ಬಂಗಾಲದಲ್ಲಿ ಎರಡನೇ ಹಂತದ ಮತದಾನಕ್ಕೂ ಮುನ್ನ ನಡೆದ ಘಟನೆ

ಕೊಲಕಾತಾ (ಬಂಗಾಲ) – ಬಂಗಾಲ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಹಿಂಸಾಚಾರದ ದೊಡ್ಡ ಸಂಚೊಂದು ಬಯಲಾಗಿದೆ. ರಾಜ್ಯದ ದಕ್ಷಿಣ ೨೪ ಪರಗಣ ಜಿಲ್ಲೆಯ ಭಾಂಗರ್ ನಲ್ಲಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ, ರಫಿಕುಲ್ ಇಸ್ಲಾಂ ಎಂಬ ತೃಣಮೂಲ ಕಾಂಗ್ರೆಸ್ ಕಾರ್ಯಕರ್ತನ ಮನೆಯಿಂದ ೧೦೦ ನಾಡಬಾಂಬ್ ಗಳನ್ನು ಜಪ್ತಿ ಮಾಡಿದ್ದಾರೆ. ಈ ಘಟನೆಯ ನಂತರ ಇಡೀ ಪ್ರದೇಶದಲ್ಲಿ ಉದ್ವಿಗ್ನ ವಾತಾವರಣವಿದ್ದು, ಭದ್ರತೆಯನ್ನು ಬಿಗಿಗೊಳಿಸಲಾಗಿದೆ.
ಚುನಾವಣಾ ಆಯೋಗದ ಕಠಿಣ ನಿಲುವು: ರಾಷ್ಟ್ರೀಯ ತನಿಖಾ ಸಂಸ್ಥೆಯಿಂದ ತನಿಖೆ
ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಚುನಾವಣಾ ಆಯೋಗವು ಕಠಿಣ ನಿಲುವು ತಳೆದಿದೆ. ಆಯೋಗದ ಅಧಿಕಾರಿಯೊಬ್ಬರು ಸ್ಪಷ್ಟಪಡಿಸಿರುವಂತೆ, ಕೊಲಕಾತಾ ಪೊಲೀಸ್ ಆಯುಕ್ತರಿಂದ ಹಿಡಿದು ಇತರ ಹಿರಿಯ ಅಧಿಕಾರಿಗಳವರೆಗೆ ಎಲ್ಲರಿಗೂ ಎಚ್ಚರಿಕೆ ನೀಡಲಾಗಿದೆ. ಯಾವುದೇ ಪ್ರದೇಶದಲ್ಲಿ ಸ್ಫೋಟಕಗಳು ಅಥವಾ ಬೆದರಿಕೆ ಹಾಕುವ ಪ್ರಕರಣಗಳು ಕಂಡುಬಂದಲ್ಲಿ, ಸಂಬಂಧಿತ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಅಲ್ಲದೆ, ಬಾಂಬ್ ತಯಾರಿಸುವವರನ್ನು ಬಂಧಿಸಲು ವಿಶೇಷ ಕಾರ್ಯಾಚರಣೆ ನಡೆಸುವಂತೆ ಬಂಗಾಲ ಪೊಲೀಸರಿಗೆ ಚುನಾವಣಾ ಆಯೋಗವು ನಿರ್ದೇಶನ ನೀಡಿದೆ. ವಿಶೇಷವೆಂದರೆ, ಬಾಂಬ್ ತಯಾರಿಕೆಗೆ ಸಂಬಂಧಿಸಿದ ಎಲ್ಲಾ ಪ್ರಕರಣಗಳ ತನಿಖೆಯನ್ನು ಈಗ ರಾಷ್ಟ್ರೀಯ ತನಿಖಾ ಸಂಸ್ಥೆಯು (ಎನ್‌ಐಎ) ನಡೆಸಲಿದೆ.
೧೫ ಸ್ಥಳಗಳ ಮೇಲೆ ಪೊಲೀಸರ ದಾಳಿ: ೪ ಮುಸ್ಲಿಮರ ಬಂಧನ
ಬಾಂಬ್ ಗಳು ಪತ್ತೆಯಾದ ನಂತರ ಪೊಲೀಸರು ಕಾರ್ಯಾಚರಣೆ ನಡೆಸಿ ಸುಜಾವುದ್ದೀನ್ ಎಂಬಾತನನ್ನು ಬಂಧಿಸಿದ್ದಾರೆ. ಸುಜಾವುದ್ದೀನ್ ಬೇಡಿಕೆಗೆ ಅನುಗುಣವಾಗಿ ನಾಡಬಾಂಬ್ ಗಳನ್ನು ತಯಾರಿಸಿ ಕೊಡುತ್ತಿದ್ದನು. ಈ ಕೃತ್ಯದಲ್ಲಿ ತನ್ನ ತಂದೆ ಸಯೀದ್ ಅಲಿ, ಅಬ್ದುಲ್ ಹಲೀಮ್ ಮತ್ತು ಇತರರು ಭಾಗಿಯಾಗಿದ್ದಾರೆ ಎಂಬ ಮಾಹಿತಿಯನ್ನು ಸುಜಾವುದ್ದೀನ್ ನೀಡಿದ್ದಾನೆ. ಪೊಲೀಸರು ಈ ಸಂಬಂಧ ಮೊಕದ್ದಮೆ ದಾಖಲಿಸಿಕೊಂಡಿದ್ದು, ಉಳಿದ ಆರೋಪಿಗಳಿಗಾಗಿ ಶೋಧ ನಡೆಸುತ್ತಿದ್ದಾರೆ. ಪೊಲೀಸರ ಪ್ರಕಾರ, ಈ ಪ್ರದೇಶದಲ್ಲಿ ಸಂಘಟಿತ ಜಾಲವೊಂದು ಸಕ್ರಿಯವಾಗಿರುವ ಸಾಧ್ಯತೆಯಿದೆ. ಪೊಲೀಸರು ನಂತರ ಚೋಟಾ ಬಾಂಕ್ರಿ ಎಂಬಲ್ಲಿ ದಾಳಿ ನಡೆಸಿ ೫ ನಾಡಬಾಂಬ್ ಗಳನ್ನು ಜಪ್ತಿ ಮಾಡಿದರು. ಬಾಂಬ್ ಗಳನ್ನು ವಶಪಡಿಸಿಕೊಂಡ ನಂತರ ಬಾಂಬ್ ಪತ್ತೆ ಮತ್ತು ನಿಷ್ಕ್ರಿಯ ದಳವನ್ನು ಕರೆಸಿ ಅವುಗಳನ್ನು ಸುರಕ್ಷಿತವಾಗಿ ನಿಷ್ಕ್ರಿಯಗೊಳಿಸಲಾಯಿತು.
