ಸೂರತ್: ಅಪ್ರಾಪ್ತ ಹಿಂದೂ ಬಾಲಕಿಗೆ ಕಿರುಕುಳ ನೀಡಿದ ಕಾಮುಕ ಮತಾಂಧನಿಗೆ ಸಾರ್ವಜನಿಕರಿಂದ ಥಳಿತ!

ಸೂರತ್ (ಗುಜರಾತ್) – ಇಲ್ಲಿನ ಅಲ್ತಾನ್ ಪ್ರದೇಶದಲ್ಲಿ 10ನೇ ತರಗತಿಯಲ್ಲಿ ಓದುತ್ತಿರುವ ಅಪ್ರಾಪ್ತ ಹಿಂದೂ ವಿದ್ಯಾರ್ಥಿನಿಗೆ 39 ವರ್ಷದ ಮಹಮ್ಮದ್ ಅಜೀಜ್ ಇಲಿಯಾಸ್ ಎಂಬಾತ ಕಿರುಕುಳ ನೀಡಿದ ಘಟನೆ ಬೆಳಕಿಗೆ ಬಂದಿದೆ. ಈ ವಿಷಯವು ಕಾಳ್ಗಿಚ್ಚಿನಂತೆ ಹರಡುತ್ತಿದ್ದಂತೆ ಪ್ರದೇಶದಲ್ಲಿ ಉದ್ವಿಗ್ನತೆ ನಿರ್ಮಾಣವಾಯಿತು. ಆಕ್ರೋಶಿತ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಅಲ್ತಾನ್ ಪೊಲೀಸ್ ಠಾಣೆಯ ಮುಂದೆ ಜಮಾಯಿಸಿದರು. ಘಟನೆಯ ಗಂಭೀರತೆಯನ್ನು ಅರಿತ ಪೊಲೀಸರು ತಕ್ಷಣವೇ ಆರೋಪಿಯ ವಿರುದ್ಧ ‘ಪೋಕ್ಸೋ’ (POCSO) ಕಾಯ್ದೆಯಡಿ ಪ್ರಕರಣ ದಾಖಲಿಸಿ ಆತನನ್ನು ಬಂಧಿಸಿದ್ದಾರೆ. ಆಕ್ರೋಶಗೊಂಡ ಸಾರ್ವಜನಿಕರು ಆರೋಪಿಗೆ ಧರ್ಮದೇಟು ನೀಡಿದ್ದಾರೆ ಎಂದು ವರದಿಯಾಗಿದೆ.

ಪೊಲೀಸರು ನೀಡಿದ ಮಾಹಿತಿಯ ಪ್ರಕಾರ, ಬಾರ್ಡೋಲಿ ನಿವಾಸಿಯಾದ ಮಹಮ್ಮದ್ ಅಜೀಜ್ ಇಲಿಯಾಸ್ ರಸ್ತೆಯಲ್ಲಿ ಹೋಗುತ್ತಿದ್ದ ಅಪ್ರಾಪ್ತ ಹಿಂದೂ ವಿದ್ಯಾರ್ಥಿನಿಯ ಕೈ ಹಿಡಿದು ಎಳೆದು ಕಿರುಕುಳ ನೀಡಿದ್ದಾನೆ. ಇದರಿಂದ ಗಾಬರಿಗೊಂಡ ಬಾಲಕಿ ಕಿರುಚಾಡಿದ್ದಾಳೆ. ಈ ಸಂದರ್ಭದಲ್ಲಿ ಸ್ಥಳೀಯರು ತಕ್ಷಣ ಮಧ್ಯಪ್ರವೇಶಿಸಿ ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಪ್ರದೇಶದಲ್ಲಿ ಹೆಚ್ಚುವರಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದ್ದು, ಪೊಲೀಸರು ನಾಗರಿಕರಿಗೆ ಶಾಂತಿ ಕಾಪಾಡುವಂತೆ ಮನವಿ ಮಾಡಿದ್ದಾರೆ. ಈ ಪ್ರಕರಣದ ಬಗ್ಗೆ ಎಲ್ಲಾ ಆಯಾಮಗಳಿಂದ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಸಂಪಾದಕೀಯ ನಿಲುವು

ಲವ್ ಜಿಹಾದ್‌ನ ಹೆಚ್ಚುತ್ತಿರುವ ಪ್ರಕರಣಗಳು ಮತ್ತು ಈ ಬಗ್ಗೆ ಸರಕಾರಿ ವ್ಯವಸ್ಥೆಯ ನಿಷ್ಕ್ರಿಯತೆಯನ್ನು ಗಮನಿಸಿದರೆ, ಹಿಂದೂಗಳು ಈಗ ಜಾಗೃತರಾಗುತ್ತಿದ್ದಾರೆ ಎಂಬುದು ಈ ಘಟನೆಯಿಂದ ಸ್ಪಷ್ಟವಾಗುತ್ತದೆ!