ಕಣ್ಮರೆಯಾದ ಮೂರು ದಿನಗಳ ನಂತರ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ
ಹತ್ಯೆ ಮಾಡಿರುವ ಸಂಶಯ

ಕಾಕ್ಸ್ ಬಜಾರ್ (ಬಾಂಗ್ಲಾದೇಶ) – ಇಲ್ಲಿ ೩೫ ವರ್ಷದ ನಯನ ದಾಸ್ ಎಂಬುವರ ಸಂಶಯಾಸ್ಪದ ಸಾವು ಸಂಭವಿಸಿರುವ ಘಟನೆ ಬೆಳಕಿಗೆ ಬಂದಿದೆ. ಏಪ್ರಿಲ್ ೨೨ ರಂದು ಅವರ ಮೃತದೇಹವು ದುರ್ಗಮ ಗುಡ್ಡಗಾಡು ಪ್ರದೇಶದ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ನಯನ ದಾಸ್ ಅವರು ಇಲ್ಲಿನ ನಾಗಪಂಚಮಿ ದೇವಾಲಯದಲ್ಲಿ ಅರ್ಚಕರಾಗಿ ಕೆಲಸ ಮಾಡುತ್ತಿದ್ದರು. ಅವರು ಕಳೆದ ಮೂರು ದಿನಗಳಿಂದ ನಾಪತ್ತೆಯಾಗಿದ್ದರು.
ಅಜ್ಞಾತ ವ್ಯಕ್ತಿಗಳಿಂದ ಅಪಹರಣ!
ನಯನ ದಾಸ್ ಅವರ ಕುಟುಂಬದ ಸದಸ್ಯರ ಪ್ರಕಾರ, ಒಂದು ದಿನ ರಾತ್ರಿ ಕೆಲವು ಅಪರಿಚಿತ ವ್ಯಕ್ತಿಗಳು ಅವರನ್ನು ಮನೆಯಿಂದ ಹೊರಗೆ ಕರೆದೊಯ್ದರು. ಅದಾದ ನಂತರ ಅವರು ಮರಳಿ ಬರಲೇ ಇಲ್ಲ. ಸಾಕಷ್ಟು ಹುಡುಕಾಟ ನಡೆಸಿದ ನಂತರ ಪೊಲೀಸರಿಗೆ ದೂರು ನೀಡಲಾಗಿತ್ತು. ಏಪ್ರಿಲ್ ೨೨ ರಂದು ಮಧ್ಯಾಹ್ನ ಸ್ಥಳೀಯರು ಹುಡುಕಾಟ ನಡೆಸುತ್ತಿದ್ದಾಗ ದೇವಸ್ಥಾನದ ಹಿಂಭಾಗದ ಗುಡ್ಡಗಾಡು ಪ್ರದೇಶದಲ್ಲಿ ಅವರ ಮೃತದೇಹ ಕಂಡುಬಂದಿದೆ.
ದಾಸ್ ಅವರ ಕುತ್ತಿಗೆಗೆ ಸ್ಕಾರ್ಫ್ ಸುತ್ತಿರುವುದು ಕಂಡುಬಂದಿದ್ದು, ಇದೊಂದು ಹತ್ಯೆಯಾಗಿರಬಹುದು ಎಂದು ಹೇಳಲಾಗುತ್ತಿದೆ. ಪೊಲೀಸರ ಪ್ರಕಾರ, ಮರಣೋತ್ತರ ಪರೀಕ್ಷೆಯ ವರದಿ ಬಂದ ನಂತರವೇ ಸಾವಿಗೆ ನಿಖರ ಕಾರಣ ತಿಳಿಯಲಿದೆ. ಪ್ರಸ್ತುತ ಪೊಲೀಸರು ಅಂದು ರಾತ್ರಿ ಅವರನ್ನು ಮನೆಯಿಂದ ಕರೆದೊಯ್ದಿದ್ದ ಅಪರಿಚಿತ ವ್ಯಕ್ತಿಗಳಿಗಾಗಿ ಶೋಧ ನಡೆಸುತ್ತಿದ್ದಾರೆ.
ಅರುಣಾಚಲ ಪ್ರದೇಶದಲ್ಲಿ ಚೀನಾ ಸೇನೆಯ ನುಸುಳುವಿಕೆ ನಡೆದಿಲ್ಲ! – ಭಾರತೀಯ ಸೇನೆಯ ಸ್ಪಷ್ಟನೆ
ಶ್ರೀರಾಮ ಮಂದಿರದ ದಾನ ಕಳ್ಳತನದ ದೊಡ್ಡ ಹೆಸರುಗಳನ್ನು ಬಹಿರಂಗಪಡಿಸಿದರೆ, ಅವರು ನನ್ನನ್ನು ಕೊಲ್ಲುವರು! – ಪಂಡಿತ್ ಧೀರೇಂದ್ರಕೃಷ್ಣ ಶಾಸ್ತ್ರಿ
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!
‘ಯಾರು ನೀರನ್ನು ತಡೆಯುತ್ತಾರೋ, ಅವರ ಕೈಗಳನ್ನು ಮುರಿಯುತ್ತೇವೆ !’
ಪಾಕಿಸ್ತಾನವನ್ನು ಮತ್ತೆ ‘ಎಫ್ಎಟಿಎಫ್’ನ ‘ಗ್ರೇ ಲಿಸ್ಟ್’ಗೆ ಸೇರಿಸಲು ಭಾರತದ ಸಿದ್ಧತೆ
ಪಾಕಿಸ್ತಾನದಲ್ಲಿ 125 ವರ್ಷ ಹಳೆಯ ಗುರುದ್ವಾರವನ್ನು ನೆಲಸಮಗೊಳಿಸಲು ಯತ್ನ : Pakistan Gurdwara