ಈ ಹಿಂದೆ ಮಾರ್ಚ್ ತಿಂಗಳಲ್ಲಿ ಬಾಂಬ್ ತಯಾರಿಸುವಾಗ ಸಂಭವಿಸಿದ ಸ್ಫೋಟದಲ್ಲಿ ಒಬ್ಬ ಮೃತಪಟ್ಟಿದ್ದನು ಮತ್ತು ೩ ಜನರು ಗಾಯಗೊಂಡಿದ್ದರು.
ಜಗತದಲ್ ಹಿಂಸಾಚಾರ ಪ್ರಕರಣದಲ್ಲಿಯೂ ತೃಣಮೂಲ ಕಾಂಗ್ರೆಸ್ಸಿನ ೪ ಮಂದಿಯ ಬಂಧನ
ಉತ್ತರ ೨೪ ಪರಗಣ ಜಿಲ್ಲೆಯ ಜಗತದಲ್ ನಲ್ಲಿ ಇತ್ತೀಚೆಗೆ ನಡೆದ ಹಿಂಸಾಚಾರದ ನಂತರ ಪೊಲೀಸರು ೧೫ ಮನೆಗಳ ಮೇಲೆ ದಾಳಿ ನಡೆಸಿ ೪ ಜನರನ್ನು ಬಂಧಿಸಿದ್ದಾರೆ. ಕೌಶಿಕ ದಾಸ್, ಸಿಕಂದರ ಪ್ರಸಾದ್, ಗೋಪಾಲ ರಾವತ್ ಮತ್ತು ಶ್ಯಾಮದೇವ ಶಾ ಎಂಬ ಹೆಸರಿನ ಇವರು ತೃಣಮೂಲ ಕಾಂಗ್ರೆಸ್ಸಿಗೆ ಸಂಬಂಧಿಸಿದವರೆಂದು ಹೇಳಲಾಗುತ್ತಿದೆ, ಉಳಿದ ಆರೋಪಿಗಳು ಇನ್ನೂ ತಲೆಮರೆಸಿಕೊಂಡಿದ್ದಾರೆ.
ಮಹಿಳೆಯ ಎದೆಗೆ ಸ್ಪರ್ಶಿಸುವುದು ಅತ್ಯಾಚಾರದ ಪ್ರಯತ್ನವಲ್ಲ! – ಉಚ್ಚ ನ್ಯಾಯಾಲಯ : Attempt to Rape
ಅಮರಕಂಟಕ (ಮಧ್ಯಪ್ರದೇಶ)ಇಲ್ಲಿನ ನರ್ಮದಾ ಉಗಮ ದೇವಸ್ಥಾನದ ಚಿನ್ನ ಮತ್ತು ಬೆಳ್ಳಿ ನಾಪತ್ತೆ! : Amarkantak Temple Donation Scam
ಬೆಂಗಳೂರಿನಲ್ಲಿ ದೇಶದ ಮೊದಲ ‘ಎಐ’ ವಿಶ್ವವಿದ್ಯಾಲಯ ಆರಂಭ ! : Karnataka AI University
ಗುಜರಾತ್ ನ ಪ್ರಸಿದ್ಧ ಶಕ್ತಿಪೀಠ ಅಂಬಾಜಿ ದೇವಸ್ಥಾನದಲ್ಲೂ ನೋಟು ಎಣಿಕೆಯ ಸಮಯದಲ್ಲಿ ೨ ತಿಂಗಳ ಹಿಂದೆ ಕಳ್ಳತನ ನಡೆದಿರುವುದು ಬಹಿರಂಗ ! : Ambaji Temple Donation Theft
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
“ನಾನು ಛತ್ರಪತಿ ಶಿವಾಜಿ ಮಹಾರಾಜರ ಅನುಯಾಯಿಯಾಗಿದ್ದು ರಣರಂಗ ಬಿಟ್ಟು ಓಡಿಹೋಗುವವನಲ್ಲ!”