ತನಿಖೆಯಲ್ಲಿ ಕೃಪಾನಿಧಿ ಕಾಲೇಜಿನ ದುಷ್ಕೃತ್ಯ ಬಯಲು!
ಕೃಪಾನಿಧಿ ಕಾಲೇಜಿನಲ್ಲಿ ಇನ್ಮುಂದೆ ಯಾವುದೇ ಸರಕಾರಿ ಪರೀಕ್ಷೆಗಳನ್ನು ನಡೆಸದಂತೆ ಜಿಲ್ಲಾಧಿಕಾರಿಗಳಿಂದ ಸರಕಾರಕ್ಕೆ ಶಿಫಾರಸು

ಬೆಂಗಳೂರು – ನಗರದ ‘ಸಾಮಾನ್ಯ ಪ್ರವೇಶ ಪರೀಕ್ಷೆ’ ಅಥವಾ ‘ಸಿಇಟಿ’ (ಕಾಮನ್ ಎಂಟ್ರೆನ್ಸ್ ಟೆಸ್ಟ್) ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಗಳ ಜನಿವಾರವನ್ನು ತೆಗೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಕೆ.ಎ. ಜಗದೀಶ್ ಅವರು ಸರಕಾರಕ್ಕೆ ವರದಿ ಸಲ್ಲಿಸಿದ್ದಾರೆ. ಇದರಲ್ಲಿ ಕೃಪಾನಿಧಿ ಕಾಲೇಜಿನ ದುಷ್ಕೃತ್ಯ ಬಯಲಾಗಿದೆ. ಸಿಇಟಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳ ಜನಿವಾರವನ್ನು ಉದ್ದೇಶಪೂರ್ವಕವಾಗಿಯೇ ತೆಗೆಸಲಾಗಿದೆ ಎಂಬುದು ತನಿಖೆಯಿಂದ ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಕೃಪಾನಿಧಿ ಕಾಲೇಜನ್ನು ಇನ್ಮುಂದೆ ಪರೀಕ್ಷಾ ಕೇಂದ್ರಗಳ ಪಟ್ಟಿಯಿಂದ ಕೈಬಿಡಬೇಕೆಂದು ವರದಿಯಲ್ಲಿ ಶಿಫಾರಸು ಮಾಡಲಾಗಿದೆ. ‘ಮುಂದಿನ ವರ್ಷದಿಂದ ಈ ಕಾಲೇಜಿನಲ್ಲಿ ಸಿಇಟಿ ಸೇರಿದಂತೆ ಯಾವುದೇ ರೀತಿಯ ಸರಕಾರಿ ಪರೀಕ್ಷೆಗಳನ್ನು ನಡೆಸಬಾರದು’ ಎಂದು ಜಿಲ್ಲಾಧಿಕಾರಿಗಳು ಸರಕಾರಕ್ಕೆ ವರದಿ ನೀಡಿದ್ದಾರೆ.
೧. ಈ ಘಟನೆಗೆ ಸಂಬಂಧಿಸಿದಂತೆ ಸರಕಾರ ಈಗಾಗಲೇ ಕ್ರಮ ಕೈಗೊಂಡಿದೆ. ಪರೀಕ್ಷಾ ಕೇಂದ್ರಕ್ಕೆ ಅಧಿಕಾರಿಗಳನ್ನು ಕಳುಹಿಸಿ ಆಳವಾದ ತನಿಖೆ ನಡೆಸಲಾಗಿದ್ದು, ಕರ್ತವ್ಯ ಲೋಪ ಎಸಗಿದ ಮತ್ತು ವಿದ್ಯಾರ್ಥಿಗಳ ಭಾವನೆಗಳಿಗೆ ಧಕ್ಕೆ ತಂದ ಮೂವರು ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ. ಇಂತಹ ಘಟನೆಗಳು ಮರುಕಳಿಸದಂತೆ ಈ ಕಠಿಣ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
೨. ವಿಶೇಷವೆಂದರೆ ಕಳೆದ ವರ್ಷವೂ ಇದೇ ಕಾಲೇಜಿನಲ್ಲಿ ಇಂತಹದ್ದೇ ಒಂದು ಅಹಿತಕರ ಘಟನೆ ನಡೆದಿತ್ತು ಎಂಬ ಆಘಾತಕಾರಿ ವಿಷಯವೂ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ‘ಕಳೆದ ಬಾರಿಯೂ ಇಂತಹದ್ದೇ ದೂರು ಬಂದಿತ್ತು. ಆದ್ದರಿಂದ ವಿವರವಾದ ತನಿಖಾ ವರದಿಯ ಆಧಾರದ ಮೇಲೆ ಅಂತಹ ಕೇಂದ್ರಗಳಲ್ಲಿ ಪರೀಕ್ಷೆಗಳನ್ನು ನಡೆಸಬಾರದು ಎಂಬ ವರದಿಯನ್ನು ನಾನು ಸರಕಾರಕ್ಕೆ ಸಲ್ಲಿಸಿದ್ದೇನೆ’ ಎಂದು ಜಿಲ್ಲಾಧಿಕಾರಿ ಜಗದೀಶ್ ಮಾಹಿತಿ ನೀಡಿದ್ದಾರೆ.
ಹುಡುಗಿಯ ಮೃತದೇಹವು ಕೆರೆಯಲ್ಲಿ ತೇಲುತ್ತಿದ್ದ ಸ್ಥಿತಿಯಲ್ಲಿ ಪತ್ತೆ!
ಕಳೆದ 24 ಗಂಟೆಗಳಲ್ಲಿ ಲವ್ ಜಿಹಾದ್ನ 4 ಮತ್ತು ಮತಾಂತರದ 2 ಘಟನೆಗಳು ಬೆಳಕಿಗೆ! : Love Jihad
ಹಸುವನ್ನು ರಾಷ್ಟ್ರಮಾತೆ ಎಂದು ಘೋಷಿಸಿ! – ಪೂ. ಕಿಶೋರ್ಶಾಸ್ತ್ರಿ ದವೆ : Declare Cow Mother of Nation
೬೦೦ ಮಿಲಿಯನ್ ಲೀಟರ್ ಕೊಳಚೆ ನೀರನ್ನು ನೇರವಾಗಿ ನದಿಗೆ ಬಿಡುತ್ತಿರುವುದರಿಂದ ಪುಣೆ ನಗರದ ನದಿಗಳು ಮಾಲಿನ್ಯದ ಸುಳಿಗೆ!
ಉತ್ತರ ಪ್ರದೇಶ : ಭಗವಾನ್ ಹನುಮಂತನ ಮೂರ್ತಿ ಧ್ವಂಸ ಪ್ರಕರಣದಲ್ಲಿ ಅಸದ್ ವಿರುದ್ಧ ಆರೋಪ
ಮಹಾರಾಷ್ಟ್ರದಲ್ಲಿ ಸಮಾನ ನಾಗರಿಕ ಸಂಹಿತೆಯ ಕರಡು ಸಿದ್ದಪಡಿಸಲಾಗುವುದು! – ಯೋಗೇಶ್ ಕದಮ್, ಗೃಹ ರಾಜ್ಯ ಸಚಿವರು, ಮಹಾರಾಷ್ಟ್ರ