪಿಸಿದ್ದಾರೆ. ಈ ಕುರಿತು ಭಾಜಪ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದು, ಸಂಬಂಧಪಟ್ಟ ನಾಯಕನ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದೆ.
ತೃಣಮೂಲ ಕಾಂಗ್ರೆಸ್ ಈ ವಿಡಿಯೋ ಬಗ್ಗೆ ಎಚ್ಚರಿಕೆಯ ನಿಲುವು ತಳೆದಿದೆ. ಪಕ್ಷದ ಕೆಲವು ವಕ್ತಾರರು, “ಈ ವಿಡಿಯೋ ಹಳೆಯದಿರಬಹುದು ಅಥವಾ ಇದನ್ನು ಎಡಿಟ್ ಮಾಡಿರುವ ಸಾಧ್ಯತೆಯಿದೆ” ಎಂದು ಹೇಳಿದ್ದಾರೆ. ಆದರೆ, “ಪಕ್ಷವು ಇಂತಹ ಯಾವುದೇ ಹಿಂಸಾತ್ಮಕ ಹೇಳಿಕೆಗಳನ್ನು ಬೆಂಬಲಿಸುವುದಿಲ್ಲ” ಎಂದೂ ವಕ್ತಾರರು ಸ್ಪಷ್ಟಪಡಿಸಿದ್ದಾರೆ. (ಇಂತಹ ನಾಯಕರ ಮೇಲೆ ಪಕ್ಷ ಏಕೆ ಕ್ರಮ ಕೈಗೊಳ್ಳುತ್ತಿಲ್ಲ? ಅವರನ್ನು ಪಕ್ಷದಿಂದ ಏಕೆ ಉಚ್ಚಾಟಿಸುತ್ತಿಲ್ಲ ಮತ್ತು ಅವರನ್ನು ಬಂಧಿಸುವಂತೆ ಪೊಲೀಸರಿಗೆ ಏಕೆ ಸೂಚಿಸುತ್ತಿಲ್ಲ? – ಸಂಪಾದಕರು)
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!