(ಪವರ್ ಬ್ಯಾಂಕ್ ಎಂದರೆ ವಿದ್ಯುತ್ ಪೂರೈಕೆ ಲಭ್ಯವಿಲ್ಲದಿದ್ದಾಗ ಉಪಕರಣವನ್ನು ಚಾರ್ಜ್ ಮಾಡಲು ಬಳಸಲಾಗುವ ಸಾಧನ)

ಭಾಗ್ಯನಗರ (ತೆಲಂಗಾಣ) – ಭಾಗ್ಯನಗರದಿಂದ ಚಂಡೀಗಢಕ್ಕೆ ತೆರಳುತ್ತಿದ್ದ ಇಂಡಿಗೋ ಸಂಸ್ಥೆಯ ‘೬ಈ-೧೦೮’ ವಿಮಾನದಲ್ಲಿ ಪ್ರಯಾಣಿಕರೊಬ್ಬರ ಬ್ಯಾಗ್ ನಲ್ಲಿದ್ದ ‘ಪವರ್ ಬ್ಯಾಂಕ್’ ಸ್ಫೋಟಗೊಂಡಿದೆ. ಈ ಘಟನೆಯಲ್ಲಿ ೫ ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ. ವಿಮಾನ ನಿಲ್ದಾಣದಲ್ಲಿ ವಿಮಾನ ನಿಂತಿದ್ದಾಗ ಈ ಘಟನೆ ಸಂಭವಿಸಿದೆ. ಸ್ಫೋಟದ ನಂತರ ಕ್ಯಾಬಿನ್‌ನಲ್ಲಿ ಹೊಗೆ ಹರಡಿತು. ತಕ್ಷಣವೇ ತುರ್ತು ನಿರ್ಗಮನ ದ್ವಾರದ ಮೂಲಕ ಎಲ್ಲಾ ಪ್ರಯಾಣಿಕರನ್ನು ಹೊರಗೆ ತರಲಾಯಿತು. ವಿಮಾನದ ಸಿಬ್ಬಂದಿ ಕೂಡಲೇ ಅಗ್ನಿಶಾಮಕ ಉಪಕರಣಗಳನ್ನು ಬಳಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದರು. ಪೊಲೀಸ್ ಮತ್ತು ವಿಮಾನ ನಿಲ್ದಾಣ ಪ್ರಾಧಿಕಾರವು ಈ ಘಟನೆಯ ತನಿಖೆ ನಡೆಸುತ್ತಿದೆ.
ರಾಜಸ್ಥಾನದ ಜೈಲಿನಲ್ಲಿ ಜುಲೈ ೨೨ ರಂದು ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಕೈದಿಗಳ ವಿವಾಹವಾಗಲಿದೆ ! : Rajasthan Jail Marriage
‘ಡಾಬರ್’ ಕಂಪನಿಯ ಮೋಸಂಬಿ ಜ್ಯೂಸ್ ಪ್ಯಾಕ್ ನಲ್ಲಿ ಕಪ್ಪು ಪಾಚಿ !
ರೈಲ್ವೆಯ ವಾತಾನುಕೂಲಿತ ಬೋಗಿಗಳಿಂದ ಚಾದರ, ಹೊದಿಕೆ ಮತ್ತು ಟವೆಲ್ ಕಳ್ಳತನದ ಘಟನೆಗಳಲ್ಲಿ ಏರಿಕೆ!
ಇಂಗ್ಲಿಷ್ ಭಾಷೆಯನ್ನು ಭಾರತದ ಸ್ಥಳೀಯ ಭಾಷೆ ಎಂದು ಪರಿಗಣಿಸಬಹುದೇ? – ಸುಪ್ರೀಂ ಕೋರ್ಟ್ ಪ್ರಶ್ನೆ
ನಮ್ಮ ಮತ್ತು ಭಾರತದ ಡಿ.ಎನ್.ಎ. ಒಂದೇ! – Afghanistan Minister
ಹಿಂದೂಗಳ ತೀವ್ರ ವಿರೋಧದ ನಂತರ ಕಲಾವಿದೆಯಿಂದ ಕ್ಷಮೆಯಾಚನೆ!