ಪಾಕಿಸ್ತಾನ-ಇರಾನ್ ಬೆಂಬಲಿಸುವ ಸಾಮಾಜಿಕ ಜಾಲತಾಣಗಳ ಖಾತೆಗಳಿಂದ ವದಂತಿ
ಈ ಹೇಳಿಕೆಗಳು ಆಧಾರರಹಿತವೆಂದ ವಿದೇಶಾಂಗ ಸಚಿವಾಲಯ

ನವ ದೆಹಲಿ – ಬ್ರಿಕ್ಸ್’ ಈ ಒಕ್ಕೂಟವು ಪರಂಪರಾಗತವಾಗಿ ಬ್ರೆಜಿಲ್, ರಷ್ಯಾ, ಭಾರತ, ಚೀನಾ ಮತ್ತು ದಕ್ಷಿಣ ಆಫ್ರಿಕಾ ದೇಶಗಳ ಸಮೂಹವು ಕಳೆದ ಕೆಲವು ವರ್ಷಗಳಲ್ಲಿ ಜಾಗತಿಕ ಮಟ್ಟದಲ್ಲಿ ಅಪಾರ ಪ್ರಾಮುಖ್ಯತೆಯನ್ನು ಗಳಿಸಿದೆ. ಈ ಗುಂಪಿಗೆ ಇತರ ಅನೇಕ ದೇಶಗಳು ಸೇರ್ಪಡೆಗೊಂಡಿದ್ದರೂ, ಈ 5 ದೇಶಗಳ ಆರ್ಥಿಕತೆಯು ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಬೆಳೆಯುತ್ತಿದೆ. ಇಂತಹ ಸಂದರ್ಭದಲ್ಲಿ, ಕೆಲವು ಪಾಕಿಸ್ತಾನ ಮತ್ತು ಇರಾನ್ ಬೆಂಬಲಿಗರು ಭಾರತವು ಅಮೆರಿಕದ ಒತ್ತಡಕ್ಕೆ ಮಣಿದು ‘ಬ್ರಿಕ್ಸ್’ನಿಂದ ಹೊರಬರಲು ನಿರ್ಧರಿಸಿದೆ ಎಂದು ‘ಎಕ್ಸ್’ ನಲ್ಲಿ ಹೇಳಿದ್ದಾರೆ. ಅಷ್ಟೇ ಅಲ್ಲದೆ, ಶೀಘ್ರದಲ್ಲೇ ಪಾಕಿಸ್ತಾನವನ್ನು ಈ ಒಕ್ಕೂಟಕ್ಕೆ ಸೇರಿಸಿಕೊಳ್ಳಲಾಗುವುದು ಎಂದೂ ಸುದ್ದಿ ಹಬ್ಬಿಸಲಾಗಿದೆ. ಈ ವದಂತಿ ತೀವ್ರವಾಗಿ ಹರಡಿದ ನಂತರ, ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಈ ಬಗ್ಗೆ ಹೇಳಿಕೆ ನೀಡಿದ್ದು, ಈ ಎಲ್ಲಾ ಸುದ್ದಿಗಳು ಸುಳ್ಳು ಮತ್ತು ಆಧಾರರಹಿತ ಎಂದು ಸ್ಪಷ್ಟಪಡಿಸಿದೆ.
ಈ ವದಂತಿಗಳಲ್ಲಿ ಕೆಲವು ಖಾತೆಗಳು, ವ್ಯಾಪಾರ ವಹಿವಾಟುಗಳಿಗಾಗಿ ಅಮೆರಿಕನ್ ಡಾಲರ್ ಬದಲಿಗೆ ಸ್ಥಳೀಯ ಕರೆನ್ಸಿಗಳನ್ನು ಬಳಸುವ ‘ಬ್ರಿಕ್ಸ್’ ದೇಶಗಳ ಪ್ರಸ್ತಾವನೆಯನ್ನು ಭಾರತವು ತಿರಸ್ಕರಿಸಿದೆ ಎಂದು ಆರೋಪಿಸಿವೆ. ಇದಲ್ಲದೇ ಪ್ರಧಾನಿ ನರೇಂದ್ರ ಮೋದಿ ಅವರ ನಿಲುವು ಇಸ್ರೇಲ್ ಪರವಾಗಿದೆ ಎಂದು ಬಿಂಬಿಸಲು ಪ್ರಯತ್ನಿಸಿವೆ.
ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಅಧಿಕೃತ ‘ಫ್ಯಾಕ್ಟ್ ಚೆಕ್’ (ಸತ್ಯಾಸತ್ಯತೆ ಪರಿಶೀಲನೆ) ಖಾತೆಯು ತನ್ನ ಅಧಿಕೃತ ಸರಕಾರಿ ಖಾತೆಯ ಮೂಲಕ ಈ ವಾದಗಳು ಸಂಪೂರ್ಣ ಸುಳ್ಳು ಎಂದು ಹೇಳಿದೆ.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!