
ತೆಹ್ರಾನ್ (ಇರಾನ್) – ಇರಾನ್ ಪಾಕಿಸ್ತಾನದ ಗಡಿಯ ಮೇಲೆ ದಾಳಿ ನಡೆಸಿ, ಪಾಕಿಸ್ತಾನ ಬೆಂಬಲಿತ ‘ಜೈಶ್-ಅಲ್-ಅದ್ಲ್’ ಎಂಬ ಭಯೋತ್ಪಾದಕ ಸಂಘಟನೆಯ ನೆಲೆಯನ್ನು ಧ್ವಂಸಗೊಳಿಸಿದೆ. ಈ ದಾಳಿಯಲ್ಲಿ ಹಲವು ಭಯೋತ್ಪಾದಕರು ಸಾವನ್ನಪ್ಪಿದ್ದಾರೆ ಎಂದು ತೆಹ್ರಾನ್ ಮೂಲದ ‘ತಸ್ನಿಮ್’ ಸುದ್ದಿ ಸಂಸ್ಥೆ ವರದಿ ಮಾಡಿದೆ.
‘ಜೈಶ್-ಅಲ್-ಅದ್ಲ್’ ಎಂಬುದು ಸುನ್ನಿ ಉಗ್ರಗಾಮಿ ಸಂಘಟನೆಯಾಗಿದ್ದು, ಇದನ್ನು ೨೦೧೨ರಲ್ಲಿ ಸ್ಥಾಪಿಸಲಾಗಿತ್ತು. ಈ ಭಯೋತ್ಪಾದಕ ಸಂಘಟನೆಯು ಕಳೆದ ಕೆಲವು ವರ್ಷಗಳಿಂದ ಇರಾನ್-ಪಾಕಿಸ್ತಾನ ಗಡಿಯಲ್ಲಿ ಭಯೋತ್ಪಾದಕ ಚಟುವಟಿಕೆಗಳನ್ನು ನಡೆಸುತ್ತಿದೆ. ಈ ಸಂಘಟನೆಯು ಇರಾನಿನ ಭದ್ರತಾ ಪಡೆಗಳ ಮೇಲೆ ಅನೇಕ ಬಾರಿ ದಾಳಿ ನಡೆಸಿ, ಅದರ ಜವಾಬ್ದಾರಿಯನ್ನು ಸಹ ಹೊತ್ತುಕೊಂಡಿದೆ. ಇದೇ ಭಯೋತ್ಪಾದಕ ಸಂಘಟನೆಯು ೨೦೧೬ರಲ್ಲಿ ನಿವೃತ್ತ ಭಾರತೀಯ ನೌಕಾಪಡೆಯ ಅಧಿಕಾರಿ ಕುಲಭೂಷಣ್ ಜಾಧವ್ ಅವರನ್ನು ಅಪಹರಿಸಿ, ಪಾಕಿಸ್ತಾನಕ್ಕೆ ಹಸ್ತಾಂತರಿಸಿತ್ತು ಎಂದು ಇರಾನಿನ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಅರುಣಾಚಲ ಪ್ರದೇಶದಲ್ಲಿ ಚೀನಾ ಸೇನೆಯ ನುಸುಳುವಿಕೆ ನಡೆದಿಲ್ಲ! – ಭಾರತೀಯ ಸೇನೆಯ ಸ್ಪಷ್ಟನೆ
ಶ್ರೀರಾಮ ಮಂದಿರದ ದಾನ ಕಳ್ಳತನದ ದೊಡ್ಡ ಹೆಸರುಗಳನ್ನು ಬಹಿರಂಗಪಡಿಸಿದರೆ, ಅವರು ನನ್ನನ್ನು ಕೊಲ್ಲುವರು! – ಪಂಡಿತ್ ಧೀರೇಂದ್ರಕೃಷ್ಣ ಶಾಸ್ತ್ರಿ
‘ಯಾರು ನೀರನ್ನು ತಡೆಯುತ್ತಾರೋ, ಅವರ ಕೈಗಳನ್ನು ಮುರಿಯುತ್ತೇವೆ !’
ಪಾಕಿಸ್ತಾನವನ್ನು ಮತ್ತೆ ‘ಎಫ್ಎಟಿಎಫ್’ನ ‘ಗ್ರೇ ಲಿಸ್ಟ್’ಗೆ ಸೇರಿಸಲು ಭಾರತದ ಸಿದ್ಧತೆ
ಪಾಕಿಸ್ತಾನದಲ್ಲಿ 125 ವರ್ಷ ಹಳೆಯ ಗುರುದ್ವಾರವನ್ನು ನೆಲಸಮಗೊಳಿಸಲು ಯತ್ನ : Pakistan Gurdwara
ಕರಾಚಿ ದಾಳಿಯ ಹಿಂದೆ ಭಾರತದ ಕೈವಾಡವಿದೆ ಎಂಬ ಆರೋಪವನ್ನು ತಳ್ಳಿಹಾಕಿದ ಭಾರತ! : India rejects Pakistan’s allegation