
ನವದೆಹಲಿ – ಇರಾನ್ ವಿರುದ್ಧ ಇಸ್ರೇಲ್-ಅಮೆರಿಕ ಸಂಘರ್ಷದಿಂದಾಗಿ ಇರಾನ್‌ನಲ್ಲಿ ಉಂಟಾಗಿರುವ ಅಸ್ಥಿರತೆಯ ಹಿನ್ನೆಲೆಯಲ್ಲಿ, ಭಾರತ ಸರಕಾರವು ಭಾರತೀಯ ನಾಗರಿಕರಿಗಾಗಿ ಪ್ರವಾಸ ಮಾರ್ಗಸೂಚಿಯನ್ನು (ಟ್ರಾವೆಲ್ ಅಡ್ವೈಸರಿ) ಘೋಷಿಸಿದೆ. ಪ್ರಸ್ತುತ ಪರಿಸ್ಥಿತಿಯಲ್ಲಿ ಭಾರತೀಯ ನಾಗರಿಕರು ಇರಾನ್ ಪ್ರವಾಸವನ್ನು ತಪ್ಪಿಸಬೇಕೆಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಸ್ಪಷ್ಟ ನಿರ್ದೇಶನಗಳನ್ನು ನೀಡಿದೆ. ಭಾರತ ಮತ್ತು ಇರಾನ್ ನಡುವಿನ ಕೆಲವು ವಿಮಾನಯಾನ ಸೇವೆಗಳು ಆರಂಭಗೊಂಡಿದ್ದರೂ, ಪ್ರಾದೇಶಿಕ ಉದ್ವಿಗ್ನತೆಯಿಂದಾಗಿ ವಾಯುಪ್ರದೇಶದ ಮೇಲಿನ ನಿರ್ಬಂಧಗಳು ಮತ್ತು ತಾಂತ್ರಿಕ ಅನಿಶ್ಚಿತತೆಯು ಇನ್ನೂ ಮುಂದುವರಿದಿದೆ ಎಂದು ಟೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.
ಇರಾನ್‌ನಲ್ಲಿರುವ ಭಾರತೀಯರಿಗೆ ತಾಯ್ನಾಡಿಗೆ ಮರಳುವಂತೆ ಕರೆ!
ಪ್ರಸ್ತುತ ಇರಾನ್‌ನಲ್ಲಿ ವಾಸಿಸುತ್ತಿರುವ ಭಾರತೀಯ ನಾಗರಿಕರು ಸುರಕ್ಷಿತವಾಗಿ ದೇಶವನ್ನು ತೊರೆಯುವಂತೆ ಸೂಚನೆ ನೀಡಲಾಗಿದೆ. ಇರಾನ್‌ನಲ್ಲಿರುವ ಭಾರತೀಯ ನಾಗರಿಕರು ನಿಗದಿಪಡಿಸಿದ ಭೂ ಮಾರ್ಗದ ಮೂಲಕ ದೇಶವನ್ನು ತೊರೆಯಬೇಕು ಎಂದು ರಾಯಭಾರ ಕಚೇರಿ ಸ್ಪಷ್ಟಪಡಿಸಿದೆ. ಈ ಪ್ರಕ್ರಿಯೆಯು ಸಂಪೂರ್ಣವಾಗಿ ರಾಯಭಾರ ಕಚೇರಿಯ ಸಮನ್ವಯ ಮತ್ತು ಮಾರ್ಗದರ್ಶನದಲ್ಲಿ ನಡೆಯಬೇಕು ಎಂದಿದೆ.
‘ಎನ್ಸಿಇಆರ್ಟಿ’ಯ 9ನೇ ತರಗತಿಯ ಪುಸ್ತಕದಲ್ಲಿ ತುರ್ತು ಪರಿಸ್ಥಿತಿಯ ಮಾಹಿತಿ ಸೇರ್ಪಡೆ : NCERT Introduces Emergency
೧೦ ಸಾವಿರದಿಂದ ೧ ಲಕ್ಷ ಜನರು ಸಾವನ್ನಪ್ಪಿರುವ ಸಾಧ್ಯತೆ : Venezuela Earthquake
ಆರೋಪಿ ಭೀಮರಾವ್ ಕಾಂಬ್ಳೆಗೆ ದೋಷಿ ಎಂದು ತೀರ್ಪು; ಜೂನ್ 29 ರಂದು ಅಂತಿಮ ಶಿಕ್ಷೆ ಪ್ರಕಟ : Nasrapur Case
ಎನ್ಸಿಇಆರ್ಟಿ ಪಠ್ಯದಲ್ಲಿ ಮರಾಠಾ ಸಾಮ್ರಾಜ್ಯದ ಇತಿಹಾಸ: ಮಹಾರಾಷ್ಟ್ರ ಶಿಕ್ಷಣ ಸಚಿವರ ಆಗ್ರಹ
ಶ್ರೀರಾಮಮಂದಿರದಲ್ಲಿ ದೇಣಿಗೆ ಕಳ್ಳತನ ಪ್ರಕರಣ: ಅಂತಿಮವಾಗಿ ದೂರು ದಾಖಲು
ಘಾಜಿಯಾಬಾದ್ (ಉತ್ತರ ಪ್ರದೇಶ) ಇಲ್ಲಿ ವೈದ್ಯ ನದೀಮ್ ನಿಂದ ರೋಗಿಯ ತಪ್ಪು ರಕ್ತನಾಳ ಕತ್ತರಿಸಿದ! : Doctor cuts wrong Vein