ಪ್ರಯಾಣಿಕನ ಬಂಧನ

ಚೆನ್ನೈ (ತಮಿಳುನಾಡು) – ಇಲ್ಲಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮೇ ೩ ರ ಬೆಳಿಗ್ಗೆ ಏರ್ ಅರೇಬಿಯಾ ವಿಮಾನವು ರನ್‌ವೇ ಮೇಲೆ ಇಳಿಯುತ್ತಿದ್ದಾಗ ಪ್ರಯಾಣಿಕನೊಬ್ಬ ತುರ್ತು ಬಾಗಿಲನ್ನು ತೆರೆದಿದ್ದಾನೆ. ಘಟನೆಯ ನಂತರ ಪೈಲಟ್ ತಕ್ಷಣವೇ ವಿಮಾನವನ್ನು ನಿಲ್ಲಿಸಿ ವಿಮಾನ ನಿಲ್ದಾಣದ ಅಧಿಕಾರಿಗಳಿಗೆ ಮಾಹಿತಿ ನೀಡಿದರು. ಆ ನಂತರ ಭದ್ರತಾ ಪಡೆ, ಬಾಂಬ್ ಪತ್ತೆ ದಳ ಮತ್ತು ಇತರ ಭದ್ರತಾ ಸಂಸ್ಥೆಗಳು ಸ್ಥಳಕ್ಕೆ ಧಾವಿಸಿದವು. ಭದ್ರತಾ ಸಿಬ್ಬಂದಿಗಳು ಆರೋಪಿ ಪ್ರಯಾಣಿಕನನ್ನು ಬಂಧಿಸಿದ್ದಾರೆ. ಮಹಮ್ಮದ್ ಶರೀಫ್ ಮಹಮ್ಮದ್ ನಜ್ಮುದ್ದೀನ್ (ವಯಸ್ಸು ೨೯ ವರ್ಷ) ಬಂಧಿತ ಆರೋಪಿ. ಈತ ತಮಿಳುನಾಡಿನ ಪುದುಕ್ಕೊಟ್ಟೈ ನಿವಾಸಿಯಾಗಿದ್ದಾನೆ. ಪ್ರಸ್ತುತ ಈತನ ವಿಚಾರಣೆ ನಡೆಯುತ್ತಿದ್ದು, ಆತನ ಮಾನಸಿಕ ಸ್ಥಿತಿಯನ್ನೂ ಸಹ ತಪಾಸಣೆ ಮಾಡಲಾಗುತ್ತಿದೆ. ಈ ಘಟನೆಯಿಂದಾಗಿ ಸ್ವಲ್ಪ ಸಮಯದವರೆಗೆ ವಿಮಾನ ನಿಲ್ದಾಣದ ಕಾರ್ಯಕಲಾಪಗಳಲ್ಲಿ ವ್ಯತ್ಯಯ ಉಂಟಾಯಿತು. ಈ ವಿಮಾನವು ಶಾರ್ಜಾದಿಂದ ಚೆನ್ನೈಗೆ ಬಂದಿತ್ತು ಮತ್ತು ಇದರಲ್ಲಿ ೨೩೧ ಪ್ರಯಾಣಿಕರಿದ್ದರು.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!