ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯನ್ನು ಸರಿಯಾಗಿ ಬಳಸದಿರುವ ಬಗ್ಗೆ ಟೀಕೆ!

ಪ್ರಯಾಗರಾಜ್ (ಉತ್ತರ ಪ್ರದೇಶ) – ಒಬ್ಬ ವ್ಯಕ್ತಿಯನ್ನು ಆತನ ಜಾತಿಯ ಹೆಸರಿನಿಂದ ಸಂಬೋಧಿಸಿದರೂ, ಅದರ ಹಿಂದೆ ಅವಮಾನಿಸುವ ಅಥವಾ ಬೆದರಿಸುವ ಉದ್ದೇಶವಿಲ್ಲದಿದ್ದರೆ, ಅದನ್ನು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯ ಅಡಿಯಲ್ಲಿ ಅಪರಾಧ ಎಂದು ಪರಿಗಣಿಸಲಾಗುವುದಿಲ್ಲ ಎಂದು ಅಲಹಾಬಾದ್ ಉಚ್ಚ ನ್ಯಾಯಾಲಯವು ಮಹತ್ವದ ತೀರ್ಪು ನೀಡಿದೆ. ಅಮಯ ಪಾಂಡೆ ಮತ್ತು ಇತರರು ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯವು ಈ ನಿರ್ಧಾರವನ್ನು ಪ್ರಕಟಿಸಿದೆ. ಈ ಪ್ರಕರಣದಲ್ಲಿ ಕೆಳ ನ್ಯಾಯಾಲಯವು ನೀಡಿದ್ದ ಸಮನ್ಸ್ ಆದೇಶವನ್ನು ಉಚ್ಚ ನ್ಯಾಯಾಲಯವು ರದ್ದುಗೊಳಿಸಿತು; ಆದರೆ ಭಾರತೀಯ ನ್ಯಾಯ ಸಂಹಿತೆಯ ಅಡಿಯಲ್ಲಿ ವಿಚಾರಣೆಯನ್ನು ಮುಂದುವರಿಸಲು ಅನುಮತಿ ನೀಡಿದೆ.
1. 2019ರಲ್ಲಿ ಅಮಯ ಪಾಂಡೆ ಮತ್ತು ಇತರರ ವಿರುದ್ಧ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿತ್ತು. ಅವರು ದೂರುದಾರರಿಗೆ ಹಲ್ಲೆ ನಡೆಸಿದ್ದಾರೆ ಮತ್ತು ಜಾತಿ ನಿಂದನೆ ಮಾಡಿದ್ದಾರೆ ಎಂದು ಆರೋಪಿಸಲಾಗಿತ್ತು.
2. ಆರೋಪಿಗಳ ಪರ ವಕೀಲರು ವಾದ ಮಂಡಿಸಿ, ಈ ಸಂಪೂರ್ಣ ಪ್ರಕರಣವು ವಿರೋಧಾಭಾಸದಿಂದ ಕೂಡಿದ್ದು, ದುರುದ್ದೇಶಪೂರಿತವಾಗಿ ದಾಖಲಿಸಲಾಗಿದೆ ಎಂದು ಹೇಳಿದರು. ದೂರಿನಲ್ಲಿ ಆರಂಭದಲ್ಲಿ ಜಾತಿ ನಿಂದನೆ ಅಥವಾ ಅವಮಾನದ ಬಗ್ಗೆ ಯಾವುದೇ ಉಲ್ಲೇಖವಿರಲಿಲ್ಲ. ಇದು ಕೇವಲ ಮದುವೆಯ ಸಮಾರಂಭವೊಂದರಲ್ಲಿ ನಡೆದ ಸಾಮಾನ್ಯ ಜಗಳ ಮತ್ತು ಹಲ್ಲೆಯ ಪ್ರಕರಣವಾಗಿತ್ತು ಎಂದು ವಾದಿಸಿದರು.
3. ಎರಡೂ ಕಡೆಯ ವಾದಗಳನ್ನು ಆಲಿಸಿದ ನಂತರ ನ್ಯಾಯಾಲಯವು, ಈ ಪ್ರಕರಣದ ಹಿನ್ನೆಲೆಯು ಒಂದು ಖಾಸಗಿ ವಿವಾದಕ್ಕೆ ಸಂಬಂಧಿಸಿದಂತೆ ಕಂಡುಬರುತ್ತದೆ. ಆದ್ದರಿಂದ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯನ್ನು ಇಲ್ಲಿ ಸೂಕ್ತ ಸಂದರ್ಭದಲ್ಲಿ ಬಳಸಲಾಗಿಲ್ಲ ಎಂಬುದು ಸ್ಪಷ್ಟವಾಗುತ್ತದೆ ಎಂದು ಹೇಳಿತು.
4. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯನ್ನು ಅನ್ವಯಿಸಲು, ಆರೋಪಿಯು ಉದ್ದೇಶಪೂರ್ವಕವಾಗಿ ಸಂತ್ರಸ್ತನನ್ನು ಅವನ ಜಾತಿಯ ಆಧಾರದ ಮೇಲೆ ಅವಮಾನಿಸಿರಬೇಕು ಅಥವಾ ಬೆದರಿಸಿರಬೇಕು ಎಂಬುದು ಅತ್ಯಗತ್ಯ ಎಂದು ನ್ಯಾಯಾಲಯವು ಸ್ಪಷ್ಟಪಡಿಸಿತು. ಅಲ್ಲದೆ, ಈ ಕೃತ್ಯವು ಸಾರ್ವಜನಿಕ ಸ್ಥಳದಲ್ಲಿ ಅಥವಾ ಜನರ ಸಮ್ಮುಖದಲ್ಲಿ ನಡೆದಿರಬೇಕು ಎಂದು ತಿಳಿಸಿತು.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!