ರಾಷ್ಟ್ರಪತಿಗಳು ಈವರೆಗೆ ರಾಜೀನಾಮೆಯನ್ನು ಅಂಗೀಕರಿಸಿಲ್ಲ!

ಪ್ರಯಾಗ್‌ರಾಜ್ (ಉತ್ತರ ಪ್ರದೇಶ) – ಅಲಹಾಬಾದ್ ಹೈಕೋರ್ಟ್‌ನ ನ್ಯಾಯಾಧೀಶ ಹುದ್ದೆಗೆ ರಾಜೀನಾಮೆ ನೀಡಿದ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರು ಇನ್ನೂ ನ್ಯಾಯಾಧೀಶರಾಗಿಯೇ ಉಳಿದಿದ್ದಾರೆ. ಅವರು ಏಪ್ರಿಲ್ 9, 2026 ರಂದು ತಮ್ಮ ರಾಜೀನಾಮೆಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಕಳುಹಿಸಿದ್ದರು; ಆದರೆ ಈವರೆಗೆ ಅದನ್ನು ಅಂಗೀಕರಿಸಲಾಗಿಲ್ಲ. ಈ ಕಾರಣದಿಂದಾಗಿ, ರಾಜೀನಾಮೆ ನೀಡಿ ಒಂದು ತಿಂಗಳು ಕಳೆದರೂ ಹೈಕೋರ್ಟ್‌ನ ವೆಬ್‌ಸೈಟ್‌ನಲ್ಲಿ ಅವರ ಹೆಸರು ಹಾಗೆಯೇ ಉಳಿದಿದೆ. ತಮ್ಮ ರಾಜೀನಾಮೆ ಪತ್ರದಲ್ಲಿ ಯಶವಂತ್ ವರ್ಮಾ ಅವರು, ನಾನು ತಕ್ಷಣವೇ ನನ್ನ ಹುದ್ದೆಯನ್ನು ತ್ಯಜಿಸುತ್ತಿದ್ದೇನೆ ಎಂದು ತಿಳಿಸಿದ್ದರು.
⚖️ Justice Yashwant Varma Resignation Row Deepens: Still Officially a Judge Despite Quitting
Justice Yashwant Varma’s resignation from the Allahabad High Court was sent to President Droupadi Murmu on April 9, 2026, but has still not been accepted. As a result, his name remains… pic.twitter.com/UJNwoMI0DE
— Sanatan Prabhat (@SanatanPrabhat) May 7, 2026
ನ್ಯಾಯಾಧೀಶರ ರಾಜೀನಾಮೆ ಕುರಿತು ನ್ಯಾಯಾಲಯ ಏನು ಹೇಳುತ್ತದೆ?
ಸಂವಿಧಾನದ ಕಲಂ 217 (1) ರ ಪ್ರಕಾರ, ಒಬ್ಬ ನ್ಯಾಯಾಧೀಶರು ಸ್ವತಃ ಸಹಿ ಮಾಡಿದ ರಾಜೀನಾಮೆ ಪತ್ರವನ್ನು ರಾಷ್ಟ್ರಪತಿಗಳಿಗೆ ಕಳುಹಿಸಿದಾಗ, ಅವರ ರಾಜೀನಾಮೆಯನ್ನು ಮಾನ್ಯವೆಂದು ಪರಿಗಣಿಸಲಾಗುತ್ತದೆ. ಫೆಬ್ರವರಿ 15, 1978 ರಂದು ಗೋಪಾಲ್‌ಚಂದ್ರ ಮಿಶ್ರಾ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್, ನ್ಯಾಯಾಧೀಶರ ರಾಜೀನಾಮೆ ಹೇಗೆ ಜಾರಿಗೆ ಬರುತ್ತದೆ ಎಂಬುದನ್ನು ವಿವರಿಸಿತ್ತು. ನ್ಯಾಯಪೀಠವು, ಯಾವಾಗ ಒಬ್ಬ ನ್ಯಾಯಾಧೀಶರು ರಾಷ್ಟ್ರಪತಿಗಳಿಗೆ ರಾಜೀನಾಮೆ ಕಳುಹಿಸುತ್ತಾರೋ, ಆಗ ಅವರು ಇನ್ನು ಮುಂದೆ ನ್ಯಾಯಾಧೀಶರಾಗಿ ಉಳಿದಿಲ್ಲ ಎಂದು ಪರಿಗಣಿಸಲಾಗುತ್ತದೆ. ಆದರೆ, ನ್ಯಾಯಾಧೀಶರು ಭವಿಷ್ಯದ ಯಾವುದಾದರೂ ದಿನಾಂಕವನ್ನು ರಾಜೀನಾಮೆ ಪತ್ರದಲ್ಲಿ ಉಲ್ಲೇಖಿಸಿದ್ದರೆ, ಆ ದಿನಾಂಕ ಬರುವ ಮೊದಲು ಅವರು ತಮ್ಮ ರಾಜೀನಾಮೆಯನ್ನು ಹಿಂಪಡೆಯಬಹುದು ಎಂದು ಹೇಳಿತ್ತು. ಆದಾಗ್ಯೂ, ನ್ಯಾಯಮೂರ್ತಿ ಯಶವಂತ್ ವರ್ಮಾ ಅವರ ಪ್ರಕರಣದಲ್ಲಿ ಅವರು ತಕ್ಷಣವೇ ಜಾರಿಗೆ ಬರುವಂತೆ ರಾಜೀನಾಮೆ ನೀಡಿದ್ದಾರೆ.
ನ್ಯಾಯಮೂರ್ತಿ ಯಶವಂತ್ ವರ್ಮಾ ಅವರ ಪ್ರಕರಣವೇನು?
ನ್ಯಾಯಮೂರ್ತಿ ವರ್ಮಾ ಅವರ ದೆಹಲಿಯ ಅಧಿಕೃತ ನಿವಾಸದಲ್ಲಿ ಸುಟ್ಟ ನೋಟುಗಳು ಮತ್ತು ನಗದು ಪತ್ತೆಯಾದ ಪ್ರಕರಣ ಬೆಳಕಿಗೆ ಬಂದಿತ್ತು. ಇದರ ಬೆನ್ನಲ್ಲೇ ಅವರನ್ನು ಹುದ್ದೆಯಿಂದ ಕೆಳಗಿಳಿಸಲು ಮಹಾಭಿಯೋಗ ಪ್ರಕ್ರಿಯೆಯನ್ನು ನಡೆಸುವ ಕುರಿತು ಚರ್ಚೆಗಳು ಆರಂಭವಾಗಿದ್ದವು.
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