
ನವದೆಹಲಿ – ಉತ್ತರಪ್ರದೇಶದ ಗಾಜಿಯಾಬಾದ್ ಜಿಲ್ಲೆಯ ದಾಸನಾದಲ್ಲಿರುವ ಪ್ರಸಿದ್ಧ ಸಿದ್ಧಪೀಠ ಶಿವಶಕ್ತಿ ಧಾಮ ಚಂಡಿದೇವಿ ದೇವಸ್ಥಾನದ ಮಹಂತ್ ಯತಿ ಮಾ ಚೇತಾನಂದ ಸರಸ್ವತೀಜಿ ಅವರು ಏಪ್ರಿಲ್ 30 ರಂದು ಮಧ್ಯಾಹ್ನ ದೇಹತ್ಯಾಗ ಮಾಡಿದರು. ಹೃದಯಾಘಾತದಿಂದಾಗಿ ಅವರ ಪ್ರಾಣಜ್ಯೋತಿ ನಂದಿಹೋಯಿತು. ಅವರಿಗೆ 52 ವರ್ಷ ವಯಸ್ಸಾಗಿತ್ತು. ಮೇ 1 ರಂದು ಬೆಳಿಗ್ಗೆ 10 ಗಂಟೆಗೆ ಮೀರತ್ನಲ್ಲಿ ಅವರ ಅಂತ್ಯಯಾತ್ರೆ ನಡೆಸಿ, ಅವರ ಪಾರ್ಥಿವ ಶರೀರದ ಅಂತ್ಯಸಂಸ್ಕಾರ ನೆರವೇರಿಸಲಾಯಿತು. ಅವರು ತಮ್ಮ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಸನಾತನ ಪರಿವಾರವು ಯತಿ ಮಾ ಚೇತಾನಂದ ಸರಸ್ವತೀಜಿ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಭಗವಾನ್ ಶ್ರೀಕೃಷ್ಣನ ಚರಣಗಳಲ್ಲಿ ಪ್ರಾರ್ಥಿಸುತ್ತದೆ.
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
“ನಾನು ಛತ್ರಪತಿ ಶಿವಾಜಿ ಮಹಾರಾಜರ ಅನುಯಾಯಿಯಾಗಿದ್ದು ರಣರಂಗ ಬಿಟ್ಟು ಓಡಿಹೋಗುವವನಲ್ಲ!”
ಭೋಜಶಾಲೆಯ ಪ್ರಕರಣದಲ್ಲಿ ಮಧ್ಯಪ್ರದೇಶ ಉಚ್ಚ ನ್ಯಾಯಾಲಯದ ತೀರ್ಪಿಗೆ ತಡೆ ನೀಡಲು ಸರ್ವೋಚ್ಚ ನ್ಯಾಯಾಲಯದ ನಿರಾಕರಣೆ
ಮೇವು ಹಗರಣ ಪ್ರಕರಣದಲ್ಲಿ ಲಾಲು ಪ್ರಸಾದ್ ಯಾದವ್ ಅವರಿಗೆ ಮಂಜೂರಾದ ಜಾಮೀನು ರದ್ದುಗೊಳಿಸಲು ಸುಪ್ರೀಂ ಕೋರ್ಟ್ ನ ನಿರಾಕರಣೆ
ಭಗವಾನ್ ಜಗನ್ನಾಥರ ರಥಯಾತ್ರೆಗೂ ಮುನ್ನ ಗುಜರಾತ್ನಲ್ಲಿ ೫ ಭಯೋತ್ಪಾದಕರ ಬಂಧನ
ನ್ಯಾಯಾಧೀಶರ ಕುರ್ಚಿಯ ಮೇಲೆ ಮಾಟಮಂತ್ರ ಮಾಡಿದ ಆರೋಪದಡಿ ಮಹಿಳೆಯ ಬಂಧನ