
ಪಂಢರಪುರ – ಲಕ್ಷಾಂತರ ವಾರಕರಿ-ಭಕ್ತರ ಶ್ರದ್ಧಾಕೇಂದ್ರವಾಗಿರುವ ಶ್ರೀ ವಿಠ್ಠಲ-ರುಕ್ಮಿಣಿ ದೇವಸ್ಥಾನದ ಆವರಣದಲ್ಲಿ ಭಕ್ತರಿಗಾಗಿ ನಿರ್ಮಿಸಲಾದ ದರ್ಶನ ಮಂಟಪದ ಶೌಚಾಲಯದಲ್ಲಿ ಮದ್ಯದ ಬಾಟಲಿಗಳು, ಮಾವಾ-ಗುಟ್ಕಾ ಪ್ಯಾಕೆಟ್ ಗಳು ಮತ್ತು ಸಿಗರೇಟ್ ಪ್ಯಾಕೆಟ್ ಗಳು ಪತ್ತೆಯಾಗಿವೆ. ಭಾಜಪದ ಮಾಜಿ ನಗರಾಧ್ಯಕ್ಷ ವಿಕ್ರಮ ಶಿರಸಾಟ್ ಅವರು ಈ ಘಟನೆಯನ್ನು ಬೆಳಕಿಗೆ ತಂದಿದ್ದು, ಈ ಬಗ್ಗೆ ಕೂಲಂಕಷ ತನಿಖೆ ನಡೆಸಿ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ೭ ಅಂತಸ್ತಿನ ದರ್ಶನ ಮಂಟಪದ ನೈರ್ಮಲ್ಯದ ಜವಾಬ್ದಾರಿಯನ್ನು ಬಿ.ವಿ.ಜಿ. ಸಂಸ್ಥೆ ಮತ್ತು ದೇವಸ್ಥಾನ ಸಮಿತಿ ಎರಡೂ ಹೊಂದಿದ್ದು, ಈ ಇಬ್ಬರ ನಿರ್ಲಕ್ಷ್ಯದಿಂದಾಗಿ ಭಕ್ತರಲ್ಲಿ ಆಕ್ರೋಶ ಭುಗಿಲೆದ್ದಿದೆ.(ಇಂತಹ ಪವಿತ್ರ ಸ್ಥಳದಲ್ಲಿ ಮದ್ಯದ ಬಾಟಲಿಗಳು, ಮಾವಾ-ಗುಟ್ಕಾ ಪ್ಯಾಕೆಟ್ ಗಳು ಮತ್ತು ಸಿಗರೇಟ್ ಪ್ಯಾಕೆಟ್ ಗಳು ಕಂಡುಬರುವುದು ಅತ್ಯಂತ ಗಂಭೀರ ವಿಷಯವಾಗಿದ್ದು, ಸಂಬಂಧಪಟ್ಟವರ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳುವುದು ಅಪೇಕ್ಷಿತವಾಗಿದೆ! – ಸಂಪಾದಕರು)
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!