ಛತ್ರಪತಿ ಶಿವಾಜಿ ಮಹಾರಾಜರನ್ನು ಏಕವಚನದಲ್ಲಿ ಸಂಬೋಧಿಸುವವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ!

ಕೊಲ್ಹಾಪುರ – ಗೋವಿಂದ ಪನ್ಸಾರೆ ಅವರು ಬರೆದ ‘ಶಿವಾಜಿ ಕೋಣ ಹೋತಾ?’ ಪುಸ್ತಕದಲ್ಲಿ ಛತ್ರಪತಿ ಶಿವಾಜಿ ಮಹಾರಾಜರನ್ನು ಏಕವಚನದಲ್ಲಿ ಸಂಬೋಧಿಸುವ ಮೂಲಕ ಅವರಿಗೆ ಅವಮಾನ ಮಾಡಲಾಗಿದೆ. ಅಷ್ಟೇ ಅಲ್ಲದೆ, ಈ ಪುಸ್ತಕದಲ್ಲಿ ಇತಿಹಾಸವನ್ನು ತಿರುಚಿ ಸುಳ್ಳು ಇತಿಹಾಸವನ್ನು ಬಿಂಬಿಸಲು ಅನೇಕ ಘಟನೆಗಳನ್ನು ದಾಖಲಿಸಲಾಗಿದೆ. ಛತ್ರಪತಿ ಶಿವಾಜಿ ಮಹಾರಾಜರ ಪ್ರಖರ, ಉಜ್ವಲ ಮತ್ತು ಪರಾಕ್ರಮಿ ಇತಿಹಾಸವನ್ನು ಜನರ ಮುಂದಿಡುವ ಬದಲು ತಪ್ಪು ಮಾಹಿತಿಯನ್ನು ನೀಡಲಾಗಿದೆ.
🚨 Protest in Kolhapur: Hindutva activists demand an immediate ban on 'Shivaji Kon Hota'? by Govind Pansare.
They also seek criminal action against publishers and institutions for using disrespectful singular references to Chhatrapati Shivaji Maharaj.
📌 Key Demands:
– Register… pic.twitter.com/o2Vz3mOAtm— Sanatan Prabhat (@SanatanPrabhat) April 25, 2026
ಆದ್ದರಿಂದ, ಈ ಪುಸ್ತಕವನ್ನು ಕೂಡಲೇ ನಿಷೇಧಿಸಬೇಕು ಮತ್ತು ಸಂಬಂಧಪಟ್ಟವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ‘ಹಿಂದೂ ರಾಷ್ಟ್ರ ಸಮನ್ವಯ ಸಮಿತಿ’ ವತಿಯಿಂದ ಛತ್ರಪತಿ ಶಿವಾಜಿ ಮಹಾರಾಜ್ ಚೌಕ್‌ನಲ್ಲಿ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಯ ನಂತರ ಪೊಲೀಸ್ ಅಧೀಕ್ಷಕರ ಕಚೇರಿಗೆ ಮನವಿ ಸಲ್ಲಿಸಲಾಯಿತು. ಮನವಿಯನ್ನು ಸ್ವೀಕರಿಸಿದ ನಗರ ಪೊಲೀಸ್ ಉಪಾಧೀಕ್ಷಕಿ ಪ್ರಿಯಾ ಪಾಟೀಲ್ ಮತ್ತು ಅಪರ ಪೊಲೀಸ್ ಅಧೀಕ್ಷಕ ಧೀರಜ್ ಕುಮಾರ್ ಬಚ್ಚು ಅವರು ಈ ಬಗ್ಗೆ ‘ಸೂಕ್ತ ಕ್ರಮ ಕೈಗೊಳ್ಳಲಾಗುವುದು’ ಎಂದು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಶಿವಸೇನೆಯ ಉಪಜಿಲ್ಲಾ ಪ್ರಮುಖ ಶ್ರೀ. ಕಿಶೋರ್ ಘಾಟ್ಗೆ, ಬಿಜೆಪಿಯ ಶ್ರೀ. ಮಹೇಶ್ ಜಾಧವ್, ‘ಹಿಂದೂ ಏಕತಾ ಆಂದೋಲನ’ದ ನಗರಾಧ್ಯಕ್ಷ ಶ್ರೀ. ಗಜಾನನ ತೋಡ್ಕರ್, ‘ಶಿವಶಾಹಿ ಫೌಂಡೇಶನ್’ ಸಂಸ್ಥಾಪಕ ಶ್ರೀ. ಸುನೀಲ್ ಸಾಮಂತ್, ‘ಆರೋಗ್ಯ ಭಾರತಿ’ಯ ವೈದ್ಯೆ ಅಶ್ವಿನಿ ಮಾಳ್ಕರ್ ಮತ್ತು ಸನಾತನ ಸಂಸ್ಥೆಯ ಡಾ. ಮಾನಸಿಂಗ್ ಶಿಂದೆ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು. ಹಿಂದೂ ರಾಷ್ಟ್ರ ಸಮನ್ವಯ ಸಮಿತಿಯ ಶ್ರೀ. ರಾಮಭಾವು ಮೆಥೆ ಅವರು ಈ ಕಾರ್ಯಕ್ರಮವನ್ನು ನಿರ್ವಹಿಸಿದರು.
ಕಳೆದ 24 ಗಂಟೆಗಳಲ್ಲಿ ಲವ್ ಜಿಹಾದ್ನ 4 ಮತ್ತು ಮತಾಂತರದ 2 ಘಟನೆಗಳು ಬೆಳಕಿಗೆ! : Love Jihad
ಹಸುವನ್ನು ರಾಷ್ಟ್ರಮಾತೆ ಎಂದು ಘೋಷಿಸಿ! – ಪೂ. ಕಿಶೋರ್ಶಾಸ್ತ್ರಿ ದವೆ : Declare Cow Mother of Nation
೬೦೦ ಮಿಲಿಯನ್ ಲೀಟರ್ ಕೊಳಚೆ ನೀರನ್ನು ನೇರವಾಗಿ ನದಿಗೆ ಬಿಡುತ್ತಿರುವುದರಿಂದ ಪುಣೆ ನಗರದ ನದಿಗಳು ಮಾಲಿನ್ಯದ ಸುಳಿಗೆ!
ಉತ್ತರ ಪ್ರದೇಶ : ಭಗವಾನ್ ಹನುಮಂತನ ಮೂರ್ತಿ ಧ್ವಂಸ ಪ್ರಕರಣದಲ್ಲಿ ಅಸದ್ ವಿರುದ್ಧ ಆರೋಪ
ಮಹಾರಾಷ್ಟ್ರದಲ್ಲಿ ಸಮಾನ ನಾಗರಿಕ ಸಂಹಿತೆಯ ಕರಡು ಸಿದ್ದಪಡಿಸಲಾಗುವುದು! – ಯೋಗೇಶ್ ಕದಮ್, ಗೃಹ ರಾಜ್ಯ ಸಚಿವರು, ಮಹಾರಾಷ್ಟ್ರ
‘ತ್ರಿವಳಿ ತಲಾಖ್’ ಮತ್ತು ‘ಬಹುಪತ್ನಿತ್ವ’ದ ವಿಷಯವಾಗಿ ಮಹಾರಾಷ್ಟ್ರದ ವಿಧಾನಸಭೆಯಲ್ಲಿ ಗದ್ದಲ