ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ವಿದ್ಯಾರ್ಥಿಗಳಿಗೆ ಮಾನಸಿಕ ಕಿರುಕುಳ!

ಚಿಕ್ಕಮಗಳೂರು – ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆ.ಇ.ಎ.) ನಡೆಸುವ 2026ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಇಂದಿನಿಂದ ರಾಜ್ಯಾದ್ಯಂತ ಆರಂಭವಾಗಿದೆ. ಪರೀಕ್ಷಾ ಸಮಯದಲ್ಲಿ ಅಭ್ಯರ್ಥಿಗಳು ಲೋಹದ ಆಭರಣಗಳನ್ನು ಧರಿಸುವುದನ್ನು ನಿಷೇಧಿಸಿರುವ ಹಿನ್ನೆಲೆಯಲ್ಲಿ, ಕೆಲವು ಪರೀಕ್ಷಾ ಕೇಂದ್ರಗಳಲ್ಲಿ ನೂರಾರು ವಿದ್ಯಾರ್ಥಿನಿಯರನ್ನು ತಡೆದು ಅವರ ಮೂಗುತಿ ಮತ್ತು ಇತರ ಆಭರಣಗಳನ್ನು ತೆಗೆದ ಘಟನೆಗಳು ನಡೆದಿವೆ. ಚಿಕ್ಕಮಗಳೂರಿನ ‘ಎಂಇಎಸ್’ ಕಾಲೇಜಿನಲ್ಲಿ ವಿದ್ಯಾರ್ಥಿನಿಯರ ಮೂಗುತಿಯನ್ನು ತೆಗೆಯಲು ಸಾಧ್ಯವಾಗದಿದ್ದಾಗ, ಪರೀಕ್ಷಾ ಕೇಂದ್ರದ ಸಿಬ್ಬಂದಿ ವಿದ್ಯಾರ್ಥಿನಿಯರ ಮೂಗಿನ ಮೇಲೆ ಪ್ಲಾಸ್ಟರ್ ಅಂಟಿಸಿ ಅವರನ್ನು ಪರೀಕ್ಷಾ ಕೊಠಡಿಗೆ ಕಳುಹಿಸಿದ್ದಾರೆ. ವಿದ್ಯಾರ್ಥಿನಿಯರ ಮೂಗಿಗೆ ಈ ರೀತಿ ಪ್ಲಾಸ್ಟರ್ ಹಚ್ಚಿದ್ದಕ್ಕೆ ಅವರ ಪೋಷಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಪರೀಕ್ಷೆಯ ಒತ್ತಡದ ನಡುವೆ ಪರೀಕ್ಷಾ ಕೇಂದ್ರದಲ್ಲಿ ನಡೆದ ಈ ವಿಚಿತ್ರ ಘಟನೆಯಿಂದ ವಿದ್ಯಾರ್ಥಿನಿಯರಲ್ಲಿ ಕೆಲಕಾಲ ಗೊಂದಲ ಮತ್ತು ಆತಂಕ ನಿರ್ಮಾಣವಾಗಿತ್ತು.
Karnataka CET Exam:
Controversy in Bengaluru after students were asked to remove their Janivara (sacred thread) during the CET examChikkamagaluru: Since girl students were unable to remove their nose rings before the CET exam, adhesive tapes were stuck over their noses
Mental… pic.twitter.com/uvtHCAmgRs
— Sanatan Prabhat (@SanatanPrabhat) April 24, 2026
ಬಳ್ಳಾರಿ ಜಿಲ್ಲೆಯ 10 ಕೇಂದ್ರಗಳಲ್ಲಿ ಸಿಇಟಿ ಪರೀಕ್ಷೆಗಳು ಆರಂಭವಾಗಿದ್ದು, ಅಲ್ಲಿ ಕೂಡ ಪರೀಕ್ಷಾ ಕೇಂದ್ರದ ಸಿಬ್ಬಂದಿ ವಿದ್ಯಾರ್ಥಿನಿಯರ ಕಿವಿಯೋಲೆ ಹಾಗೂ ಇತರ ಆಭರಣಗಳನ್ನು ತೆಗೆಯುವಂತೆ ಒತ್ತಡ ಹೇರಿದ್ದಾರೆ. ಇದರ ಜೊತೆಗೆ ಕೊರಳು ಮತ್ತು ಕೈಗಳಿಗೆ ಕಟ್ಟಿದ್ದ ದಾರಗಳನ್ನು ಸಹ ತೆಗೆಸಿದ್ದಾರೆ.
ಬೆಂಗಳೂರು: ‘ಸಿಇಟಿ’ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳ ‘ಜನಿವಾರ’ ತೆಗೆಸಿದ ಹಿನ್ನೆಲೆಯಲ್ಲಿ ವಿವಾದ!
ಕಳೆದ ವರ್ಷದಂತೆ ಈ ವರ್ಷವೂ ‘ಸಿಇಟಿ’ ಪರೀಕ್ಷೆಯ ಸಂದರ್ಭದಲ್ಲಿ ವಿದ್ಯಾರ್ಥಿಗಳ ‘ಜನಿವಾರ’ವನ್ನು ತೆಗೆಸಿದ್ದಕ್ಕಾಗಿ ದೊಡ್ಡ ವಿವಾದ ಉಂಟಾಗಿದೆ. (ಇದು ಪರೀಕ್ಷಾ ಮಂಡಳಿಯ ಹಿಂದೂ ವಿರೋಧಿ ಧೋರಣೆಯನ್ನು ಎತ್ತಿ ತೋರಿಸುತ್ತದೆ! – ಸಂಪಾದಕರು). ಮಡಿವಾಳದ ಕೃಪಾನಿಧಿ ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಗಳ ಜನಿವಾರವನ್ನು ತೆಗೆಸಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿರುವ ಈ ಘಟನೆಯನ್ನು ಖಂಡಿಸಿ ವಿದ್ಯಾರ್ಥಿಗಳ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದು, ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಘಟನೆಯ ನಂತರ ಶಿಕ್ಷಣ ಇಲಾಖೆಯ ಅಧಿಕಾರಿಗಳು ಮತ್ತು ‘ಸಿಇಟಿ’ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪೋಷಕರನ್ನು ಸಮಾಧಾನಪಡಿಸಲು ಪ್ರಯತ್ನಿಸಿದರು. ಆದಾಗ್ಯೂ, ‘ಕೃಪಾನಿಧಿ ಕಾಲೇಜಿನಲ್ಲಿ ಇಂತಹ ಅನೇಕ ಘಟನೆಗಳು ನಡೆದಿವೆ’ ಎಂದು ಆರೋಪಿಸಿದ ಸಂತ್ರಸ್ತ ವಿದ್ಯಾರ್ಥಿಗಳ ಪೋಷಕರು, ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!