ವಿಶ್ವಸಂಸ್ಥೆಯಿಂದ ವರದಿ ಬಿಡುಗಡೆ ಮಾಡಿ ದಾವೆ

ತೆಹ್ರಾನ್ (ಇರಾನ್) – ವಿಶ್ವಸಂಸ್ಥೆಯು ಇರಾನ್ ಕುರಿತು ವರದಿಯೊಂದನ್ನು ಪ್ರಕಟಿಸಿದೆ. ಅದರ ಪ್ರಕಾರ ಇರಾನ್ ಇದುವರೆಗೆ ೨೧ ವ್ಯಕ್ತಿಗಳಿಗೆ ಗಲ್ಲು ಶಿಕ್ಷೆ ಶಿಕ್ಷೆಯನ್ನು ನೀಡಿದ್ದು, ೪ ಸಾವಿರಕ್ಕೂ ಹೆಚ್ಚು ಜನರನ್ನು ಬಂಧಿಸಿದೆ. ಇಸ್ರೇಲ್ ಮತ್ತು ಅಮೆರಿಕಾ ಇವರೊಡನೆ ಸಂಘರ್ಷ ಹಾಗೂ ದೇಶದೊಳಗೆ ನಡೆಯುತ್ತಿರುವ ಪ್ರತಿಭಟನೆಗಳನ್ನು ಗಮನದಲ್ಲಿಟ್ಟುಕೊಂಡು ಈ ಕಠಿಣ ಕ್ರಮ ಕೈಗೊಳ್ಳಲಾಗಿದೆ. ಗಲ್ಲು ಶಿಕ್ಷೆಗೆ ಗುರಿಯಾದವರಲ್ಲಿ ಪ್ರತಿಭಟನಾಕಾರರು, ವಿರೋಧ ಪಕ್ಷದ ಸಂಘಟನೆಗಳ ಸದಸ್ಯರು ಮತ್ತು ಬೇಹುಗಾರಿಕೆಯ ಆರೋಪ ಹೊತ್ತಿರುವ ವ್ಯಕ್ತಿಗಳು ಸೇರಿದ್ದಾರೆ.
🚨 Iran Under Fire: Executions Rise, Thousands Detained
Iran has executed at least 21 people and arrested over 4,000 individuals since the conflict with the US and Israel escalated, according to the United Nations.
The regime is accused of intensifying internal repression;… pic.twitter.com/NiWquuSPOJ
— Sanatan Prabhat (@SanatanPrabhat) May 1, 2026
ವಿಶ್ವಸಂಸ್ಥೆಯ ವರದಿಯಲ್ಲಿ ಇರಾನ್‌ನ ಕಾರಾಗೃಹಗಳಲ್ಲಿ ಕೈದಿಗಳೊಂದಿಗೆ ನಡೆಸಿಕೊಳ್ಳುತ್ತಿರುವ ಅಮಾನವೀಯ ವರ್ತನೆಯ ಬಗ್ಗೆಯೂ ಕಳವಳ ವ್ಯಕ್ತಪಡಿಸಲಾಗಿದೆ. ಕೈದಿಗಳಿಂದ ತಪ್ಪೊಪ್ಪಿಗೆಯನ್ನು ಪಡೆಯಲು ಬಲಪ್ರಯೋಗ ಮಾಡಲಾಗುತ್ತಿದೆ ಎಂಬಂತಹ ಆರೋಪಗಳು ಬೆಳಕಿಗೆ ಬಂದಿವೆ.
ವಿಶ್ವಸಂಸ್ಥೆಯ ತೀವ್ರ ಆಕ್ಷೇಪ!
ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಮುಖ್ಯಸ್ಥ ವೋಲ್ಕರ್ ತುರ್ಕ್ ಅವರು ಈ ಬೆಳವಣಿಗೆಗಳ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇರಾನ್ ಸರಕಾರವು ಗಲ್ಲು ಶಿಕ್ಷೆ ನೀಡುವ ಪ್ರಕ್ರಿಯೆಯನ್ನು ತಕ್ಷಣವೇ ನಿಲ್ಲಿಸಬೇಕು ಮತ್ತು ಅನಗತ್ಯವಾಗಿ ಬಂಧನದಲ್ಲಿರುವ ವ್ಯಕ್ತಿಗಳನ್ನು ಬಿಡುಗಡೆ ಮಾಡಬೇಕು ಎಂದು ಅವರು ಆಗ್ರಹಿಸಿದ್ದಾರೆ.
India-Nepal Border Dispute : ನೇಪಾಳದೊಂದಿಗಿನ ಗಡಿ ವಿವಾದದಲ್ಲಿ ಮೂರನೇ ಪಕ್ಷದ ಅಗತ್ಯವಿಲ್ಲ! – ಭಾರತ
Trump Tariff : ಭಾರತ ಸೇರಿದಂತೆ ಹಲವು ದೇಶಗಳ ಮೇಲೆ ಶೇ. ೧೨.೫% ರಷ್ಟು ಹೆಚ್ಚುವರಿ ಆಮದು ಸುಂಕ ವಿಧಿಸಲಿರುವ ಟ್ರಂಪ್
Japan Illegal Mosque : ಜಪಾನ್ : ಪಾಕಿಸ್ತಾನ ನಿರ್ಮಿಸಿದ ಅಕ್ರಮ ಮಸೀದಿ ಧ್ವಂಸ !
ಫ್ರಾನ್ಸ್ ಸರಕಾರವು ಇನ್ನು ಮುಂದೆ ‘ಶೂನ್ಯ ಸಹಿಷ್ಣುತೆ’ಯ ನೀತಿಯನ್ನು ಅಳವಡಿಸಿಕೊಳ್ಳಲಿ !
ಬಾಂಗ್ಲಾದೇಶದ ವಿರೋಧದಿಂದಾಗಿ ನುಸುಳುಕೋರರನ್ನು ಗಡಿಯಿಂದ ಹಿಂತಿರುಗಿಸುವುದು ಕಷ್ಟವಾಗುತ್ತಿದೆ !
ಟೆಕ್ಸಾಸ್ (ಅಮೆರಿಕ) ನಲ್ಲಿ ಭಾರತದ ರಾಷ್ಟ್ರಧ್ವಜ ಹರಿದ ಅಮೆರಿಕನ್ ಯುವಕ