ಕೇಂದ್ರ ಕಾನೂನು ಸಚಿವ ಅರ್ಜುನ ರಾಮ ಮೇಘವಾಲ್ ಅವರಿಂದ ಹಿಂದೂ ಜನಜಾಗೃತಿ ಸಮಿತಿಗೆ ಭರವಸೆ

ರಾಂಚಿ (ಜಾರ್ಖಂಡ) – ನಾಸಿಕ್ (ಮಹಾರಾಷ್ಟ್ರ)ದಲ್ಲಿರುವ ಟಿ.ಸಿ.ಎಸ್. ನಂತಹ ಪ್ರತಿಷ್ಠಿತ ಬಹುರಾಷ್ಟ್ರೀಯ ಸಂಸ್ಥೆಯಲ್ಲಿ ಅನೇಕ ಹಿಂದೂ ಮಹಿಳಾ ಉದ್ಯೋಗಿಗಳ ಲೈಂಗಿಕ ಶೋಷಣೆ, ಮತಾಂತರಕ್ಕಾಗಿ ಒತ್ತಡ, ಬಲವಂತವಾಗಿ ಗೋಮಾಂಸ ತಿನ್ನಿಸುವುದು ಮತ್ತು ನಮಾಜ್ ಮಾಡಲು ಒತ್ತಾಯಿಸುವಂತಹ ಭಯಾನಕ ಘಟನೆಗಳು ಬೆಳಕಿಗೆ ಬಂದಿವೆ. ಇವು ಕೇವಲ ಒಂದು ಸ್ಥಳಕ್ಕೆ ಸೀಮಿತವಾಗಿಲ್ಲ. ಇದು ದೇಶವ್ಯಾಪಿ ನಡೆಯುತ್ತಿರುವ ಕಾರ್ಪೊರೇಟ್ ಜಿಹಾದ್‌ನ ಭಾಗವಾಗಿರಬಹುದು. ಈ ಗಂಭೀರ ವಿಷಯಕ್ಕೆ ಸಂಬಂಧಿಸಿದಂತೆ ಹಿಂದೂ ಜನಜಾಗೃತಿ ಸಮಿತಿಯ ಈಶಾನ್ಯ ಭಾರತ ರಾಜ್ಯ ಸಮನ್ವಯಕಾರರಾದ ಶ್ರೀ. ಶಂಭು ಗವಾರೆ ಅವರು ಕೇಂದ್ರ ವಿಧಿ ಮತ್ತು ನ್ಯಾಯ ಸಚಿವ (ಸ್ವತಂತ್ರ ಉಸ್ತುವಾರಿ) ಹಾಗೂ ಕೇಂದ್ರ ಸಂಸ್ಕೃತಿ ಮತ್ತು ಸಂಸದೀಯ ಕಾರ್ಯ ಸಚಿವ ಶ್ರೀ. ಅರ್ಜುನ ರಾಮ ಮೇಘವಾಲ್ ಮತ್ತು ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಶ್ರೀಮತಿ ಅನ್ನಪೂರ್ಣ ದೇವಿ ಅವರನ್ನು ಭೇಟಿ ಮಾಡಿದರು.

ಈ ಪ್ರಕರಣದ ತನಿಖೆಗಾಗಿ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಕೇಂದ್ರ ರಕ್ಷಣಾ ರಾಜ್ಯ ಸಚಿವ ಶ್ರೀ. ಸಂಜಯ ಸೇಠ, ವಿಶ್ವ ಹಿಂದೂ ಪರಿಷತ್ತಿನ ಜಾರ್ಖಂಡ ರಾಜ್ಯ ಅಧ್ಯಕ್ಷ ಶ್ರೀ. ಚಂದ್ರಕಾಂತ ರಾಯಪತ, ಸಮಿತಿಯ ಪೂಜಾ ಚೌಹಾಣ ಮತ್ತು ಇತರ ಗಣ್ಯರು ಉಪಸ್ಥಿತರಿದ್ದರು. ಈ ವೇಳೆ ಭರವಸೆ ನೀಡಿದ ಕೇಂದ್ರ ಸಚಿವ ಶ್ರೀ. ಅರ್ಜುನ ಮೇಘವಾಲ್ ಅವರು, ಬಹುರಾಷ್ಟ್ರೀಯ ಸಂಸ್ಥೆಗಳಲ್ಲಿನ ಕಾರ್ಪೊರೇಟ್ ಜಿಹಾದ್ ಮತ್ತು ಮತಾಂತರದ ವಿಷಯಗಳು ಗಂಭೀರವಾಗಿದ್ದು, ಈ ಬಗ್ಗೆ ಕೇಂದ್ರ ಗೃಹ ಸಚಿವರೊಂದಿಗೆ ಚರ್ಚಿಸಲಾಗುವುದು ಎಂದು ತಿಳಿಸಿದರು.
ಇದೇ ವಿಷಯವಾಗಿ ರಾಂಚಿ ಮಹಾನಗರ ಪಾಲಿಕೆಯ ಮೇಯರ್ ರೋಶನಿ ಖಲಖೋ ಮತ್ತು ಉಪಮೇಯರ್ ಶ್ರೀ. ನೀರಜ ಕುಮಾರ್ ಅವರಿಗೂ ಮನವಿ ಸಲ್ಲಿಸಲಾಯಿತು.
ರಾಜಸ್ಥಾನದ ಜೈಲಿನಲ್ಲಿ ಜುಲೈ ೨೨ ರಂದು ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಕೈದಿಗಳ ವಿವಾಹವಾಗಲಿದೆ ! : Rajasthan Jail Marriage
‘ಡಾಬರ್’ ಕಂಪನಿಯ ಮೋಸಂಬಿ ಜ್ಯೂಸ್ ಪ್ಯಾಕ್ ನಲ್ಲಿ ಕಪ್ಪು ಪಾಚಿ !
ರೈಲ್ವೆಯ ವಾತಾನುಕೂಲಿತ ಬೋಗಿಗಳಿಂದ ಚಾದರ, ಹೊದಿಕೆ ಮತ್ತು ಟವೆಲ್ ಕಳ್ಳತನದ ಘಟನೆಗಳಲ್ಲಿ ಏರಿಕೆ!
ಇಂಗ್ಲಿಷ್ ಭಾಷೆಯನ್ನು ಭಾರತದ ಸ್ಥಳೀಯ ಭಾಷೆ ಎಂದು ಪರಿಗಣಿಸಬಹುದೇ? – ಸುಪ್ರೀಂ ಕೋರ್ಟ್ ಪ್ರಶ್ನೆ
ನಮ್ಮ ಮತ್ತು ಭಾರತದ ಡಿ.ಎನ್.ಎ. ಒಂದೇ! – Afghanistan Minister
ಹಿಂದೂಗಳ ತೀವ್ರ ವಿರೋಧದ ನಂತರ ಕಲಾವಿದೆಯಿಂದ ಕ್ಷಮೆಯಾಚನೆ!