
ಇಸ್ಲಾಮಾಬಾದ್ (ಪಾಕಿಸ್ತಾನ) – ಪಾಕಿಸ್ತಾನದ ನೈಋತ್ಯ ಬಲೂಚಿಸ್ತಾನದ ದರಿಗ್ವಾನ ಪ್ರದೇಶದಲ್ಲಿರುವ ‘ನ್ಯಾಷನಲ್ ರಿಫೈನರಿ ಲಿಮಿಟೆಡ್’ ಯೋಜನೆಯ ಮೇಲೆ ಅಜ್ಞಾತರು ಆಕ್ರಮಣ ಮಾಡಿದ್ದಾರೆ. ಈ ದಾಳಿಯಿಂದಾಗಿ ಯೋಜನಾ ಪ್ರದೇಶದಲ್ಲಿ ಭಾರಿ ಹಾನಿ ಸಂಭವಿಸಿದೆ.
ಸಂಸ್ಥೆಯು ನೀಡಿರುವ ಮಾಹಿತಿಯ ಪ್ರಕಾರ, ಹಠಾತ್ತಾಗಿ ಕೆಲವು ಬಂದೂಕುಧಾರಿಗಳು ಸಂಸ್ಕರಣಾಗಾರ ಪ್ರದೇಶಕ್ಕೆ ನುಗ್ಗಿ ಮನಬಂದಂತೆ ಗುಂಡಿನ ದಾಳಿ ನಡೆಸಿದರು. ಈ ಸಮಯದಲ್ಲಿ ಅಲ್ಲಿ ಕೆಲಸ ಮಾಡುತ್ತಿದ್ದ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಯಿತು; ಆದರೆ ಈ ದಾಳಿಯಲ್ಲಿ ಸಂಸ್ಕರಣಾಗಾರದ ಆಸ್ತಿಪಾಸ್ತಿಗೆ ದೊಡ್ಡ ಹಾನಿಯಾಗಿದೆ. ಈ ದಾಳಿಯನ್ನು ಯಾರು ಮತ್ತು ಏಕೆ ಮಾಡಿದ್ದಾರೆ ಎಂಬುದು ಇನ್ನು ತಿಳಿದುಬಂದಿಲ್ಲ. ಪೊಲೀಸರು ದಾಳಿಕೋರರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.
ಅರುಣಾಚಲ ಪ್ರದೇಶದಲ್ಲಿ ಚೀನಾ ಸೇನೆಯ ನುಸುಳುವಿಕೆ ನಡೆದಿಲ್ಲ! – ಭಾರತೀಯ ಸೇನೆಯ ಸ್ಪಷ್ಟನೆ
ಶ್ರೀರಾಮ ಮಂದಿರದ ದಾನ ಕಳ್ಳತನದ ದೊಡ್ಡ ಹೆಸರುಗಳನ್ನು ಬಹಿರಂಗಪಡಿಸಿದರೆ, ಅವರು ನನ್ನನ್ನು ಕೊಲ್ಲುವರು! – ಪಂಡಿತ್ ಧೀರೇಂದ್ರಕೃಷ್ಣ ಶಾಸ್ತ್ರಿ
‘ಯಾರು ನೀರನ್ನು ತಡೆಯುತ್ತಾರೋ, ಅವರ ಕೈಗಳನ್ನು ಮುರಿಯುತ್ತೇವೆ !’
ಪಾಕಿಸ್ತಾನವನ್ನು ಮತ್ತೆ ‘ಎಫ್ಎಟಿಎಫ್’ನ ‘ಗ್ರೇ ಲಿಸ್ಟ್’ಗೆ ಸೇರಿಸಲು ಭಾರತದ ಸಿದ್ಧತೆ
ಪಾಕಿಸ್ತಾನದಲ್ಲಿ 125 ವರ್ಷ ಹಳೆಯ ಗುರುದ್ವಾರವನ್ನು ನೆಲಸಮಗೊಳಿಸಲು ಯತ್ನ : Pakistan Gurdwara
ಕರಾಚಿ ದಾಳಿಯ ಹಿಂದೆ ಭಾರತದ ಕೈವಾಡವಿದೆ ಎಂಬ ಆರೋಪವನ್ನು ತಳ್ಳಿಹಾಕಿದ ಭಾರತ! : India rejects Pakistan’s allegation