ಕಾಂಗ್ರೆಸ್ ನಾಯಕನ ವಿರುದ್ಧ ಕ್ರಮಕ್ಕೆ ವಿರೋಧ ಪಕ್ಷಗಳ ಆಗ್ರಹ

ಹಜಾರಿಬಾಗ್ (ಜಾರ್ಖಂಡ್) – ಜಾರ್ಖಂಡ್‌ನ ಹಜಾರಿಬಾಗ್‌ನಲ್ಲಿ ಕಾಂಗ್ರೆಸ್ ನಾಯಕ ಹಾಗೂ ಆರೋಗ್ಯ ಸಚಿವ ಇರ್ಫಾನ್ ಅನ್ಸಾರಿ ಅವರಿಗೆ ಪ್ರಶ್ನೆ ಕೇಳಿದ್ದಕ್ಕಾಗಿ ಅವರ ಬೆಂಬಲಿಗರು ಇಬ್ಬರು ಪತ್ರಕರ್ತರ ಮೇಲೆ ಹಲ್ಲೆ ನಡೆಸಿದ್ದಾರೆ. ಈ ಘಟನೆಯಿಂದ ಪತ್ರಕರ್ತರ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ವಿರೋಧ ಪಕ್ಷದ ನಾಯಕ ಬಾಬುಲಾಲ್ ಮರಾಂಡಿ ಅವರು ಸಚಿವರು ಮತ್ತು ಅವರ ಬೆಂಬಲಿಗರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ಆರೋಗ್ಯ ಸಚಿವ ಇರ್ಫಾನ್ ಅನ್ಸಾರಿ ಅವರ ಸೂಚನೆಯ ಮೇರೆಗೆ ಅವರ ಬೆಂಬಲಿಗರು ‘ನ್ಯೂಸ್ 18 ಜಾರ್ಖಂಡ್’ ಪತ್ರಕರ್ತ ಸುಶಾಂತ್ ಸೋನಿ ಅವರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ವರದಿಯಾಗಿದೆ.
ಸಚಿವ ಅನ್ಸಾರಿ ಅವರು ಅಪಘಾತಕ್ಕೀಡಾದ ಕುಟುಂಬಗಳನ್ನು ಭೇಟಿ ಮಾಡಲು ‘ಶೇಖ್ ಭಿಕಾರಿ ವೈದ್ಯಕೀಯ ಕಾಲೇಜಿ’ಗೆ ತೆರಳಿದ್ದರು. ಸಂತ್ರಸ್ತ ಕುಟುಂಬಗಳನ್ನು ಭೇಟಿ ಮಾಡಿದ ನಂತರ ಸಚಿವರು ಮಾಧ್ಯಮಗಳೊಂದಿಗೆ ಮಾತನಾಡಿದರು. ಈ ಸಂದರ್ಭದಲ್ಲಿ, ಪತ್ರಕರ್ತರು ‘ಚತ್ರಾ’ ಅಪಘಾತದ ಸಂತ್ರಸ್ತ ಕುಟುಂಬಗಳಿಗೆ ಪರಿಹಾರ ನೀಡುವಲ್ಲಿ ಆಗುತ್ತಿರುವ ವಿಳಂಬದ ಬಗ್ಗೆ ಪ್ರಶ್ನೆ ಕೇಳಿದರು. ಈ ಪ್ರಶ್ನೆಯಿಂದ ಸಚಿವರ ಬೆಂಬಲಿಗರು ಕೋಪಗೊಂಡು, ಸುಶಾಂತ್ ಸೋನಿ ಮತ್ತು ಆಶಿಶ್ ಸಾವ್ ಎಂಬ ಪತ್ರಕರ್ತರ ಮೇಲೆ ಅತ್ಯಂತ ನಿರ್ದಯವಾಗಿ ಹಲ್ಲೆ ನಡೆಸಿದ್ದಾರೆ. ಸಚಿವರು ಮತ್ತು ಪೊಲೀಸರ ಸಮ್ಮುಖದಲ್ಲೇ ಈ ಹಲ್ಲೆ ನಡೆದಿದೆ ಎಂದು ಘಟನಾ ಸ್ಥಳದಲ್ಲಿದ್ದ ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ವಿರೋಧ ಪಕ್ಷಗಳಿಂದ ರಾಜ್ಯಾದ್ಯಂತ ಪ್ರತಿಭಟನೆಯ ಎಚ್ಚರಿಕೆ!
ಪತ್ರಕರ್ತರ ಮೇಲಿನ ಹಲ್ಲೆಯನ್ನು ವಿರೋಧ ಪಕ್ಷದ ನಾಯಕ ಬಾಬುಲಾಲ್ ಮರಾಂಡಿ ತೀವ್ರವಾಗಿ ಖಂಡಿಸಿದ್ದಾರೆ. ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರು ಈ ಪ್ರಕರಣದಲ್ಲಿ ತಕ್ಷಣ ಕ್ರಮ ಕೈಗೊಳ್ಳಬೇಕು ಮತ್ತು ಸಂಬಂಧಪಟ್ಟವರ ಮೇಲೆ ಹೊಣೆಗಾರಿಕೆಯನ್ನು ನಿಗದಿಪಡಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ. ಈ ವಿಷಯದಲ್ಲಿ ಕ್ರಮ ಕೈಗೊಳ್ಳದಿದ್ದರೆ ರಾಜ್ಯಾದ್ಯಂತ ಪ್ರತಿಭಟನೆ ನಡೆಸುವುದಾಗಿ ವಿರೋಧ ಪಕ್ಷಗಳು ಎಚ್ಚರಿಕೆ ನೀಡಿವೆ.
ರಾಜಸ್ಥಾನದ ಜೈಲಿನಲ್ಲಿ ಜುಲೈ ೨೨ ರಂದು ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಕೈದಿಗಳ ವಿವಾಹವಾಗಲಿದೆ ! : Rajasthan Jail Marriage
‘ಡಾಬರ್’ ಕಂಪನಿಯ ಮೋಸಂಬಿ ಜ್ಯೂಸ್ ಪ್ಯಾಕ್ ನಲ್ಲಿ ಕಪ್ಪು ಪಾಚಿ !
ರೈಲ್ವೆಯ ವಾತಾನುಕೂಲಿತ ಬೋಗಿಗಳಿಂದ ಚಾದರ, ಹೊದಿಕೆ ಮತ್ತು ಟವೆಲ್ ಕಳ್ಳತನದ ಘಟನೆಗಳಲ್ಲಿ ಏರಿಕೆ!
ಇಂಗ್ಲಿಷ್ ಭಾಷೆಯನ್ನು ಭಾರತದ ಸ್ಥಳೀಯ ಭಾಷೆ ಎಂದು ಪರಿಗಣಿಸಬಹುದೇ? – ಸುಪ್ರೀಂ ಕೋರ್ಟ್ ಪ್ರಶ್ನೆ
ನಮ್ಮ ಮತ್ತು ಭಾರತದ ಡಿ.ಎನ್.ಎ. ಒಂದೇ! – Afghanistan Minister
ಹಿಂದೂಗಳ ತೀವ್ರ ವಿರೋಧದ ನಂತರ ಕಲಾವಿದೆಯಿಂದ ಕ್ಷಮೆಯಾಚನೆ!