ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಅವರ ಅಮೆರಿಕದಲ್ಲಿನ ಹೇಳಿಕೆ

ವಾಷಿಂಗ್ಟನ್ (ಅಮೆರಿಕ) – ಹಿಂದೂಗಳು ಎಂದಿಗೂ ಯಾವುದೇ ದೇಶದ ಮೇಲೆ ಆಕ್ರಮಣ ಮಾಡಿಲ್ಲ. ಹಿಂದೂಗಳು ಎಂದಿಗೂ ಯಾರನ್ನೂ ಗುಲಾಮರನ್ನಾಗಿ ಮಾಡಿಲ್ಲ. ಆದ್ದರಿಂದ ಹಿಂದೂಗಳು ಯಾವುದೇ ವಿಷಯಕ್ಕಾಗಿ ಕ್ಷಮೆಯಾಚಿಸುವ ಅವಶ್ಯಕತೆಯಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಅವರು ಹೇಳಿದ್ದಾರೆ. ಇಲ್ಲಿನ ಹಡ್ಸನ್ ವಿಶ್ವವಿದ್ಯಾಲಯದಲ್ಲಿ ಚರ್ಚೆಯೊಂದರ ಸಂದರ್ಭದಲ್ಲಿ ಅವರು ಮಾತನಾಡುತ್ತಿದ್ದರು.
ಭಾರತೀಯ ಉಪಖಂಡದ ಸಂದರ್ಭದಲ್ಲಿ ಗುರುತು ಮತ್ತು ಪ್ರಾದೇಶಿಕ ಉದ್ವಿಗ್ನತೆಗಳನ್ನು ಸಂಘ ಯಾವ ದೃಷ್ಟಿಕೋನದಿಂದ ನೋಡುತ್ತದೆ? ಎಂಬ ಪ್ರಶ್ನೆಗೆ ಉತ್ತರಿಸುತ್ತಾ ಹೊಸಬಾಳೆ ಅವರು, ಸಂಘದ ದೃಷ್ಟಿಯಲ್ಲಿ ಹಿಂದೂ ಎಂಬುದು ಧಾರ್ಮಿಕವಲ್ಲ, ಅದೊಂದು ಸಾಂಸ್ಕೃತಿಕ ಗುರುತಾಗಿದೆ ಎಂದರು. ಸಂಘವು ಯಾವಾಗಲೂ ಸಾಂಸ್ಕೃತಿಕ ಲೋಕಧರ್ಮ ಮತ್ತು ಮೌಲ್ಯಗಳಿಗೆ ಒತ್ತು ನೀಡಿದೆ, ಇವುಗಳಿಗೆ ಯಾವುದೇ ನಿರ್ದಿಷ್ಟ ಧರ್ಮದೊಂದಿಗೆ ನೇರ ಸಂಬಂಧವಿಲ್ಲ ಎಂದು ಅವರು ಹೇಳಿದರು.
ಸಿಂಧೂ ಜಲ ಒಪ್ಪಂದ; ಪಾಕಿಸ್ತಾನ ತನ್ನ ಅಣು ನೀತಿಯನ್ನು ಬದಲಿಸಿ ಅಣುಬಾಂಬ್ ಬಳಸಬೇಕು! : Bilawal Bhutto
Ford News : ಎಐಗಿಂತ ಮನುಷ್ಯರೇ ಮೇಲು? ಫೋರ್ಡ್ನ ಹೊಸ ಹೆಜ್ಜೆ!
ಬಾಂಗ್ಲಾದೇಶ: ಸೆರೆಮನೆಯಲ್ಲಿರುವ ಚಿನ್ಮಯ್ ಪ್ರಭು ಅವರ ಜೀವಕ್ಕೆ ಅಪಾಯ!
ಅರುಣಾಚಲ ಪ್ರದೇಶದಲ್ಲಿ ಚೀನಾ ಸೇನೆಯ ನುಸುಳುವಿಕೆ ನಡೆದಿಲ್ಲ! – ಭಾರತೀಯ ಸೇನೆಯ ಸ್ಪಷ್ಟನೆ
Dhirendra Krishna Shastri : ರಾಮ ಮಂದಿರ ದಾನ ಕಳ್ಳತನ: ಪಂಡಿತ ಧೀರೇಂದ್ರ ಶಾಸ್ತ್ರಿಯ ಸ್ಫೋಟಕ ಹೇಳಿಕೆ!
‘ಯಾರು ನೀರನ್ನು ತಡೆಯುತ್ತಾರೋ, ಅವರ ಕೈಗಳನ್ನು ಮುರಿಯುತ್ತೇವೆ !’